ಬೆಂಗಳೂರಿನಲ್ಲಿ ಶಂಕಿತ ಉಗ್ರರಿಂದ ಭಾರಿ ವಿಧ್ವಂಸಕ ಕೃತ್ಯವೆಸಗಲು ಸಂಚು​, ಸ್ಟೋಟಕ ಮಾಹಿತಿ ಬಹಿರಂಗಪಡಿಸಿದ ಪೊಲೀಸ್ ಕಮಿಷನರ್

ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರನ್ನು ಬಂಧಿಸಿದ್ದು, ಈ ಬಗ್ಗೆ ನಗರ ಪೊಲೀಸ್​ ಆಯುಕ್ತ ದಯಾನಂದ್ ಅವರು ಬಂಧಿತರ ಕೃತ್ಯದ ಪ್ಲ್ಯಾನ್​ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಬೆಂಗಳೂರಿನಲ್ಲಿ ಶಂಕಿತ ಉಗ್ರರಿಂದ ಭಾರಿ ವಿಧ್ವಂಸಕ ಕೃತ್ಯವೆಸಗಲು ಸಂಚು​, ಸ್ಟೋಟಕ ಮಾಹಿತಿ ಬಹಿರಂಗಪಡಿಸಿದ ಪೊಲೀಸ್ ಕಮಿಷನರ್
ಬೆಂಗಳೂರು ನಗರ ಪೊಲೀಸ್ ಕಮಿಷನರ್​ ದಯಾನಂದ್
Follow us
| Updated By: ರಮೇಶ್ ಬಿ. ಜವಳಗೇರಾ

Updated on:Jul 19, 2023 | 11:52 AM

ಬೆಂಗಳೂರು, (ಜುಲೈ.19): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸಿಸಿಬಿ ಪೊಲೀಸರು (CCB Police) ಇಂದು (ಜುಲೈ 19) ಭರ್ಜರಿ ಕಾರ್ಯಾಚರಣೆ ನಡೆಸಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು (Suspected Terrorists Arrested) ಬಂಧಿಸಿದ್ದಾರೆ. ಬಂಧಿತರಿಂದ ಪಿಸ್ತೂಲ್, ಜೀವಂತ ಗುಂಡು ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್​ ದಯಾನಂದ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕೆಲವು ಪ್ರಮುಖ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ವಿಧ್ವಾಂಸಕ ಕೃತ್ಯ ಎಸಗಲು ಪ್ಲಾನ್ ಮಾಡಿದ್ದವರನ್ನು ಬಂಧಿಸಲಾಗಿದೆ. ಇದರೊಂದಿಗೆ ಅವರ ಪ್ಲ್ಯಾನ್​ ವಿಫಲಗೊಳಿಸಲಾಗಿದೆ. ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದ ಐದು ಜನರ ಮನೆ ಮೇಲೆ ದಾಳಿ ಮಾಡಲಾಗಿದ್ದು, ಏಳು ಪಿಸ್ತೂಲ್ 45 ಗುಂಡು, ಹನ್ನೆರಡು ಮೊಬೈಲ್ ಫೋನ್, ಡ್ರ್ಯ್ಯಾಗರ್, ವಾಕಿ ಟಾಕಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಇನ್ನು ಬಂಧಿತರು ಬೆಂಗಳೂರು ನಗರದಲ್ಲಿ ಕೃತ್ಯವೆಸಗಲು ಪ್ಲ್ಯಾನ್​​ ಮಾಡಿದ್ದರು. ವಿದೇಶದಿಂದ ವಿಧ್ವಂಸಕ ಕೃತ್ಯಕ್ಕೆ ವಿದೇಶದಿಂದ ಫಂಡಿಂಗ್ ಆಗುತ್ತಿತ್ತು ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು, ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ

2008ರಲ್ಲಿ ನಡೆದಿದ್ದ ಸೀರಿಯಲ್ ಸ್ಫೋಟ ಆರೋಪಿ ನಸೀರ್​ ಸಂಚು ರೂಪಿಸಿದ್ದ. ಟಿ.ನಸೀರ್​​​ ಹಾಗೂ ಜುನೈದ್ ಈ ಪ್ರಕರಣದ ಮಾಸ್ಟರ್ ಮೈಂಡ್​ಗಳಾಗಿದ್ದು, ಸದ್ಯ ಟಿ.ನಸೀರ್​ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾನೆ. 2008 ರ ಸೀರಿಯಲ್ ಬ್ಲಾಸ್ಟ್ ಕೇಸ್ ನ ಅರೋಪಿ ಟಿ ನಜೀರ್ ಎಲ್ ಇ ಟಿ ಸಂಘಟನೆಗೆ ಸೇರಿದ್ದವನು. ಈ ಶಂಕಿತರ ಉಗ್ರರು ಕೃತ್ಯವೆಸಗಲು ವಿದೇಶದಿಂದ ಹಣ ಬಂದಿದೆ. ಆರೋಪಿಗಳಿಗೆ ಆನ್​ಲೈನ್ ಹಾಗೂ ನಗದು ರೂಪದಲ್ಲಿ ಹಣ ಪೂರೈಕೆಯಾಗಿದೆ. ಈ ಬಗ್ಗೆ ಐವರು ಆರೋಪಿಗಳನ್ನು 15 ದಿನ ಪೊಲೀಸ್ ವಶಕ್ಕೆ ಪಡೆಯಲಾಗಿದೆ  ಎಂದು ಹೇಳಿದರು.

2017 ರಲ್ಲಿ ವ್ಯವಹಾರದ ಕಾರಣಕ್ಕೆ ಕೊಲೆ ನಡೆದಿತ್ತು.ಈ ಪ್ರಕರಣದಲ್ಲಿ 21 ಜನ ಜೈಲಿಗೆ ಹೋಗಿದ್ದರು. ಹದಿನೆಂಟು ತಿಂಗಳ ಕಾಲ ಜೈಲಿನಲ್ಲಿ ಇದ್ದರು. ಜೈಲಿನಲ್ಲಿದ್ದಾಗ ಉಗ್ರರ ಸಂಪರ್ಕ ಬೆಳೆಸಿ ಬೆಂಗಳೂರಿನಲ್ಲಿ ಬ್ಲಾಸ್ಟ್ ಮಾಡಬೇಕು ಎಂದು ಪ್ಲಾನ್ ಮಾಡಿದ್ದರು. 2020 ರಲ್ಲಿ ಜುನೈದ್ ರಕ್ತ ಚಂದನ ಕೇಸ್ ನಲ್ಲಿ ಐದು ತಿಂಗಳ ಕಾಲ ಜೈಲಿನಲ್ಲಿದ್ದ. ಜುನೈದ್ ವಿದೇಶದಲ್ಲಿ ಇದ್ದಾನೆ. ಆತನಿಂದಲೇ ಇವರುಗಳಿಗೆ ಏನು ಮಾಡಬೇಕು ಎಂದು ಮಾಹಿತಿ ನೀಡುತ್ತಿದ್ದ ಎಂದು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟರು.

Published On - 11:30 am, Wed, 19 July 23

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ