AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಭರ್ಜರಿ ಕಾರ್ಯಾಚರಣೆ, 40 ಮಂದಿ ವಶಕ್ಕೆ

Bangalore News: ಬೆಂಗಳೂರಿನ ವೈಟ್‌ಫೀಲ್ಡ್ ವಿಭಾಗದಲ್ಲಿ ಅಕ್ರಮ ವಲಸಿಗರ ಪತ್ತೆಗಾಗಿ ಪೊಲೀಸರು ಶನಿವಾರ ಬೆಳ್ಳಂಬೆಳಗ್ಗೆಯೇ 30 ಕಡೆ ಭರ್ಜರಿ ದಾಳಿ ನಡೆಸಿದ್ದಾರೆ. ವರ್ತೂರು ಭಾಗದ ಶೆಡ್‌ಗಳಲ್ಲೂ ತಪಾಸಣೆ ನಡೆಸಲಾಗಿದ್ದು, ದಾಖಲೆಗಳಲ್ಲಿ ಅನುಮಾನ ಕಂಡುಬಂದ ಸುಮಾರು 40 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಭರ್ಜರಿ ಕಾರ್ಯಾಚರಣೆ, 40 ಮಂದಿ ವಶಕ್ಕೆ
ವೈಟ್‌ಫೀಲ್ಡ್ ವಿವಿಧ ಪ್ರದೇಶಗಳಲ್ಲಿರುವ ಶೆಡ್‌ಗಳಲ್ಲಿ ಪೊಲೀಸರಿಂದ ತಪಾಸಣೆImage Credit source: tv9
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 08, 2026 | 10:34 AM

Share

ಮುಖ್ಯಾಂಶಗಳು

  • ವೈಟ್‌ಫೀಲ್ಡ್‌ನಲ್ಲಿ 30 ಕಡೆ ಪೊಲೀಸರ ದಾಳಿ
  • ಅನುಮಾನಾಸ್ಪದ 40 ಮಂದಿ ಪೊಲೀಸ್ ವಶಕ್ಕೆ
  • ಅಕ್ರಮ ವಲಸಿಗರ ವಿರುದ್ಧ ಬೃಹತ್ ಕಾರ್ಯಾಚರಣೆ

ಬೆಂಗಳೂರು, ಆಗಸ್ಟ್ 8: ಅಕ್ರಮ ಬಾಂಗ್ಲಾದೇಶಿ ವಲಸಿಗರ ಪತ್ತೆಗಾಗಿ ಬೆಂಗಳೂರಿನ (Bengaluru) ವೈಟ್‌ಫೀಲ್ಡ್ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು 30 ಕಡೆ ದಾಳಿ ನಡೆಸಿ, ಅನುಮಾನಾಸ್ಪದವಾಗಿ ಕಂಡುಬಂದ ಸುಮಾರು 40 ಮಂದಿಯನ್ನು ವಶಕ್ಕೆ ಪಡೆದು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ವರ್ತೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿರುವ ಶೆಡ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ನೂರಕ್ಕೂ ಹೆಚ್ಚು ಶೆಡ್‌ಗಳಿರುವ ಪ್ರದೇಶಗಳಲ್ಲೂ ಕಾರ್ಯಾಚರಣೆ ಕೈಗೊಂಡಿದ್ದು, ಅಲ್ಲಿರುವ ಪ್ರತಿಯೊಬ್ಬ ವ್ಯಕ್ತಿ ಹಾಗೂ ಮಹಿಳೆಯರ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

ವಶಕ್ಕೆ ಪಡೆದವರ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ವೋಟರ್ ಐಡಿ ಸೇರಿದಂತೆ ವಿವಿಧ ದಾಖಲೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ದಾಖಲೆಗಳಲ್ಲಿ ಅಥವಾ ಮಾಹಿತಿ ನೀಡುವಲ್ಲಿ ಗೊಂದಲ ಕಂಡುಬಂದಿರುವವರನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ.

ದಾಖಲೆಗಳ ಪರಿಶೀಲಿಸಿ ಕ್ರಮ

ಮುಖ್ಯವಾಗಿ ಎಸ್‌ಐಆರ್ (SIR) ಮಾಹಿತಿ ಸೇರಿದಂತೆ ಅವರ ಸ್ವಂತ ಊರು, ಪೋಸ್ಟ್ ಆಫೀಸ್ ಹಾಗೂ ಸ್ಥಳೀಯ ಪೊಲೀಸ್ ಠಾಣೆಯ ವಿವರಗಳನ್ನು ಪೊಲೀಸರು ಕೇಳುತ್ತಿದ್ದಾರೆ. ದಾಖಲೆಗಳಲ್ಲಿರುವ ಮಾಹಿತಿಗೂ ವ್ಯಕ್ತಿಗಳು ನೀಡುವ ಮಾಹಿತಿಗೂ ಹೊಂದಾಣಿಕೆ ಇದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.

ಅನುಮಾನ ಕಂಡುಬಂದರೆ FRROಗೆ ಹಾಜರು

ಪೊಲೀಸ್ ಕಮಿಷನರ್ ಸೂಚನೆ ಮೇರೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಅಡಾವತ್ ತಿಳಿಸಿದ್ದಾರೆ. ಕಾರ್ಯಾಚರಣೆ ವೇಳೆ ವಿದೇಶಿ ಪ್ರಜೆಗಳು ಪತ್ತೆಯಾದರೆ ಅವರ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ದಾಖಲೆಗಳಲ್ಲಿ ಅನುಮಾನ ಕಂಡುಬಂದಲ್ಲಿ ಹೆಚ್ಚಿನ ಪರಿಶೀಲನೆ ನಡೆಸಿ, ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (Foreigners Regional Registration Office/FRRO) ಮುಂದೆ ಹಾಜರುಪಡಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಾವನೂರು ಬಡಾವಣೆ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆ!

ಅಗತ್ಯ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಕ್ರಮವಾಗಿ ನೆಲೆಸಿರುವುದು ದೃಢಪಟ್ಟ ವಿದೇಶಿ ಪ್ರಜೆಗಳನ್ನು ಅವರ ದೇಶಕ್ಕೆ ವಾಪಸ್ ಕಳುಹಿಸುವ (ಡಿಪೋರ್ಟ್) ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ