Bengaluru New Year: ಹೊಸ ವರ್ಷಾಚರಣೆ ಸಿಸಿ ಟಿವಿ ಜತೆ ಡ್ರೋನ್ ಹದ್ದಿನ ಕಣ್ಣು

ನ್ಯೂ ಇಯರ್​ ದಿನ ಯಾವುದೆ ಅಹಿತಕರ ಘಟನೆಗಳು ನಡೆಯದಂತೆ ಬೆಂಗಳೂರು ನಗರ ಪೊಲೀಸರು ಡ್ರೋನ್​ ಕಣ್ಗಾವಲಿನ ಮೊರೆ ಹೋಗಿದ್ದಾರೆ.

Bengaluru New Year: ಹೊಸ ವರ್ಷಾಚರಣೆ ಸಿಸಿ ಟಿವಿ ಜತೆ ಡ್ರೋನ್ ಹದ್ದಿನ ಕಣ್ಣು
ಡ್ರೋಣ ಕ್ಯಾಮೆರಾ
Follow us
| Updated By: ವಿವೇಕ ಬಿರಾದಾರ

Updated on:Dec 28, 2022 | 8:42 PM

ಬೆಂಗಳೂರು: ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ರಾಜಧಾನಿ ಬೆಂಗಳೂರಲ್ಲಿ ವಿಜೃಂಭಣೆಯಿಂದ ಹೊಸ ವರ್ಷಾಚರಣೆ (New Year) ಸಾಧ್ಯವಾಗಿರಲಿಲ್ಲ. ಹೀಗಾಗಿ ಈ ಬಾರಿ ಸಿಲಿಕಾನ್​ ಸಿಟಿ ಜನರು ಅದ್ಧೂರಿಯಾಗಿ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಸಿದ್ಧರಾಗಿದ್ದಾರೆ. ಆದರೆ ರಾಜ್ಯ ಸರ್ಕಾರ (Karnataka Government) ಈ ಸಂಭ್ರಮಾಚರಣೆಗೆ ಕೆಲವೊಂದು ಕೊರೊನಾ ಕಟ್ಟು ಪಡುಗಳನ್ನು ವಿಧಿಸಿದೆ. ಈಗ ನ್ಯೂ ಇಯರ್​ ದಿನ ಯಾವುದೆ ಅಹಿತಕರ ಘಟನೆಗಳು ನಡೆಯದಂತೆ ಬೆಂಗಳೂರು ನಗರ ಪೊಲೀಸರು ಡ್ರೋನ್​ (Drone) ಕಣ್ಗಾವಲಿನ ಮೊರೆ ಹೋಗಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ಹಿಂದುಸ್ಥಾನ ಟೈಮ್ಸ್​ ವರದಿ ಮಾಡಿದೆ.

ಹೌದು ನಗರ ಪೊಲೀಸರು ​ಈಗಾಗಲೆ ರೌಡಿ ಶೀಟರ್​ಗಳಿಗೆ ವಾರ್ನ್​​ ಮಾಡಿದ್ದು, ನ್ಯೂ ಇಯರ್​ದಂದು ಬಾಲ ಬಿಚ್ಚದಂತೆ ಖಡಕ್​ ಸಂದೇಶ ರವಾನಿಸಿದ್ದಾರೆ. ಮೋಜು ಮಸ್ತಿಯಲ್ಲಿ ಮೈ ಮೇಲೆ ಪ್ರಜ್ಞೆ ಇಲ್ಲದಂತೆ ವರ್ತಿಸುವವರ, ಬೇಕೆಂತಲೇ ಕಾಲು ಕೆದರಿಗೊಂಡು ಜಗಳ ತೆಗೆಯುವವರ ಮತ್ತು ಕುಡಿದ ಮತ್ತಿನಲ್ಲಿ ಬೇಕಾ ಬಿಟ್ಟಿ ವಾಹನ ಚಲಾಯಿಸುವವರ ಮೇಲೆ ಕಣ್ಣಿಡಲು ಹೆಚ್ಚಿನ ಸಿಸಿ ಕ್ಯಾಮೆರಾ ಮತ್ತು ಡ್ರೋನ್​ ಕಣ್ಗಾವಲು ಇರಲಿದೆ.

ಇದನ್ನೂ ಓದಿ: ಜನವರಿ 27ರಿಂದ 3 ದಿನಗಳ ಕಾಲ ಹಂಪಿ ಉತ್ಸವ: ಜಿಲ್ಲಾಡಳಿತ ತೀರ್ಮಾನ

ನ್ಯೂ ಇಯರ್​ದಂದು ಕುಡಿದು ಟೈಟಾದವರಿಗೆ ಪೊಲೀಸರಿಂದ ಆ್ಯಂಬುಲೆನ್ಸ್ ವ್ಯವಸ್ಥೆ

ಹೊಸ ವರ್ಷಾಚರಣೆ ವೇಳೆ ಎದುರಾಗುವ ಸಮಸ್ಯೆಗಳನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಸದ್ಯ ಡಿಸೆಂಬರ್ 31ರ ರಾತ್ರಿ ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಮುಳುಗಿ ತೇಲಾಡುವ ಮಂದಿಯನ್ನು ಸೇಫ್ಟಿಗೆ ಬೆಂಗಳೂರು ಪೊಲೀಸ್ ಇಲಾಖೆ ಹೊಸ ಪ್ರಯೋಗಕ್ಕೆ ಮುಂದಾಗಿದೆ.

ಯುವಕ, ಯುವತಿ ಸೇರಿದಂತೆ ಯಾರೇ ಕುಡಿದು ಟೈಟಾದರೂ ಅವರಿಗೆ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗುತ್ತಿದೆ.ಡಿ. 31ರ ರಾತ್ರಿ ಮಾತ್ರ ಈ ಸೇವೆ ಲಭ್ಯವಿರಲಿದೆ. ಆಗ್ನೇಯ ವಿಭಾಗ ಡಿಸಿಪಿ ಸಿಕೆ ಬಾಬಾ ಅವರು ಈ ಮೂಲಕ ಮತ್ತೊಂದು ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ನ್ಯೂ ಇಯರ್ ಸಮಯದಲ್ಲಿ ಮದ್ಯಪ್ರಿಯರಿಗೆ ಸಮಸ್ಯೆಯಾಗದಂತೆ ನೀಡಿಕೊಳ್ಳಲು ಪೊಲೀಸರು ಬಂಪರ್ ಪ್ಲಾನ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:  ಶಾಲಾ ಕೊಠಡಿಗೆ ನುಗ್ಗಿ ಶಿಕ್ಷಕನ ಮೇಲೆ ಮಾನಸಿಕ ಅಸ್ವಸ್ಥನಿಂದ ಏಕಾಏಕಿ ಹಲ್ಲೆ

ಕೋರಮಂಗಲ, ಮಡಿವಾಳ, ಎಲೆಕ್ಟ್ರಾನಿಕ್ ಸಿಟಿ, ಹೆಚ್​ಎಸ್​ಆರ್ ಲೇಔಟ್ ನಲ್ಲಿ ಸಂಪೂರ್ಣ ಭದ್ರತೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಗ್ನೇಯ ವಿಭಾಗದಲ್ಲಿ 108 ಪಬ್, ರೆಸ್ಟೋರೆಂಟ್​ಗಳಿವೆ, ಪ್ರತಿಯೊಂದು ಪಬ್, ರೆಸ್ಟೋರೆಂಟ್ ಮುಂದೆಯೂ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತಿದೆ. ಎಣ್ಣೆ ಹೊಡೆದು ಫುಲ್ ಟೈಟಾಗಿ ಪ್ರಜ್ಞೆ ತಪ್ಪಿ ಬೀಳುವವರಿಗೆ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗುತ್ತಿದೆ. ಕುಡಿದ ಅಮಲಿನಲ್ಲಿ ಕುಣಿದು ಕುಪ್ಪಳಿಸಿ, ಗಾಯ ಮಾಡಿಕೊಂಡೋರಿಗೆ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗುತ್ತಿದೆ. ಅಥವಾ ಆಕಸ್ಮಿಕವಾಗಿ ಸೆಲೆಬ್ರೇಷನ್ ವೇಳೆ ಯಾರಿಗಾದ್ರು ಆರೋಗ್ಯ ತಪ್ಪಿದ್ರೆ ಪೊಲೀಸರಿಂದಲೇ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗುತ್ತೆ. ಕೂಡಲೇ ಆ್ಯಂಬುಲೆನ್ಸ್ ನಲ್ಲಿ ಬಿದ್ದ ಕುಡುಕರನ್ನ ಸಾಗಿಸಿ ಆಸ್ಪತ್ರೆಗೆ ದಾಖಲಿಸಲಾಗುತ್ತೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:39 pm, Wed, 28 December 22

ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ