ಬೆಂಗಳೂರು ಮಹಾಲಕ್ಷ್ಮೀ ಕೊಲೆ ಆರೋಪಿಯ ಸುಳಿವು ನೀಡಿದ ಪೊಲೀಸ್​ ಕಮಿಷನರ್

Bengaluru Mahalaxmi Murder Case: ದೆಹಲಿ ಶ್ರದ್ಧಾ ಕೊಲೆ ಮಾದರಿಯಲ್ಲಿ ಬೆಂಗಳೂರಿನಲ್ಲೂ ನಡೆದಿದೆ. ಬೆಂಗಳೂರು ನಗರದ ವೈಯಾಲಿಕಾವಲ್‌ನಲ್ಲಿ ವಾಸವಿದ್ದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ, 30ಕ್ಕೂ ಹೆಚ್ಚು ತುಂಡು ಮಾಡಿ ಪ್ರೀಜರ್​ನಲ್ಲಿ ತುಂಬಲಾಗಿತ್ತು. ಮಹಾಲಕ್ಷ್ಮೀಯನ್ನು ಕೊಲೆ ಮಾಡಿದ ಆರೋಪಿಯ ಸುಳಿವು ಸಿಕ್ಕಿದೆ.

Follow us
Jagadisha B
| Updated By: ವಿವೇಕ ಬಿರಾದಾರ

Updated on:Sep 23, 2024 | 2:55 PM

ಬೆಂಗಳೂರು, ಸೆಪ್ಟೆಂಬರ್​ 23: ಬೆಂಗಳೂರು ವೈಯಾಲಿಕಾವಲ್‌ ನಿವಾಸಿ ಮಹಾಲಕ್ಷ್ಮೀ ಕೊಲೆ (Bengaluru Mahalaxmi Murder Case)​ ಪ್ರಕರಣದ ಆರೋಪಿಯ ಗುರುತು ಪತ್ತೆಯಾಗಿದೆ. ಆರೋಪಿಗಾಗಿ ಹುಡುಕಾಟ ಮುಂದುವರೆದಿದ್ದು, ಶೀಘ್ರದಲ್ಲಿ ಬಂಧಿಸುತ್ತೇವೆ. ಆರೋಪಿ ಹೊರ ರಾಜ್ಯದವನು ಎಂಬ ಮಾಹಿತಿ ಲಭ್ಯವಾಗಿದೆ. ಆತ ಬೆಂಗಳೂರಿನಲ್ಲಿ ವಾಸವಾಗಿದ್ದ ಎಂಬುವುದು ತಿಳಿದುಬಂದಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಗಣೇಶಮೂರ್ತಿ ಮೆರವಣಿಗೆ ವೇಳೆ ಗಲಾಟೆ ನಡೆದಿಲ್ಲ. ಯಾವುದೇ ಅಹಿತಕರ ಘಟನೆಯಾಗಿಲ್ಲ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಡ್ರಗ್ಸ್​ ಸರಬರಾಜು ಮಾಡುತ್ತಿದ್ದ ಓರ್ವ ವಿದೇಶಿ ಪ್ರಜೆ ಮತ್ತು ಆತನ ಸಂಪರ್ಕದಲ್ಲಿದ್ದ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1.5 ಕೋಟಿ ಮೌಲ್ಯದ ಒಂದು ಕೆಜಿ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಈಗಾಗಲೇ ತನಿಖೆ ಮುಂದುವರೆದಿದೆ. ಆರೋಪಿ ಮೂಲತಃ ಆಫ್ರಿಕಾ ದೇಶದವನಾಗಿದ್ದು, 2018ರಲ್ಲಿ ಭಾರತಕ್ಕೆ ಬಂಧಿದ್ದನು. ಆತನ ಜೊತೆಗೆ ಸಿಕ್ಕ ಮಹಿಳಾ ಆರೋಪಿ ಕೂಡ ಕೃತ್ಯದಲ್ಲಿ ಭಾಗಿಯಾಗಿದ್ದಳು ಎಂದು ತಿಳಿಸಿದರು.

ಇದನ್ನೂ ಓದಿ: FSL​ ತಜ್ಞರಿಗೆ ತಲೆನೋವಾದ ಬೆಂಗಳೂರು ಮಹಾಲಕ್ಷ್ಮೀ ಕೊಲೆ, ಪತ್ತೆಯಾಗದ ರಕ್ತದ ಕಲೆ!

ದಕ್ಷಿಣ ಸೆನ್ ವಿಭಾಗದ ಪೊಲೀಸರು ಒಂದು ಸೈಬರ್​ ವಂಚನೆ ಪ್ರಕರಣವನ್ನು ಬೇಧಿಸಿದ್ದಾರೆ. ಸೈಬರ್ ವಂಚನೆಯಲ್ಲಿ ತೊಡಗಿದ್ದ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಈತನ ನಾಲ್ವರು ಸಹಚರರಿಗಾಗಿ ಹುಡುಕಾಟ ನಡೆಸಿದ್ದಾರೆ. ಆರೋಪಿಗಳು ಕೆಂಗೇರಿಯಲ್ಲಿ ರೂಂವೊಂದನ್ನು ಬಾಡಿಗೆ  ಪೆಡೆದು ವಾಸವಾಗಿದ್ದರು. ಆರೋಪಿಗಳು ಓರ್ವ ವ್ಯಕ್ತಿಯಿಂದ ಬರೊಬ್ಬರಿ 30 ಲಕ್ಷ ರೂ. ಪಡೆದು, ವಂಚನೆ ಮಾಡಿದ್ದಾರೆ ಎಂದು ತಿಳಿಸಿದರು.

ಹುಳಿಮಾವು ಪೊಲೀಸರು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 35 ಲಕ್ಷ ಮೌಲ್ಯದ ಮಾಲು ವಶಕ್ಕೆ ಪಡೆಯಲಾಗಿದೆ‌. ಆರೋಪಿಗಳಿಂದ 11 ಪ್ರಕರಣಗಳು ಬೆಳಕಿಗೆ ಬಂದಿವೆ. ಮೊದಲ ಆರೋಪಿಯ ಮೇಲೆ 24 ಪ್ರಕರಣ ದಾಖಲಾಗಿವೆ. ಎರಡನೇ ಆರೋಪಿ ವಿರುದ್ಧ 20 ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದರು.

ಕೊತ್ತನೂರಿನ ಐಷಾರಾಮಿ ವಿಲ್ಲಾಗಳಲ್ಲಿ ಕಳ್ಳತನ ಮಾಡುತಿದ್ದ ಆರೋಪಿಯನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ. 29ಲಕ್ಷ ಮೌಲ್ಯದ ಚಿನ್ನಾಭರಣ, ವಿದೇಶಿ ಕರೆನ್ಸಿ, ವಾಚ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯ ಬಂಧನದಿಂದ 9 ಪ್ರಕರಣಗಳು ಪತ್ತೆಯಾಗಿವೆ. ಆರೋಪಿ ತ್ರಿಪುರ ಮೂಲದವನು ಅಂತ ತಿಳಿದುಬಂದಿದೆ ಎಂದು ಹೇಳಿದರು.

ಸುಬ್ರಮಣ್ಯ ನಗರ ಪೊಲೀಸರು ಕಳತನದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 12 ಪ್ರಕರಣ ಬೆಳಕಿಗೆ ಬಂದಿವೆ. ಮೂರು ಪ್ರಕರಣ ಕರ್ನಾಟಕ, ಉಳಿದ ಆರು ಪ್ರಕರಣ ಆಂಧ್ರ ಹಾಗೂ ತೆಲಂಗಾಣದಲ್ಲಿ ದಾಖಲಾಗಿವೆ. ಬಂಧಿತರಲ್ಲಿ ಕೆಲವರು ಎಂಓಬಿಗಳಾಗಿದ್ದಾರೆ. ಕೆಲವರು ನಾಪತ್ತೆಯಾಗಿದ್ದು ಹುಡುಕಾಟ ನಡೆಸಿದ್ದೇವೆ. ಬಂಧಿತರಿಂದ 3 ಲಕ್ಷಕ್ಕೂ ಅಧಿಕ ಮೌಲ್ಯದ ವಿದೇಶಿ ಕರೆನ್ಸಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:15 pm, Mon, 23 September 24

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ