AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅನ್ಯ ಧರ್ಮದ ಹುಡುಗನ ಜೊತೆ ಹೋಗುತ್ತಿದ್ದ ಯುವತಿಗೆ ಬುರ್ಖಾ ತೆಗೆಯುವಂತೆ ಒತ್ತಾಯ; ಮುಸ್ಲಿಂ ಯುವಕ ಬಂಧನ

ಕಾರಿನಿಂದ ಬೈಕ್​ ಅಡ್ಡಗಟ್ಟಿ ಮುಸ್ಲಿಂ ಯುವತಿಗೆ ನಿಂದಿಸಿ ಬುರ್ಖಾ ತೆಗೆಯುವಂತೆ ಒತ್ತಾಯಿಸ್ದ ಮುಸ್ಲಿಂ ಯುವಕನನ್ನು ಬೆಂಗಳೂರು ಪೂರ್ವ ವಿಭಾಗದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಜಾಕೀರ್​ ಆರೋಪಿ ಜಾಕೀರ್ ಅಹಮ್ಮದ್ ರಷ್ಯಾದಲ್ಲಿ ಮೆಡಿಕಲ್ ಓದುತ್ತಿದ್ದು, ಎರಡು ತಿಂಗಳ ರಜೆಗಾಗಿ ಬೆಂಗಳೂರಿಗೆ ಬಂದಿದ್ದನು.

ಬೆಂಗಳೂರು: ಅನ್ಯ ಧರ್ಮದ ಹುಡುಗನ ಜೊತೆ ಹೋಗುತ್ತಿದ್ದ ಯುವತಿಗೆ ಬುರ್ಖಾ ತೆಗೆಯುವಂತೆ ಒತ್ತಾಯ; ಮುಸ್ಲಿಂ ಯುವಕ ಬಂಧನ
ಅನ್ಯ ಧರ್ಮದ ಹುಡುಗನ ಜೊತೆ ಹೋಗುತ್ತಿದ್ದಕ್ಕೆ ನಿಂದನೆ
TV9 Web
| Edited By: |

Updated on:Aug 28, 2023 | 11:04 AM

Share

ಬೆಂಗಳೂರು: ಅನ್ಯ ಧರ್ಮದ ಹುಡುಗನ ಜೊತೆ ಹೋಗುತ್ತಿದ್ದಕ್ಕೆ ಮುಸ್ಲಿಂ (Muslim) ಯುವತಿಗೆ ಕೆಟ್ಟದಾಗಿ ನಿಂದಿಸಿದ್ದ ಮುಸ್ಲಿಂ ಯುವಕನನ್ನು ಬೆಂಗಳೂರು (Bengaluru) ಪೂರ್ವ ವಿಭಾಗದ ಸೆನ್ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ಮೂಲದ ಜಾಕೀರ್ ಅಹಮ್ಮದ್ ಬಂಧಿತ ಆರೋಪಿ. ಮುಸ್ಲಿಂ ಯುವತಿ, ಬೈಕ್​ನಲ್ಲಿದ್ದ ಯುವಕ ಇಬ್ಬರು ಪರಿಚಿತರು. ಇಬ್ಬರೂ ಕಂಪನಿಯೊಂದಕ್ಕೆ ಸಂದರ್ಶನ ನೀಡಲು ಹೋಗಿದ್ದರು. ಸಂದರ್ಶ ಮುಗಿದ ಬಳಿಕ ಯುವತಿಯನ್ನು ಮನೆಗೆ ಡ್ರಾಪ್ ಮಾಡಲು ಯುವಕ ಹೋಗುತ್ತಿದ್ದ.

ಮುಸ್ಲಿಂ ಯುವತಿ ಅನ್ಯಧರ್ಮಿಯ ಯುವಕನ ಜೊತೆಗೆ ಹೋಗುತ್ತಿದ್ದಿದ್ದನ್ನು ನೋಡಿದ ಆರೋಪಿ ಜಾಕೀರ್, ಕಾರಿನಿಂದ ಬೈಕ್ ಅಡ್ಡಗಟ್ಟಿದ್ದಾನೆ. ನಂತರ ಯುವತಿಯನ್ನು ಕೆಟ್ಟದಾಗಿ ನಿಂದಿಸಿದ್ದಾನೆ. ಅಲ್ಲದೇ ಬುರ್ಖಾ ತೆಗೆಯುವಂತೆ ಒತ್ತಾಯಿಸಿದ್ದಾನೆ. ತಾನು ಮಾಡುತ್ತಿರುವ ಕೃತ್ಯದ ಬಗ್ಗೆ ತಾನೇ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆ ಹಿಡಿದು ಸೋಷಿಯಲ್ ಮೀಡಿಯಾದಲ್ಲಿ‌ ಹರಿಬಿಟ್ಟಿದ್ದಾನೆ.

ಇದನ್ನೂ ಓದಿ: ಬೆಂಗಳೂರು: ಗಣೇಶ ಮೂರ್ತಿ ಕೂರಿಸುವ ವಿಚಾರಕ್ಕೆ ಗಲಾಟೆ; ಚಾಕು ಇರಿತ

ಈ ವಿಡಿಯೋವನ್ನು ಫೇಸ್​​ಬುಕ್​​ನಲ್ಲಿ​​ ಫ್ಯಾಕ್ಟ್ಸ್​​​ ಖಾತೆದಾರರು ಸಚಿವ ಪ್ರಿಯಾಂಕ್​ ಖರ್ಗೆ ಅವರಿಗೆ ಟ್ಯಾಗ್​ ಮಾಡಿ “ಒಬ್ಬ ಬುರ್ಖಾ ಧಾರಿ ಯುವತಿ ಹಿಂದೂ ಯುವಕನೊಂದು ಸಂಚರಿಸಿದರೇ ಒಬ್ಬ ಮುಸ್ಲಿಂ ಯುವಕ ನಿಂದಿಸಿದ್ದು, ಸರಿಯೇ? ಇನ್ನು ಯುವತಿ ವಿರುದ್ಧ ಈ ರೀತಿಯಾದ ಭಾಷೆ ಬಳಸಿದ್ದು ಸರಿಯೇ ?” ಎಂದು ಫೇಸ್​ಬುಕ್​ನಲ್ಲಿ ಪೋಸ್ಟ್​​ ಮಾಡಿ ಪ್ರಶ್ನಿಸಿದ್ದಾರೆ. ನಂತರ ಬೆಂಗಳೂರು ಪೊಲೀಸರಿಗೆ ಟ್ಯಾಗ್​ ಮಾಡಿ “ಆತನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ” ಎಂದು ಆಗ್ರಹಿಸಿದ್ದಾರೆ.

ಆರೋಪಿ ಜಾಕೀರ್ ಅಹಮ್ಮದ್ ರಷ್ಯಾದಲ್ಲಿ ಮೆಡಿಕಲ್ ಓದುತ್ತಿದ್ದು, ಎರಡು ತಿಂಗಳ ರಜೆಗಾಗಿ ಬೆಂಗಳೂರಿನ ಗೋವಿಂದಪುರದ ತನ್ನ ಅಕ್ಕನ ಮನೆಗೆ ಬಂದಿದ್ದನು. ಸದ್ಯ ಪೊಲೀಸರು ಗೋವಿಂದಪುರದ ಸೋದರಿ ಮನೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:00 am, Mon, 28 August 23

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ