AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಬ್ ಸ್ಫೋಟ ನೆನಪಿಸಿಕೊಂಡ ಬೆಂಗಳೂರು ಪೊಲೀಸ್ ಕಮಿಷನರ್: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಬಿಗಿ ಬಂದೋಬಸ್ತ್

ಮಂಗಳೂರು ಹಾಗೂ ಕೊಯಮತ್ತೂರಿನಲ್ಲಿ ಬಾಂಬ್ ಸ್ಫೋಟೊ ಸಂಭವಿಸಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ನಗರ ಪೊಲೀಸ್ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಬಾಂಬ್ ಸ್ಫೋಟ ನೆನಪಿಸಿಕೊಂಡ ಬೆಂಗಳೂರು ಪೊಲೀಸ್ ಕಮಿಷನರ್: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಬಿಗಿ ಬಂದೋಬಸ್ತ್
ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ
TV9 Web
| Updated By: Digi Tech Desk|

Updated on:Dec 26, 2022 | 2:23 PM

Share

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತ್​ ಕಲ್ಪಿಸಲು ಬೆಂಗಳೂರು ಪೊಲೀಸರು (Bengaluru City Police) ಮುಂದಾಗಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ (Police Commissioner Pratap Reddy), ಹೊಸ ವರ್ಷಾಚರಣೆ ವೇಳೆ ಭಯೋತ್ಪಾದನಾ ಚಟುವಟಿಕೆ ನಡೆಯುವ ಶಂಕೆಯ ಹಿನ್ನೆಲೆಯಲ್ಲಿ ಭದ್ರತೆಗೆ ಕ್ರಮಕೈಗೊಳ್ಳಲಾಗಿದೆ. ಮಂಗಳೂರು ಹಾಗೂ ಕೊಯಮತ್ತೂರಿನಲ್ಲಿ ಬಾಂಬ್ ಸ್ಫೋಟೊ ಸಂಭವಿಸಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ನಗರ ಪೊಲೀಸ್ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ನಗರದಲ್ಲಿ ಅವಧಿಮೀರಿ ಹೊಟೆಲ್ ತೆರೆಯುತ್ತಿರುವ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಸುರಕ್ಷೆಗೆ ಸಂಬಂಧಿಸಿದ ಸೂಚನೆಗಳನ್ನು ಎಲ್ಲ ಹೊಟೆಲ್​ಗಳು ಪಾಲಿಸಬೇಕು. ಹೊಟೆಲ್​ಗಳ ಮೇಲೆ ಕಣ್ಣಿಡಲು ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ವೇಳೆ ಕೆಲ ಹೋಟೆಲ್​ಗಳು ನಿಯಮ ಉಲ್ಲಂಘಿಸಿದ್ದು ಬೆಳಕಿಗೆ ಬಂದಿದೆ. ಬಾರ್​​ಗಳಲ್ಲಿ ಯುವತಿಯರನ್ನು ಇತರ ಚಟುವಟಿಕೆಳಿಗೆ ಬಳಸಿಕೊಳ್ಳುತ್ತಿರುವ ದೂರುಗಳು ಬಂದಿವೆ. ಈ ಸಂಬಂಧ ಪಶ್ಚಿಮ ವಿಭಾಗದಲ್ಲಿ 27 ಪ್ರಕರಣಗಳು ದಾಖಲಾಗಿವೆ ಎಂದು ವಿವರಿಸಿದರು.

ಹೊಟೆಲ್​ಗಳಿಗೆ ಸಿಸಿ ಕ್ಯಾಮೆರಾ ಕಡ್ಡಾಯ

2019ರ ನಂತರ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ನಡೆಯುತ್ತಿದೆ. ಹೀಗಾಗಿ ಬೆಂಗಳೂರಿನ ಎಲ್ಲ ಹೋಟೆಲ್​ನವರು ಹೊಸ ವರ್ಷಾಚರಣೆಯನ್ನು ಜೋರಾಗಿ ಆಚರಿಸಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ಹೊಟೇಲ್​ಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಬೇಕು. ಕ್ರಿಮಿನಲ್​ ಹಿನ್ನೆಲೆಯುಳ್ಳವರು ಬಂದಾಗ ಗಮನ ಹರಿಸುವಂತೆ ಹೊಟೇಲ್​ ಮಾಲಿಕರಿಗೆ ಸೂಚಿಸಿದ್ದೇನೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಈ ಹಿಂದೆ ತಿಳಿಸಿದ್ದರು.

ಹೊಟೆಲ್​, ಪಬ್ ಮತ್ತು ಕ್ಲಬ್ ಮಾಲೀಕರೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದ ಅವರು, ಡಿ 31ರಂದು ಹೊಸ ವರ್ಷಾಚರಣೆಗೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಸುರಕ್ಷತಾ ಕ್ರಮಗಳ ಬಗ್ಗೆ ಹೋಟೆಲ್​ನವರಿಗೆ ಮಾರ್ಗದರ್ಶನ ಮಾಡಿದ್ದೇವೆ. ಹೋಟೆಲ್​ನವರು ನಮಗೆ ಕೆಲವು ಸಲಹೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು. ವಾಹನ ಸಂಚಾರ ನಿರ್ವಹಣೆ ಬಗ್ಗೆಯೂ ಪ್ಲ್ಯಾನ್ ಮಾಡಿಕೊಂಡಿದ್ದೇವೆ. ಜನದಟ್ಟಣೆ ನಿರ್ವಹಣೆ, ವಿದ್ಯುತ್ ಸಮಸ್ಯೆ ಬಗ್ಗೆ ಗಮನ ಹರಿಸಲು ಸೂಚಿಸಿದ್ದೇವೆ. ಜನ ಜಾಸ್ತಿ ಬರೋದರಿಂದ ತಾತ್ಕಾಲಿಕವಾಗಿ ಕೆಲಸಗಾರರನ್ನು ನೇಮಕ ಮಾಡಿಕೊಳ್ಳುತ್ತಿದ್ದಾರೆ. ಅವರ ಬಗ್ಗೆಯು ಸಹ ವಿಚಾರಿಸೋದಕ್ಕೆ ಹೇಳಿದ್ದೇವೆ. ಕ್ರಿಮಿನಲ್ ಹಿನ್ನಲೆ ಇದ್ದರೆ ಅಂತವರ ಬಗ್ಗೆ ಗಮನ ಹರಿಸೋಕೆ ಸೂಚಿಸಿದ್ದೇವೆ ಎಂದು ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.

ಇದನ್ನೂ ಓದಿ: ಆ್ಯಪ್ ಆಧಾರಿತ ಟ್ಯಾಕ್ಸಿ ಕಂಪನಿಗಳಿಗೆ ಟಫ್ ರೂಲ್ಸ್ ಜಾರಿ, ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಕಟ್ಟುನಿಟ್ಟು ಕ್ರಮಕ್ಕೆ ಸೂಚನೆ

ಬೆಂಗಳೂರು ನಗರದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:48 pm, Mon, 26 December 22