ಏಕಕಾಲಕ್ಕೆ 203 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ; ರೌಡಿಶೀಟರ್ಗಳಿಗೆ ವಾರ್ನಿಂಗ್
ಅಪರಾಧ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ದಕ್ಷಿಣ ವಿಭಾಗದಲ್ಲಿ ದಾಳಿ ನಡೆಸಿದ ಪೊಲೀಸರು, ಸದ್ಯ ಸ್ಟೇಷನ್ಗೆ ಕರೆಸಿ ಎಲ್ಲರಿಂದಲೂ ಮುಚ್ಚಳಿಕೆ ಬರೆಸಿಕೊಳ್ಳುತ್ತಿದ್ದಾರೆ.
ಬೆಂಗಳೂರು: ಇಂದು (ಆಗಸ್ಟ್ 9) ಮುಂಜಾನೆ ನಾಲ್ಕು ಗಂಟೆ ಸಮಯದಲ್ಲಿ ಏಕಕಾಲಕ್ಕೆ ಸುಮಾರು 203 ರೌಡಿಗಳ (Rowdy Sheeters )ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಕ್ಷಿಣ ವಿಭಾಗದಲ್ಲಿ ದಾಳಿ ನಡೆಸಿದ ಪೊಲೀಸರು ರೌಡಿಶೀಟರ್ಸ್ಗೆ ವಾರ್ನಿಂಗ್ ಮಾಡಿದ್ದಾರೆ. ಸಿದ್ದಾಪುರ, ಚೆನ್ನಮ್ಮನಕೆರೆ ಅಚ್ಚುಕಟ್ಟು, ಹನುಮಂತನಗರ, ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ತೋಪರಾಜ, ಮೂರಡಿ ಸುನಿಲ, ಭೋಜ, ವೆಂಕಟೇಶ್, ಸಂಜಯ್ ಸೇರಿದಂತೆ ಪ್ರಮುಖ ರೌಡಿ ಆಸಾಮಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಅಪರಾಧ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ದಕ್ಷಿಣ ವಿಭಾಗದಲ್ಲಿ ದಾಳಿ ನಡೆಸಿದ ಪೊಲೀಸರು, ಸದ್ಯ ಸ್ಟೇಷನ್ಗೆ ಕರೆಸಿ ಎಲ್ಲರಿಂದಲೂ ಮುಚ್ಚಳಿಕೆ ಬರೆಸಿಕೊಳ್ಳುತ್ತಿದ್ದಾರೆ.
ಸಾವಿರಾರು ರೌಡಿಗಳ ಮನೆ ಮೇಲೆ ದಾಳಿ ನಡೆಸಿದ್ದ ಪೊಲೀಸರು ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಕಾರ್ಯಾಚರಣೆಗಿಳಿದಿದ್ದ ಪೊಲೀಸರು ಜುಲೈ 10ರ ಬೆಳ್ಳಂಬೆಳಗ್ಗೆ ಸಾವಿರಾರು ರೌಡಿಶೀಟರ್ಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದರು. ನಗರದ 8 ವಲಯಗಳ ಪೊಲೀಸರಿಂದ ಏಕಕಾಲಕ್ಕೆ ದಾಳಿ ಮಾಡಲಾಗಿದ್ದು, ಲಾಕ್ಡೌನ್ ತೆರವು ಬಳಿಕ ಅಪರಾಧ ಕೃತ್ಯ ಹೆಚ್ಚಳವಾಗುತ್ತಿದ್ದ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸಿದ್ದರು. ಹಣಕಾಸು ವ್ಯವಹಾರ, ವೈಯಕ್ತಿಕ ದ್ವೇಷ ಸೇರಿದಂತೆ ಇತ್ಯಾದಿ ಕಾರಣಗಳಿಂದ ದಾಖಲಾಗಿದ್ದ ಕೊಲೆ ಪ್ರಕರಣಗಳು ಹಾಗೂ ಜೈಲಿನಲ್ಲೇ ಕುಳಿತು ರೌಡಿಸಂ ನಡೆಸುತ್ತಿದ್ದ ವಿಚಾರವನ್ನು ಅತಿ ಗಂಭೀರವಾಗಿ ಪರಿಗಣಿಸಿದ್ದ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್, ಹೆಚ್ಚುವರಿ ಆಯುಕ್ತರು, ಡಿಸಿಪಿಗಳೊಂದಿಗೆ ಸಭೆ ನಡೆಸಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸೂಚಿಸಿದ್ದರು. ಅದರಂತೆ ಆಯಾ ವ್ಯಾಪ್ತಿಯಲ್ಲಿ ರೌಡಿಗಳ ಮೇಲೆ ನಿಗಾ ವಹಿಸಿದ್ದ ಪೊಲೀಸರು ಬೆಂಗಳೂರು ನಗರದಾದ್ಯಂತ ಸಾವಿರಕ್ಕೂ ಹೆಚ್ಚು ರೌಡಿಶೀಟರ್ಸ್ ಮನೆ ಮೇಲೆ ದಾಳಿ ನಡೆಸಿ ನೂರಾರು ಜನರನ್ನು ವಶಕ್ಕೆ ಪಡೆದಿದ್ದರು.
ಇದನ್ನೂ ಓದಿ
Big News: ಸಾವಿರಾರು ರೌಡಿಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಬೆಂಗಳೂರು ಪೊಲೀಸರು; ನೂರಾರು ಜನ ವಶಕ್ಕೆ