AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5.87 ಕೋಟಿ ರೂ. ಮೌಲ್ಯದ 5.8 ಕೆಜಿ MDMA ಡ್ರಗ್ಸ್ ಜಪ್ತಿ, ಮೂವರು ಆರೋಪಿಗಳ ಬಂಧನ

ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬೆಂಗಳೂರು ಪೊಲೀಸರು 5.87 ಕೋಟಿ ರೂ. ಮೌಲ್ಯದ 5.8 ಕೆಜಿ MDMA ಡ್ರಗ್ಸ್ ಜಪ್ತಿ ಮಾಡಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆ ಮೂಲಕ ದೆಹಲಿಯಿಂದ ಬೆಂಗಳೂರಿಗೆ ಮಾದಕ ವಸ್ತು ಸಾಗಿಸುತ್ತಿದ್ದ ಜಾಲವನ್ನು ಖಾಕಿ ಭೆದಿಸಿದ್ದು, ಮಾದಕ ವಸ್ತುಗಳನ್ನು ಆರೋಪಿಗಳು ಯಾರಿಗೆ ತಲುಪಿಸಬೇಕಿತ್ತು ಎಂಬ ಬಗ್ಗೆ ತನಿಖೆ ಮುಂದುವರಿಸಿದೆ.

5.87 ಕೋಟಿ ರೂ. ಮೌಲ್ಯದ 5.8 ಕೆಜಿ MDMA ಡ್ರಗ್ಸ್ ಜಪ್ತಿ, ಮೂವರು ಆರೋಪಿಗಳ ಬಂಧನ
5.87 ಕೋಟಿ ರೂ. ಮೌಲ್ಯದ 5.8 ಕೆಜಿ MDMA ಡ್ರಗ್ಸ್ ಜಪ್ತಿImage Credit source: Bengaluru City Police
ಪ್ರಸನ್ನ ಹೆಗಡೆ
|

Updated on: Nov 26, 2026 | 7:56 AM

Share

ಬೆಂಗಳೂರು, ನವೆಂಬರ್​​ 26: ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಬೆಂಗಳೂರು ಪೊಲೀಸರು ಡ್ರಗ್ಸ್ ಮಾರಾಟ ಜಾಲವನ್ನು ಭೇದಿಸಿದ್ದು, 5.87 ಕೋಟಿ ರೂಪಾಯಿ ಮೌಲ್ಯದ 5.87 ಕೆಜಿ MDMA ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೆಂಚೇನಹಳ್ಳಿ ಬಳಿ ಕೆಲವರು ಮಾದಕ ವಸ್ತುಗಳನ್ನು ಮಾರಾಟ ಮಾಡಲು ಕಾಯುತ್ತಿದ್ದಾರೆ ಎಂಬ ಮಾಹಿತಿ ಯಲಹಂಕ ನ್ಯೂಟೌನ್ ಪೊಲೀಸರಿಗೆ ಲಭಿಸಿದ್ದು, ಅದರ ಆಧಾರದಲ್ಲಿ ತಕ್ಷಣ ಪೊಲೀಸರು ಸ್ಥಳಕ್ಕೆ ತೆರಳಿ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

5.72 ಕೆಜಿ MDMA ವಶ

ಗಂಗೊಂಡನಹಳ್ಳಿಯ 28 ವರ್ಷದ ಕಾರು ಮೆಕ್ಯಾನಿಕ್ ಇಮ್ರಾನ್ ಪಾಷಾ ಹಾಗೂ ಹೊಸಕೋಟೆಯ 27 ವರ್ಷದ ವಿಚ್ಛೇದಿತ ಮಹಿಳೆ ಆಯೇಷಾ ಸಿದ್ದಿಕಿ ಬಂಧಿತರು. ಆರೋಪಿಗಳಿಂದ 5.72 ಕೆಜಿ MDMA ವಶಪಡಿಸಿಕೊಳ್ಳಲಾಗಿದೆ. ವಿಚಾರಣೆ ವೇಳೆ, ನವದೆಹಲಿಯಿಂದ ಮಾದಕ ವಸ್ತುಗಳ ಪಾರ್ಸೆಲ್ ತಂದುಕೊಟ್ಟರೆ 1 ಲಕ್ಷ ರೂಪಾಯಿ ನೀಡುವುದಾಗಿ ಇವರಿಗೆ ತಿಳಿಸಲಾಗಿತ್ತು ಎಂಬುದು ತಿಳಿದುಬಂದಿದೆ. ಅದರಂತೆ ಇಬ್ಬರೂ ವಿಮಾನದ ಮೂಲಕ ನವದೆಹಲಿಗೆ ತೆರಳಿ, ಅಲ್ಲಿನ ಪೂರೈಕೆದಾರರನ್ನು ಭೇಟಿಯಾಗಿ ಮಾದಕ ವಸ್ತುಗಳನ್ನು ಪಡೆದುಕೊಂಡಿದ್ದರು. ಬಳಿಕ ಹರಿಯಾಣ ನೋಂದಣಿ ಹೊಂದಿದ್ದ ಟ್ಯಾಕ್ಸಿಯಲ್ಲಿ ಬೆಂಗಳೂರಿಗೆ ತಂದಿದ್ದರು ಎಂದು ತಿಳಿದುಬಂದಿದೆ. ಈ ಇಬ್ಬರಿಂದ ಡ್ರಗ್ಸ್ ಖರೀದಿಸಲು ಸೂಚನೆ ನೀಡಿದವರು ಯಾರು? ಹಾಗೂ ಮಾದಕ ವಸ್ತುಗಳನ್ನು ಯಾರಿಗೆ ತಲುಪಿಸಬೇಕಿತ್ತು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ನಕಲಿ ಔಷಧಿ ಜಾಲದ ಕಿಂಗ್‌ಪಿನ್ ಪ್ರಶಾಂತ್ ಬಂಧಿಸಿದ ದೆಹಲಿ ಪೊಲೀಸರು; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು!

ಇನ್ನೊಂದು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಭಾರತಿನಗರ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿ, 150.43 ಗ್ರಾಂ MDMA ವಶಪಡಿಸಿಕೊಂಡಿದ್ದಾರೆ. ಹೆಚ್ಚಿನ ಹಣ ಸಂಪಾದಿಸುವ ಉದ್ದೇಶದಿಂದ ಕಡಿಮೆ ಬೆಲೆಗೆ ನಿಷೇಧಿತ ಮಾದಕ ವಸ್ತುಗಳನ್ನು ಖರೀದಿಸಿ, ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದೆ ಎಂದು ವಿಚಾರಣೆ ವೇಳೆ ಆರೋಪಿ ಒಪ್ಪಿಕೊಂಡಿದ್ದಾನೆ. ಎರಡೂ ಪ್ರಕರಣಗಳಲ್ಲಿ ಒಟ್ಟು ಸುಮಾರು 5 ಕೆಜಿ 870 ಗ್ರಾಂ ನಿಷೇಧಿತ MDMA ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದಾರೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More