ಬೆಂಗಳೂರಿನಲ್ಲಿ 58 ದೇಶಗಳ 663 ವಿದೇಶಿಗರಿಂದ ಅಕ್ರಮ ವಾಸ; ಪೊಲೀಸರಿಂದ ಅಧಿಕೃತ ಪಟ್ಟಿ ಸಿದ್ಧ

ಒಟ್ಟು 663 ವಿದೇಶಿ ಪ್ರಜೆಗಳ ಪೈಕಿ ಕೆಲವರನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದು ಡಿಟೆನ್ಷನ್ ಸೆಂಟರ್​ನಲ್ಲಿ ಇರಿಸಲಾಗಿದೆ. ವಿದೇಶಿ ಮಹಿಳಾ ಪ್ರಜೆಗಳಿಗೆ ಮಹಿಳಾ ನಿಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ. ವಿದೇಶಿ ಪ್ರಜೆಗಳನ್ನು ವಾಪಸ್ ಕಳುಹಿಸಲು ಪೊಲೀಸ್ ಇಲಾಖೆ ಕಸರತ್ತು ನಡೆಸುವ ಯೋಜನೆಯಲ್ಲಿದೆ.

ಬೆಂಗಳೂರಿನಲ್ಲಿ 58 ದೇಶಗಳ 663 ವಿದೇಶಿಗರಿಂದ ಅಕ್ರಮ ವಾಸ; ಪೊಲೀಸರಿಂದ ಅಧಿಕೃತ ಪಟ್ಟಿ ಸಿದ್ಧ
ಪೊಲೀಸರು
Follow us
TV9 Web
| Updated By: guruganesh bhat

Updated on: Aug 22, 2021 | 2:47 PM

ಬೆಂಗಳೂರು: ಇತ್ತೀಚಿಗಷ್ಟೇ ಆಫ್ರಿಕನ್ ಪ್ರಜೆಗಳು ನಗರದಲ್ಲಿ ಪುಂಡಾಟ ನಡೆಸಿದ ಬೆನ್ನಲ್ಲೇ ಪೊಲೀಸರು ಜಾಗೃತರಾಗಿದ್ದಾರೆ. ವೀಸಾ, ಪಾಸ್ಪೋರ್ಟ್ ಅವಧಿ ಮುಗಿದೂ ವಾಸವಿರುವ ವಿದೇಶಿಯರ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಪಟ್ಟಿಯಲ್ಲಿ 58 ದೇಶಗಳ 663 ಪ್ರಜೆಗಳ ಹೆಸರಿದ್ದು, ಈ ಪೈಕಿ ಕಾಂಗೋ, ನೈಜೀರಿಯಾ, ಸುಡಾನ್ ದೇಶಗಳ ಪ್ರಜೆಗಳೇ ಹೆಚ್ಚಾಗಿದ್ದಾರೆ. ಅಕ್ರಮವಾಗಿ ನೆಲೆಸಿದವರಲ್ಲಿ ಕಾಂಗೋ ಪ್ರಜೆಗಳೇ ಹೆಚ್ಚಾಗಿದ್ದಾರೆ ಕಾಂಗೋ ದೇಶದ 124, ನೈಜೀರಿಯಾ ದೇಶದ 113, ಸುಡಾನ್ ದೇಶದ 88, ಯೆಮೆನ್ ದೇಶದ 65, ಸೌಥ್ ಸುಡಾನ್ನ 25, ಉಗಾಂಡಾದ 21, ಅಫ್ಘಾನಿಸ್ತಾನದ 15 ಪ್ರಜೆಗಳು ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದಾರೆ. ಅಷ್ಟೇ ಅಲ್ಲದೇ, ಚೀನಾದ ಇಬ್ಬರು, ಪಾಕಿಸ್ತಾನದ ಓರ್ವ ಪ್ರಜೆ ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸಿಸುತ್ತಿರುವುದು ಬೆಂಗಳೂರು ನಗರ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಒಟ್ಟು 663 ವಿದೇಶಿ ಪ್ರಜೆಗಳ ಪೈಕಿ ಕೆಲವರನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದು ಡಿಟೆನ್ಷನ್ ಸೆಂಟರ್​ನಲ್ಲಿ ಇರಿಸಲಾಗಿದೆ. ವಿದೇಶಿ ಮಹಿಳಾ ಪ್ರಜೆಗಳಿಗೆ ಮಹಿಳಾ ನಿಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ. ವಿದೇಶಿ ಪ್ರಜೆಗಳನ್ನು ವಾಪಸ್ ಕಳುಹಿಸಲು ಪೊಲೀಸ್ ಇಲಾಖೆ ಕಸರತ್ತು ನಡೆಸುವ ಯೋಜನೆಯಲ್ಲಿದೆ.

ಅಕ್ರಮ ವಲಸಿಗರು ಬೇಕೆಂದೇ ಸಣ್ಣಪುಟ್ಟ ಕೇಸ್ ಹಾಕಿಸಿಕೊಳ್ತಾರೆ; ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಳೂರು ನಗರದಲ್ಲಿ ಅಕ್ರಮ ವಲಸಿಗರದ್ದು ಭಾರೀ ಸಮಸ್ಯೆ ಇದೆ. ಅವರು ಬೇಕೆಂದೇ ಸಣ್ಣಪುಟ್ಟ ಕೇಸ್ ಹಾಕಿಸಿಕೊಳ್ಳುತ್ತಾರೆ. ಪ್ರಕರಣ ಮುಗಿಯೋವರೆಗೂ ಹೊರಗೆ ಹೋಗೋ ಹಾಗಿಲ್ಲ. ಇಲ್ಲೇ ನೆಲೆಸುವ ಪ್ರಯತ್ನವೂ ಆಗುತ್ತಿದೆ. ಈಗ ಅಂತವರನ್ನ ಹೊರ‌ ಕಳುಹಿಸುವ ಪ್ರಯತ್ನ ನಡೆಯುತ್ತಿದೆ. ವೀಸಾ ಅವಧಿ ಮುಗಿದವರನ್ನ ಅರೆಸ್ಟ್ ಮಾಡಬೇಕು, ಇಲ್ಲಾ ಹೊರ ದೂಡಬೇಕು. ಬೆಂಗಳೂರಲ್ಲಿ ಈ ಸಮಸ್ಯೆ ಇರುವುದನ್ನು ವಿಶೇಷವಾಗಿ ಹೇಳಿದ್ದೀನಿ ಎಂದು ಚಿಕ್ಕಮಗಳೂರಿನಲ್ಲಿ ಆಗಸ್ಟ್ 15 ರಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಇತ್ತೀಚೆಗಷ್ಟೇ ಕರ್ನಾಟಕದಲ್ಲಿ ನೆರೆಯ ದೇಶಗಳಾದ ಶ್ರೀಲಂಕಾ ಸಹಿತ ಆಫ್ರಿಕಾ, ಬಾಂಗ್ಲಾದೇಶ, ಪಾಕಿಸ್ತಾನದ ಅಕ್ರಮ ವಲಸಿಗರು ಇರುವುದು ಕೆಲವಾರು ಪ್ರಕರಣಗಳ ಮೂಲಕ ಬೆಳಕಿಗೆ ಬಂದಿತ್ತು. ಅವರು ಅಕ್ರಮವಾಗಿ ಇಲ್ಲಿಂದ ವಿದೇಶಕ್ಕೆ ತೆರಳವುದು, ಸ್ಥಳೀಯರ ಬಳಿ ಕಾರ್ಮಿಕರಾಗಿ ದುಡಿಯುತ್ತಿರುವ ಬಗ್ಗೆ ಹೇಳಿ ಇಲ್ಲಿ ಇರುತ್ತಿರುವುದು ತಿಳಿದುಬಂದಿತ್ತು. ಭಾರತದಲ್ಲಿ ಆಧಾರ್ ಕಾರ್ಡ್ ಕೂಡ ಮಾಡಿಸಿಕೊಳ್ಳುತ್ತಿದ್ದ ಬಗ್ಗೆ ತಿಳಿದುಬಂದಿತ್ತು. ನಂತರ ವಿದೇಶಕ್ಕೆ ಮಾನವ ಕಳ್ಳಸಾಗಣೆ ಮಾಡುತ್ತಿರುವ ಪ್ರಕರಣಗಳನ್ನೂ ಪೊಲೀಸರು ಪತ್ತೆ ಹಚ್ಚಿದ್ದರು.

ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ವೇಳೆ ಬೃಹತ್ ಮಾನವ ಕಳ್ಳಸಾಗಣೆ ವಿಚಾರ ಬಹಿರಂಗವಾಗಿತ್ತು. ಮಾನವ ಕಳ್ಳಸಾಗಣೆ ದಂಧೆಯ ಕಿಂಗ್‌ಪಿನ್‌ ಸೇರಿ ನಾಲ್ವರನ್ನು ಬಂಧಿಸಲಾಗಿತ್ತು. ಬೆಂಗಳೂರು ಪೊಲೀಸರು ನೀಡಿದ ಮಾಹಿತಿ ಮೇರೆಗೆ ಬಾಂಗ್ಲಾದಲ್ಲಿ ಆರೋಪಿಗಳನ್ನು ಅಲ್ಲಿನ ಪೊಲೀಸರು ಬಂಧಿಸಿದ್ದರು.

ಹಿಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವಧಿಯಲ್ಲಿಯೂ ಈ ಬಗ್ಗೆ ಸಾಕಷ್ಟು ಚರ್ಚೆಗಳಾಗಿತ್ತು. ಕರ್ನಾಟಕದಲ್ಲಿರುವ ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಅಕ್ರಮ ವಲಸಿಗರನ್ನು ರಾಜ್ಯದಿಂದ ಹೊರಕ್ಕೆ ಕಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಜೂನ್ 13 ರಂದು ತಿಳಿಸಿದ್ದರು. ಮಾಧ್ಯಮದ ಜೊತೆ ಮಾತನಾಡಿದ ಅವರು, ಸಂಬಂಧಪಟ್ಟ ಅಧಿಕಾರಿಗಳಿಗೆ ರಾಜ್ಯದಲ್ಲಿ ಇರುವ ಅಕ್ರಮ ವಲಸಿಗರನ್ನು ಪತ್ತೆಹಚ್ಚಲು ತಿಳಿಸಲಾಗಿದೆ ಎಂದು ಹೇಳಿದ್ದರು.

ಇದನ್ನೂ ಓದಿ: 

ಬೆಂಗಳೂರಿನಲ್ಲಿ ಕಾಂಪೌಂಡ್ ಹಾರಿ ಎಸ್ಕೇಪ್ ಆದ 5 ವಿದೇಶಿ ಮಹಿಳೆಯರು! ಪೊಲೀಸರಿಂದ ತೀವ್ರ ಹುಡುಕಾಟ

ಎಚ್ಚೆತ್ತ ಬೆಂಗಳೂರು ಪೊಲೀಸರು: ರಾಜಧಾನಿಯಲ್ಲಿ ಅಕ್ರಮವಾಗಿ ನೆಲೆಸಿರುವ 678 ವಿದೇಶಿಗರು; 27 ಮಂದಿಯ ಗಡಿಪಾರು ಪ್ರಕ್ರಿಯೆ ಶುರು

(Bengaluru Police list 663 illegal residents of 58 countries in city)

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ