ಬೆಂಗಳೂರು: ಬೆಂಗಳೂರಿನಲ್ಲಿ ಪೊಲೀಸ್ ವ್ಯಾನ್‌ನಲ್ಲಿ ಗಣೇಶನ ವಿಗ್ರಹ ಇರುವ ಫೋಟೋಗಳು, ವಿಡಿಯೋಗಳು ಭಾರೀ ಚರ್ಚೆಗೆ ಕಾರಣವಾಗಿವೆ. ಮಂಡ್ಯದಲ್ಲಿ ಗಣೇಶ ಉತ್ಸವದ ವೇಳೆ ನಡೆದ ಕೋಮುಗಲಭೆಯಲ್ಲಿ ಕಲ್ಲು ತೂರಾಟಗಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಘರ್ಷಣೆಯ ನಂತರ ಬಂಧಿತರಾಗಿರುವ ಹಿಂದೂ ಸದಸ್ಯರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ವತಿಯಿಂದ ಬೆಂಗಳೂರಿನ ಟೌನ್‌ಹಾಲ್ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಗಣಪತಿ ವಿಗ್ರಹವನ್ನು ಹಿಡಿದುಕೊಂಡೇ ಪ್ರತಿಭಟನೆ ಮಾಡಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಪೊಲೀಸ್ ಬಸ್ಗೆ ಹತ್ತಿಸಿ, ಅವರ ಕೈಯಲ್ಲಿದ್ದ ಗಣೇಶ ವಿಗ್ರಹವನ್ನು ಹೊತ್ತುಕೊಂಡು ಪೊಲೀಸ್ ಜೀಪ್ನೊಳಗೆ ಇಟ್ಟುಕೊಂಡಿದ್ದಾರೆ. ಇದರ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
Many Right wing accounts including BJP Ministers are sharing videos and images claiming @BlrCityPolice have disrespected by detaining Ganesh idol.
Fact : The protestors had come near Townhall with the idol of Ganesha. As per city rules, protests are only allowed at Freedom… pic.twitter.com/DeoTF6NPIE
— Mohammed Zubair (@zoo_bear) September 14, 2024
ಇದನ್ನೂ ಓದಿ: ಮಸೀದಿ ಮುಂದೆ ಡ್ಯಾನ್ಸ್ ಮಾಡಬಾರದು ಎಂದರೆ ಪಾಕಿಸ್ತಾನ, ಬಾಂಗ್ಲಾಕ್ಕೆ ಹೋಗಲಿ; ಬಸನಗೌಡ ಯತ್ನಾಳ್ ವಾಗ್ದಾಳಿ
ಸೆ.12ರಂದು ನಾಗಮಂಗಲ ತಾಲೂಕಿನಲ್ಲಿ ನಡೆದ ನಿಮಜ್ಜನ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೆಂಗಳೂರಿನ ಟೌನ್‌ಹಾಲ್ ಬಳಿ ಗಣೇಶ ಮೂರ್ತಿ ಹೊತ್ತ ಪ್ರತಿಭಟನಾಕಾರರ ಗುಂಪೊಂದು ಪ್ರತಿಭಟನೆ ನಡೆಸಿತು. ಕಲ್ಲು ತೂರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಘರ್ಷಣೆಯ ನಂತರ ಬಂಧಿಸಲ್ಪಟ್ಟ ಹಿಂದೂ ಸದಸ್ಯರ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಯಿತು.
Karnataka Cops carefully carrying Ganesha Idol and place it empty police van .
Where is the disrespect here? Share this video max 🔥 #NarendraModi pic.twitter.com/u5xQwHPbrS
— Surbhi (@SurrbhiM) September 14, 2024
ಆದರೆ, ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಹೀಗಾಗಿ, ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು ಸುಮಾರು 40 ವ್ಯಕ್ತಿಗಳನ್ನು ಬಂಧಿಸಿದರು. ಈ ವೇಳೆ ಗಣೇಶನ ವಿಗ್ರಹವನ್ನು ಪ್ರತಿಭಟನಾಕಾರರಿಂದ ತೆಗೆದುಕೊಂಡು ಪೊಲೀಸ್ ವ್ಯಾನ್‌ನಲ್ಲಿ ಇರಿಸಲಾಯಿತು. ಇದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಪೊಲೀಸರು ಗಣೇಶನ ಮೂರ್ತಿಯನ್ನು ಪೊಲೀಸ್ ವಾಹನದಲ್ಲಿರಿಸುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆದರೆ, ಪ್ರತಿಭಟನಾಕಾರರಿಂದ ವಶಪಡಿಸಿಕೊಂಡು ಪೊಲೀಸ್ ಜೀಪ್ನಲ್ಲಿ ಸುರಕ್ಷಿತವಾಗಿರಿಸಲಾಗಿದ್ದ ಗಣೇಶನ ವಿಗ್ರಹವನ್ನು ಪೊಲೀಸರೇ ವಿಸರ್ಜನೆ ಮಾಡಿದ್ದಾರೆ ಎನ್ನಲಾಗಿದೆ.
ಗಣೇಶೋತ್ಸವ ಹಿಂದೂಗಳ ಧಾರ್ಮಿಕ ಶ್ರದ್ಧೆ ಹಾಗೂ ಸಾಂಸ್ಕೃತಿಕ ಸಂಗಮದ ದ್ಯೋತಕ. ಈ ಉತ್ಸವದ ಆಚರಣೆಗೆ ಎಲ್ಲೆ, ಕಟ್ಟುಪಾಡುಗಳನ್ನು ಮೀರಿ ಅಬಾಲವೃದ್ಧರಾದಿಯಾಗಿ ಪ್ರತಿಯೊಬ್ಬರೂ ಸಂಭ್ರಮಿಸುವ ಉತ್ಸವದ ಹಬ್ಬ. ಹಿಂದೂಗಳ ಧಾರ್ಮಿಕ ಆಚಾರ-ವಿಚಾರಗಳಲ್ಲಿ ಮೊದಲ ಪೂಜೆ ವಿಘ್ನ ನಿವಾರಿಸುವ ವಿನಾಯಕನಿಗೆ ಸಲ್ಲಿಸಲಾಗುತ್ತದೆ. ಈ ಕಾರಣದಿಂದಾಗಿಯೂ ಗಣೇಶನಿಗೆ… pic.twitter.com/LHc8LVWTpk
— Vijayendra Yediyurappa (@BYVijayendra) September 14, 2024
ಇದನ್ನೂ ಓದಿ: ಮಂಡ್ಯ ಗಲಭೆ: ನಾಗಮಂಗಲಕ್ಕೆ ಬಾರದಂತೆ ಪ್ರಮೋದ್ ಮುತಾಲಿಕ್ಗೆ ನಿರ್ಬಂಧ
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಅಗೌರವ ತೋರುತ್ತಿದೆ ಮತ್ತು ಪರಿಸ್ಥಿತಿಯನ್ನು ತಪ್ಪಾಗಿ ನಿಭಾಯಿಸುತ್ತಿದೆ ಎಂದು ಹಲವು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಧಾರ್ಮಿಕ ಆಚರಣೆಗಳನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದ ಅವರು ಗಣಪತಿಗೆ ಅವಮಾನ ಮಾಡಲಾಗಿದೆ. ಇದಕ್ಕೆ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.
ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ