Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಪೇಪರ್ ಸೋರಿಕೆ ಪ್ರಕರಣ; ಮೈಸೂರಿನಲ್ಲಿ ಆರೋಪಿ ಸೌಮ್ಯಾ ಅರೆಸ್ಟ್

ಆರೋಪಿ ಸೌಮ್ಯ ಮೈಸೂರು ವಿವಿ ಭೂಗೋಳಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರು ವಿವಿಯಲ್ಲಿ ಎಂಎಸ್​ಸಿ ಓದಿರುವ ಸೌಮ್ಯ, ಪ್ರೊಫೆಸರ್ ಹೆಚ್.ನಾಗರಾಜ್ ಎಂಬುವರ ಬಳಿ ಪಿಹೆಚ್​ಡಿ ಮುಗಿಸಿದ್ದಾರೆ.

ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಪೇಪರ್ ಸೋರಿಕೆ ಪ್ರಕರಣ; ಮೈಸೂರಿನಲ್ಲಿ ಆರೋಪಿ ಸೌಮ್ಯಾ ಅರೆಸ್ಟ್
ಬಂಧಿತ ಆರೋಪಿ ಸೌಮ್ಯಾ
Follow us
TV9 Web
| Updated By: sandhya thejappa

Updated on:Apr 25, 2022 | 12:10 PM

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಪೇಪರ್ ಸೋರಿಕೆ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸೌಮ್ಯರನ್ನು ಬೆಂಗಳೂರಿನ ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಮೈಸೂರಿನಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ನಿನ್ನೆ ಸರ್ಕಾರಿ ರಜೆ ಹಿನ್ನೆಲೆ ಪೊಲೀಸರು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದರು. ಇಂದು ಮತ್ತೆ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಪೊಲೀಸರು 32ನೇ ಎಸಿಎಂಎಂ ಕೋರ್ಟ್​ಗೆ ಮನವಿ ಮಾಡುತ್ತಾರೆ.

ಆರೋಪಿ ಸೌಮ್ಯ ಮೈಸೂರು ವಿವಿ ಭೂಗೋಳಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರು ವಿವಿಯಲ್ಲಿ ಎಂಎಸ್​ಸಿ ಓದಿರುವ ಸೌಮ್ಯ, ಪ್ರೊಫೆಸರ್ ಹೆಚ್.ನಾಗರಾಜ್ ಎಂಬುವರ ಬಳಿ ಪಿಹೆಚ್​ಡಿ ಮುಗಿಸಿದ್ದಾರೆ. ಜಿಐಎಸ್ ಅಂಡ್ ಅಗ್ರಿಕಲ್ಚರ್ ಜಿಯಾಗ್ರಫಿಯಲ್ಲಿ ಪಿಹೆಚ್​ಡಿ ಮಾಡಿದ್ದಾರೆ. ಸದ್ಯ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿದ್ದಾರೆ.

ಮಾರ್ಚ್​ನಲ್ಲಿ ನಡೆದ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಪರೀಕ್ಷೆ ಬರೆದಿದ್ದರು. ಮೈಸೂರಿನ ಕುವೆಂಪು ನಗರದ ಪಿಯುಸಿ ಕಾಲೇಜು ಸೆಂಟರ್​ನಲ್ಲಿ ಪರೀಕ್ಷೆ ಬರೆದಿದ್ದರು. ಪರೀಕ್ಷೆ ಆರಂಭದ 1 ಗಂಟೆ ಮುಂಚಿತವಾಗಿ ಗೆಳತಿ ಒಬ್ಬಳಿಗೆ 18 ಪ್ರಶ್ನೋತ್ತರಗಳ ಮಾಹಿತಿಯನ್ನು ವಾಟ್ಸಾಪ್​ನಲ್ಲಿ ಕಳಿಸಿದ್ದರು. ಆಕೆಯಿಂದ ಬೆಂಗಳೂರಿನ ರಾಮಕೃಷ್ಣ ಎಂಬುವರಿಗೆ ಮಾಹಿತಿ ಶೇರ್ ಆಗಿತ್ತು. ಸೌಮ್ಯಾಗೆ ಪ್ರಶ್ನೆಗಳು ಸಿಕ್ಕ ಬಗ್ಗೆ ಪೊಲೀಸರು ಚರ್ಚೆ ನಡೆಸಲಿದ್ದಾರೆ.

ಗಾಂಜಾ ಮಾರಾಟಗಾರರ ಬಂಧನ: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್ ಆಗಿದ್ದಾರೆ.  ನದೀಮ್ ಪಾಷಾ ಹಾಗೂ ಈನೇಶ್ವರ್ ಬಂಧಿತ ಆರೋಪಿಗಳು. ಆರೋಪಿಗಳು ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸಿದ್ದರು. ಆರೋಪಿಗಳನ್ನ ಬಂಧಿಸಿ ವಿಚಾರಣೆ ನಡೆಸಿದಾಗ ಗೋಡೌನ್ ಬಗ್ಗೆ ಮಾಹಿತಿ ತಿಳಿದಿದೆ. ಮಾಹಿತಿ ಮೇರೆಗೆ ಸುಮಾರು 81 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ

‘ಆಚಾರ್ಯ’ ತಂಡದಿಂದ ನಟಿ ಕಾಜಲ್​ಗೆ ಅವಮಾನ; ಫ್ಯಾನ್ಸ್​ ಮನದಲ್ಲಿ ಮೂಡಿದೆ ದೊಡ್ಡ ಅನುಮಾನ

PWD JE ಪರೀಕ್ಷೆಯಲ್ಲಿ ಅಕ್ರಮ ವಿಚಾರ; ವಿಡಿಯೋ ಸಮೇತ ಸಾಕ್ಷಿ ಸಿಕ್ಕರೂ ತನಿಖೆಗೆ ಮುಂದಾಗದ ಸರ್ಕಾರ

Published On - 12:04 pm, Mon, 25 April 22