ಬೆಂಗಳೂರಿನಲ್ಲಿ ಪ್ರತಿಭಟನಾಕಾರರ ಕೈಯಿಂದ ಪೊಲೀಸ್ ಜೀಪ್ ಸೇರಿದ ಗಣೇಶನ ವಿಗ್ರಹ; ವಿಡಿಯೋಗೆ ಭಾರೀ ವಿರೋಧ

ಮಂಡ್ಯದ ನಾಗಮಂಗಲದಲ್ಲಿ ಗಣೇಶ ಉತ್ಸವದ ವೇಳೆ ನಡೆದ ಕೋಮುಗಲಭೆಯನ್ನು ವಿರೋಧಿಸಿ ಹಿಂದೂ ಕಾರ್ಯಕರ್ತರು ಬೆಂಗಳೂರಿನಲ್ಲಿ ಗಣೇಶನ ವಿಗ್ರಹವನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನಾಕಾರರನ್ನು ಚದುರಿಸಿದ ಪೊಲೀಸರು ಅವರ ಕೈಯಲ್ಲಿದ್ದ ಗಣೇಶನನ್ನು ಹೊತ್ತುಕೊಂಡು ಹೋಗಿ ಪೊಲೀಸ್ ಜೀಪ್​ನಲ್ಲಿಟ್ಟುಕೊಂಡಿದ್ದಾರೆ. ಈ ವಿಡಿಯೋ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದರಿಂದಾಗಿ ಬೆಂಗಳೂರು ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದಾರೆ.

ಬೆಂಗಳೂರಿನಲ್ಲಿ ಪ್ರತಿಭಟನಾಕಾರರ ಕೈಯಿಂದ ಪೊಲೀಸ್ ಜೀಪ್ ಸೇರಿದ ಗಣೇಶನ ವಿಗ್ರಹ; ವಿಡಿಯೋಗೆ ಭಾರೀ ವಿರೋಧ
ಪೊಲೀಸ್ ಜೀಪ್ ಸೇರಿದ ಗಣೇಶನ ವಿಗ್ರಹ
Follow us
ಸುಷ್ಮಾ ಚಕ್ರೆ
|

Updated on: Sep 14, 2024 | 5:44 PM

ಬೆಂಗಳೂರು: ಬೆಂಗಳೂರಿನಲ್ಲಿ ಪೊಲೀಸ್ ವ್ಯಾನ್‌ನಲ್ಲಿ ಗಣೇಶನ ವಿಗ್ರಹ ಇರುವ ಫೋಟೋಗಳು, ವಿಡಿಯೋಗಳು ಭಾರೀ ಚರ್ಚೆಗೆ ಕಾರಣವಾಗಿವೆ. ಮಂಡ್ಯದಲ್ಲಿ ಗಣೇಶ ಉತ್ಸವದ ವೇಳೆ ನಡೆದ ಕೋಮುಗಲಭೆಯಲ್ಲಿ ಕಲ್ಲು ತೂರಾಟಗಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಘರ್ಷಣೆಯ ನಂತರ ಬಂಧಿತರಾಗಿರುವ ಹಿಂದೂ ಸದಸ್ಯರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ವತಿಯಿಂದ ಬೆಂಗಳೂರಿನ ಟೌನ್​ಹಾಲ್ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ಗಣಪತಿ ವಿಗ್ರಹವನ್ನು ಹಿಡಿದುಕೊಂಡೇ ಪ್ರತಿಭಟನೆ ಮಾಡಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಪೊಲೀಸ್​ ಬಸ್​ಗೆ ಹತ್ತಿಸಿ, ಅವರ ಕೈಯಲ್ಲಿದ್ದ ಗಣೇಶ ವಿಗ್ರಹವನ್ನು ಹೊತ್ತುಕೊಂಡು ಪೊಲೀಸ್ ಜೀಪ್​ನೊಳಗೆ ಇಟ್ಟುಕೊಂಡಿದ್ದಾರೆ. ಇದರ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಇದನ್ನೂ ಓದಿ: ಮಸೀದಿ ಮುಂದೆ ಡ್ಯಾನ್ಸ್ ಮಾಡಬಾರದು ಎಂದರೆ ಪಾಕಿಸ್ತಾನ, ಬಾಂಗ್ಲಾಕ್ಕೆ ಹೋಗಲಿ; ಬಸನಗೌಡ ಯತ್ನಾಳ್ ವಾಗ್ದಾಳಿ

ಸೆ.12ರಂದು ನಾಗಮಂಗಲ ತಾಲೂಕಿನಲ್ಲಿ ನಡೆದ ನಿಮಜ್ಜನ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೆಂಗಳೂರಿನ ಟೌನ್‌ಹಾಲ್ ಬಳಿ ಗಣೇಶ ಮೂರ್ತಿ ಹೊತ್ತ ಪ್ರತಿಭಟನಾಕಾರರ ಗುಂಪೊಂದು ಪ್ರತಿಭಟನೆ ನಡೆಸಿತು. ಕಲ್ಲು ತೂರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಘರ್ಷಣೆಯ ನಂತರ ಬಂಧಿಸಲ್ಪಟ್ಟ ಹಿಂದೂ ಸದಸ್ಯರ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಯಿತು.

ಆದರೆ, ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಹೀಗಾಗಿ, ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು ಸುಮಾರು 40 ವ್ಯಕ್ತಿಗಳನ್ನು ಬಂಧಿಸಿದರು. ಈ ವೇಳೆ ಗಣೇಶನ ವಿಗ್ರಹವನ್ನು ಪ್ರತಿಭಟನಾಕಾರರಿಂದ ತೆಗೆದುಕೊಂಡು ಪೊಲೀಸ್ ವ್ಯಾನ್‌ನಲ್ಲಿ ಇರಿಸಲಾಯಿತು. ಇದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಪೊಲೀಸರು ಗಣೇಶನ ಮೂರ್ತಿಯನ್ನು ಪೊಲೀಸ್ ವಾಹನದಲ್ಲಿರಿಸುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆದರೆ, ಪ್ರತಿಭಟನಾಕಾರರಿಂದ ವಶಪಡಿಸಿಕೊಂಡು ಪೊಲೀಸ್​ ಜೀಪ್​ನಲ್ಲಿ ಸುರಕ್ಷಿತವಾಗಿರಿಸಲಾಗಿದ್ದ ಗಣೇಶನ ವಿಗ್ರಹವನ್ನು ಪೊಲೀಸರೇ ವಿಸರ್ಜನೆ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮಂಡ್ಯ ಗಲಭೆ: ನಾಗಮಂಗಲಕ್ಕೆ ಬಾರದಂತೆ ಪ್ರಮೋದ್ ಮುತಾಲಿಕ್​ಗೆ ನಿರ್ಬಂಧ

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಅಗೌರವ ತೋರುತ್ತಿದೆ ಮತ್ತು ಪರಿಸ್ಥಿತಿಯನ್ನು ತಪ್ಪಾಗಿ ನಿಭಾಯಿಸುತ್ತಿದೆ ಎಂದು ಹಲವು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಧಾರ್ಮಿಕ ಆಚರಣೆಗಳನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದ ಅವರು ಗಣಪತಿಗೆ ಅವಮಾನ ಮಾಡಲಾಗಿದೆ. ಇದಕ್ಕೆ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ