AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬೆಂಗಳೂರಿನಲ್ಲಿ 3 ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ಎಫ್‌ಐಆರ್

ಬೆಂಗಳೂರು ಪೊಲೀಸರು ರಾಹುಲ್ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಮತ್ತು ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದ ಮೇಲೆ ಮೂರು ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಕೆಪಿಸಿಸಿ ಕಾನೂನು ಕೋಶದ ದೂರಿನನ್ವಯ ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ. 'ground.reality_india' ಎಂಬ ಖಾತೆಯಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧಪ್ರಚೋದಕ ಕಾಮೆಂಟ್‌ಗಳಿದ್ದ ವಿಡಿಯೋ ಅಪ್ಲೋಡ್ ಮಾಡಲಾಗಿದೆ.

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬೆಂಗಳೂರಿನಲ್ಲಿ 3 ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ಎಫ್‌ಐಆರ್
ರಾಹುಲ್ ಗಾಂಧಿ
ಅಕ್ಷಯ್​ ಪಲ್ಲಮಜಲು​​
|

Updated on: Jul 30, 2026 | 8:04 AM

Share

ಬೆಂಗಳೂರು, ಜು.30: ಲೋಕಸಭೆಯ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ, ನಿಂದನೀಯ ಹಾಗೂ ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದಡಿಯಲ್ಲಿ ಬೆಂಗಳೂರು ಪೊಲೀಸರು ಮೂರು ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ಪ್ರಕರಣ (FIR) ದಾಖಲಿಸಿಕೊಂಡಿದ್ದಾರೆ.

ಕೆಪಿಸಿಸಿ ಶಾಸನಬದ್ಧ ಹಾಗೂ ಕಾನೂನು ಕೋಶದ (Legal Cell) ಸದಸ್ಯರೊಬ್ಬರು ನೀಡಿರುವ ದೂರಿನ ಆಧಾರದ ಮೇರೆಗೆ ಬೆಂಗಳೂರಿನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಜುಲೈ 27ರಂದು ಈ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

‘ground.reality_india’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಜುಲೈ 16ರಂದು 30 ಸೆಕೆಂಡುಗಳ ವೀಡಿಯೊ ಒಂದನ್ನು ಅಪ್‌ಲೋಡ್ ಮಾಡಲಾಗಿತ್ತು. ಈ ವೀಡಿಯೊಗೆ “ವಿಪಕ್ಷಗಳು ಏಕೆ ಮೌನವಾಗಿವೆ?” (Why is the Opposition party silent) ಎಂಬ ಕ್ಯಾಪ್ಷನ್ ನೀಡಲಾಗಿದ್ದು, ರಾಹುಲ್ ಗಾಂಧಿ ಅವರ ವಿರುದ್ಧ ತೀವ್ರ ನಿಂದನೀಯ ಹಾಗೂ ಲೈಂಗಿಕ ಪ್ರಚೋದಕ/ಅವಹೇಳನಕಾರಿ ಕಾಮೆಂಟ್‌ಗಳನ್ನು ಬಳಸಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ವೀಡಿಯೊ ಮತ್ತು ಪೋಸ್ಟ್ ಜನಪ್ರತಿನಿಧಿಯೊಬ್ಬರ ಗೌರವಕ್ಕೆ ಧಕ್ಕೆ ತರುವ ಹಾಗೂ ಅವರ ತೇಜೋವಧೆ ಮಾಡುವ ದುರುದ್ದೇಶದಿಂದ ಕೂಡಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಈ ವೀಡಿಯೊ ಕೆಳಗೆ ಪ್ರಚೋದನಕಾರಿ ಹಾಗೂ ನಿಂದನೀಯ ಕಾಮೆಂಟ್‌ಗಳನ್ನು ಹಾಕಿದ್ದ ‘raashtravaadhi2’ ಹಾಗೂ ‘manvithamanojsamanvi’ ಎಂಬ ಇಬ್ಬರು ಇನ್‌ಸ್ಟಾಗ್ರಾಮ್ ಬಳಕೆದಾರರ ಹೆಸರುಗಳನ್ನು ಸಹ ಎಫ್‌ಐಆರ್‌ನಲ್ಲಿ ಸೇರಿಸಲಾಗಿದೆ.

ಇದನ್ನೂ ಓದಿ: ಪತಿ ಕಿರುಕುಳಕ್ಕೆ ಬೇಸತ್ತು ರಾಜಸ್ಥಾನದಿಂದ ಮಂಗಳೂರಿಗೆ ಬಂದಿದ್ದ ಮಹಿಳೆ ರಕ್ಷಣೆ: ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ

ಪ್ರಸ್ತುತ ಸೈಬರ್ ಕ್ರೈಮ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಈ ಖಾತೆಗಳ ಮಾಲೀಕರನ್ನು ಪತ್ತೆ ಹಚ್ಚಲು ಹಾಗೂ ತನಿಖೆ ಚುರುಕುಗೊಳಿಸಲು ಮುಂದಾಗಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು