AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಕ್ರಮ ವಲಸಿಗರ ವಿರುದ್ಧ ಪೊಲೀಸರ ಭರ್ಜರಿ ಬೇಟೆ, ಒಂದೇ ದಿನ 2000ಕ್ಕೂ ಹೆಚ್ಚು ಮಂದಿಯ ವಿಚಾರಣೆ

ಬಾಂಗ್ಲಾ ಅಕ್ರಮ ವಲಸಿಗರೂ ಸೇರಿದಂತೆ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಒಂದೇ ದಿನ 2000ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆಗೊಳಪಡಿಸಲಾಗಿದ್ದು, ಬಹುತೇಕರು ವೀಸಾ ಅವಧಿ ಮೀರಿರುವುದು ಅಥವಾ ಸೂಕ್ತ ದಾಖಲೆಗಳಿಲ್ಲದೆ ವಾಸಿಸುತ್ತಿರುವುದು ಪತ್ತೆಯಾಗಿದೆ. ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಅಕ್ರಮ ವಲಸಿಗರ ವಿರುದ್ಧ ಪೊಲೀಸರ ಭರ್ಜರಿ ಬೇಟೆ, ಒಂದೇ ದಿನ 2000ಕ್ಕೂ ಹೆಚ್ಚು ಮಂದಿಯ ವಿಚಾರಣೆ
ಬೆಂಗಳೂರು: ಅಕ್ರಮ ವಲಸಿಗರ ವಿರುದ್ಧ ಪೊಲೀಸರ ಭರ್ಜರಿ ಬೇಟೆImage Credit source: tv9
Shivaprasad B
| Edited By: |

Updated on:Feb 26, 2026 | 7:43 AM

Share

ಬೆಂಗಳೂರು, ಫೆಬ್ರವರಿ 26: ಬೆಂಗಳೂರು (Bengaluru) ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಪತ್ತೆಗೆ ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಪೊಲೀಸ್ ಆಯುಕ್ತರ ಸೂಚನೆಯಂತೆ ವಿವಿಧ ವಿಭಾಗಗಳ ಪೊಲೀಸರು ಅನುಮಾನಾಸ್ಪದ ಪ್ರದೇಶಗಳಲ್ಲಿ ತಲಾಶ್ ನಡೆಸಿ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಮೂಲಗಳ ಮಾಹಿತಿ ಪ್ರಕಾರ, ಬುಧವಾರ ಒಂದೇ ದಿನ ಸುಮಾರು 2,000ಕ್ಕೂ ಹೆಚ್ಚು ವಿದೇಶಿಗರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಇದರಲ್ಲಿ ಬಹುತೇಕರು ಸರಿಯಾದ ದಾಖಲೆಗಳಿಲ್ಲದೆ ಅಥವಾ ವೀಸಾ ಅವಧಿ ಮೀರಿಸಿ ನಗರದಲ್ಲಿ ವಾಸಿಸುತ್ತಿರುವುದು ಪತ್ತೆಯಾಗಿದೆ.

ವಿಶೇಷವಾಗಿ, ಕೆಲವು ನೈಜೀರಿಯನ್ ಹಾಗೂ ಬಾಂಗ್ಲಾ ಮೂಲದ ವಲಸಿಗರು ಅಕ್ರಮವಾಗಿ ನೆಲೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಅವರ ವಿರುದ್ಧ ಕಾನೂನು ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ಸದ್ಯ ಅಕ್ರಮವಾಗಿ ನೆಲೆಸಿರುವವರ ಸಂಪೂರ್ಣ ಮಾಹಿತಿ ಸಂಗ್ರಹಿಸಲು ಅಧಿಕಾರಿಗಳು ಮುಂದಾಗಿದ್ದಾರೆ.

‘ಯಾವ ದೇಶದಿಂದ ಬಂದಿದ್ದಾರೆ? ಯಾವಾಗ ನಗರಕ್ಕೆ ಪ್ರವೇಶಿಸಿದ್ದಾರೆ? ಯಾರು ಕರೆತಂದಿದ್ದಾರೆ? ವೀಸಾ ಹಾಗೂ ಪಾಸ್‌ಪೋರ್ಟ್ ಮಾನ್ಯತೆಯ ಸ್ಥಿತಿ ಏನು?’ ಎಂಬ ವಿಷಯಗಳನ್ನು ಸಮಗ್ರವಾಗಿ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕಾರ್ಯಾಚರಣೆ ಮುಂದುವರಿಯಲಿದ್ದು, ಅಗತ್ಯವಿದ್ದಲ್ಲಿ ಸಂಬಂಧಿತ ಕೇಂದ್ರ ಸಂಸ್ಥೆಗಳ ಸಹಯೋಗ ಪಡೆಯಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆಯೂ ನಡೆದಿತ್ತು ಬಾಂಗ್ಲಾ ಅಕ್ರಮ ವಲಸಿಗರ ವಿರುದ್ಧ ಕಾರ್ಯಾಚರಣೆ

ಬಾಂಗ್ಲಾದೇಶದಿಂದ ಅಕ್ರಮವಾಗಿ ಬಂದು ಬೆಂಗಳೂರಿನಲ್ಲಿ ನೆಲೆಸಿರುವವರ ವಿರುದ್ಧ ಈ ಹಿಂದೆಯೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. 2026 ಜನವರಿಯಲ್ಲಿ ಎಲೆಕ್ಟ್ರಾನಿಕ್ ಸಿಟಿ ಮತ್ತು ಹೆಬ್ಬಗೋಡಿ ವ್ಯಾಪ್ತಿಯಲ್ಲಿ ನಡೆಸಿದ ದಾಳಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಸುಮಾರು 26ಕ್ಕೂ ಹೆಚ್ಚು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿತ್ತು. ಇವರು ನಕಲಿ ಆಧಾರ್ ಕಾರ್ಡ್ ಮತ್ತು ಗುರುತಿನ ಚೀಟಿಗಳನ್ನು ಬಳಸಿ ನಗರದ ಸ್ಕ್ರ್ಯಾಪ್ ಯಾರ್ಡ್‌ಗಳಲ್ಲಿ ಕೆಲಸ ಮಾಡುತ್ತಿದ್ದರು ಎಂಬುದು ಗೊತ್ತಾಗಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ

2025ರ ನವೆಂಬರ್​​​ನಲ್ಲಿ ಸಿಸಿಬಿ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ 14 ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿತ್ತು. ಅವರಿಂದ 7.7 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಬಂಧಿತರಲ್ಲಿ ನೈಜೀರಿಯಾ ಮೂಲದ ಮಹಿಳೆಯೂ ಸೇರಿದ್ದು, ಆಕೆ ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನೆಲೆಸಿ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದಳು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:58 am, Thu, 26 February 26

Follow Us
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!