ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ; ಪೊಲೀಸ್ ಇಲಾಖೆಯಿಂದ ಯಾವುದೇ ಪಾಸ್ ನೀಡಲ್ಲ: ಕಮಲ್ ಪಂತ್
Bengaluru News: ವಿನಾಯಿತಿ ಇರುವವರು ದಾಖಲೆ ಇಟ್ಟುಕೊಂಡು ಬರಬೇಕು. ವೀಕೆಂಡ್ ಲಾಕ್ಡೌನ್ ವೇಳೆ ನಗರ ಸಂಪೂರ್ಣ ಬಂದ್ ಆಗಲಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ಬೆಂಗಳೂರು: ಬೆಂಗಳೂರು ನಗರ ಬಿಜೆಪಿ ಅಧ್ಯಕ್ಷರು, ಪದಾಧಿಕಾರಿಗಳ ಸಭೆಯಲ್ಲಿ ಕೊರೊನಾ ಹರಡುತ್ತಿರುವ ಬಗ್ಗೆ ಚರ್ಚಿಸಲಾಗಿದೆ. ಈಗಾಗಲೇ 2 ಅಲೆಯನ್ನು ಸಮರ್ಥವಾಗಿ ನಿರ್ವಹಿಸಿದ್ದೇವೆ. ಸಾರ್ವಜನಿಕರ ಹಿತದೃಷ್ಟಿಯಿಂದ ನಾವು ಕೊರೊನಾ ನಿಯಂತ್ರಣದಲ್ಲಿ ಭಾಗಿಯಾಗಬೇಕು. ಸಾರ್ವಜನಿಕರಿಗೆ ಮಾಹಿತಿ ನೀಡುವುದು, ಆಂಬುಲೆನ್ಸ್, ಕೊರೊನಾ ಲಸಿಕೆ ಬಗ್ಗೆ ಅರಿವು ಮೂಡಿಸಲು ತೀರ್ಮಾನ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಕೊರೊನಾ ಹೆಚ್ಚಳ ಹಾಗೂ ಕರ್ನಾಟಕ ಸರ್ಕಾರದಿಂದ ಕೊವಿಡ್ ನಿಯಂತ್ರಣಕ್ಕೆ ಕಠಿಣ ನಿಯಮಾವಳಿಗಳ ಸೂಚನೆ ಹಿನ್ನೆಲೆ ಬಿಜೆಪಿ ಚಿಂತನಾ ಶಿಬಿರ ಮುಂದೂಡಿಕೆಯಾಗುವ ಸಾಧ್ಯತೆ ಇದೆ. ನಂದಿ ಬೆಟ್ಟದಲ್ಲಿ ಜನವರಿ 7, 8, 9ರಂದು ನಿಗದಿಯಾಗಿದ್ದ ಸಭೆಯನ್ನು ಜನವರಿ 10ರ ಬಳಿಕ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಪರಿಷತ್ನ ನಿರ್ಗಮಿತ ಸದಸ್ಯರಿಗೆ ಬೀಳ್ಕೊಡುಗೆ ಸಮಾರಂಭ ನಡೆಸಲಾಗಿದೆ. ಅವಧಿ ಮುಗಿದರೂ ಸಾರ್ವಜನಿಕ ಜೀವನದಲ್ಲಿ ಇರುತ್ತಾರೆ. ರಾಜಕಾರಣದಲ್ಲಿ ಇದ್ದರೆ ಜನ ಮತ್ತೆ ಆಯ್ಕೆ ಮಾಡುತ್ತಾರೆ. ಕ್ರಿಯಾಶೀಲವಾಗಿದ್ದರೆ ಜನರ ಮನಸ್ಸಿನಲ್ಲಿ ಉಳಿಯುತ್ತೇವೆ. ಕ್ರಿಯಾಶೀಲವಾಗಿರುವುದು ಬಹಳ ಮುಖ್ಯ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಪರಿಷತ್ಗೆ ಹೊಸದಾಗಿ ಆಯ್ಕೆಯಾದವರಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ. ಬೇರೆ ಬೇರೆ ರಂಗದಲ್ಲಿ ಹೊಸ ಅವಕಾಶ ಸಿಗಲಿ ಎಂದು ಹಾರೈಸಿದ್ದಾರೆ. ನಾಡುಕಟ್ಟಲು, ಕನ್ನಡಿಗರ ಬಾಳು ಹಸಿರುಮಾಡಲು ಕೈಜೋಡಿಸಿ ಎಂದು ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೇಳಿಕೊಂಡಿದ್ದಾರೆ.
ಬೆಂಗಳೂರಿನ ಬ್ಯಾಟರಾಯನಪುರ ಠಾಣೆ ಸಿಬ್ಬಂದಿಗೆ ಕೊರೊನಾ ಬೆಂಗಳೂರಿನ ಬ್ಯಾಟರಾಯನಪುರ ಠಾಣೆ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಪೊಲೀಸ್ ಠಾಣೆಯ ಓರ್ವ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಆಗಿದೆ. ಬ್ಯಾಟರಾಯನಪುರ ಠಾಣೆಯ ಎಲ್ಲ ಸಿಬ್ಬಂದಿಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿದೆ. ಡಿಸಿಪಿ ಸಂಜೀವ್ ಪಾಟೀಲ್ ಸೂಚನೆ ಮೇರೆಗೆ RTPCR ಟೆಸ್ಟ್ ಮಾಡಿಸಲಾಗಿದೆ.
ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ ಮಾಡಲಾಗುವುದು. ಸರ್ಕಾರ ಹೊರಡಿಸಿರುವ ಎಲ್ಲ ನಿಯಮ ಜಾರಿಗೆ ಸಿದ್ಧತೆ. ಎಲ್ಲ ಡಿಸಿಪಿಗಳಿಗೂ ಈ ಬಗ್ಗೆ ಸೂಚನೆಯನ್ನ ನೀಡಲಾಗಿದೆ. ಪೊಲೀಸ್ ಇಲಾಖೆಯಿಂದ ಯಾವುದೇ ಪಾಸ್ ನೀಡಲ್ಲ. ಅನಗತ್ಯವಾಗಿ ರಸ್ತೆಗಿಳಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿಕೆ ನೀಡಿದ್ದಾರೆ.
ವಿನಾಯಿತಿ ಇರುವವರು ದಾಖಲೆ ಇಟ್ಟುಕೊಂಡು ಬರಬೇಕು. ವೀಕೆಂಡ್ ಲಾಕ್ಡೌನ್ ವೇಳೆ ನಗರ ಸಂಪೂರ್ಣ ಬಂದ್ ಆಗಲಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ಇದನ್ನೂ ಓದಿ: ಏಳು ದಿನದಿಂದ ಹೆಚ್ಚಾಗುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ, ರಾಜ್ಯದಲ್ಲಿ ನಿನ್ನೆ 2.59% ಪಾಸಿಟಿವಿಟಿ ರೇಟ್