International day against drug abuse: ಬೆಂಗಳೂರಲ್ಲಿ ಕಳೆದ ಒಂದು ವರ್ಷದಲ್ಲಿ 57 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯ ವಶ

ಇಂದು ವಿಶ್ವ ಮಾದಕ ವಸ್ತು ವಿರೋಧಿ ದಿನ. ಇತ್ತೀಚಿನ ವರ್ಷಗಳಲ್ಲಿ ಯುವಕರು ಮಾದಕ ದ್ರವ್ಯ ವ್ಯಸನಿಗಳಾಗುತ್ತಿದ್ದಾರೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರು ಅನೇಕ ಶಿಸ್ತು ಕ್ರಮಗಳನ್ನು ಕೈಗೊಂಡಿದ್ದಾರೆ.

International day against drug abuse: ಬೆಂಗಳೂರಲ್ಲಿ ಕಳೆದ ಒಂದು ವರ್ಷದಲ್ಲಿ 57 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯ ವಶ
ಸಾಂರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Jun 26, 2023 | 12:46 PM

ಬೆಂಗಳೂರು: ಇಂದು (ಜೂ.26) ವಿಶ್ವ ಮಾದಕ ವಸ್ತು ವಿರೋಧಿ ದಿನ (International day against drug abuse) ಇತ್ತೀಚಿನ ವರ್ಷಗಳಲ್ಲಿ ಯುವಕರು ಮಾದಕ ದ್ರವ್ಯ (Drug) ವ್ಯಸನಿಗಳಾಗುತ್ತಿದ್ದಾರೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರು (Bengaluru City Police) ಶಿಸ್ತು ಕ್ರಮಗಳನ್ನು ಕೈಗೊಂಡಿದ್ದಾರೆ. ಬೆಂಗಳೂರು ಪೊಲೀಸರು 2022 ಮತ್ತು 2023 ನೇ ಸಾಲಿನಲ್ಲಿ ಮಾದಕ ವಸ್ತು ಸೇವನೆ ಮತ್ತು ಮಾರಾಟ ವಿರುದ್ಧ ಒಟ್ಟು 6191 ಪ್ರಕರಣಗಳು ದಾಖಲಾಗಿದ್ದು, 117 ಕೋಟಿ ಮೌಲ್ಯದ 6261 ಕೆಜಿ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ.

ಮಾದಕ ವಸ್ತುಗಳಲ್ಲಿ 6074 ಕೆಜಿ ಗಾಂಜಾ ಆಯಿಲ್, 5.5 ಕೆಜಿ ಬ್ರೌನ್ ಶುಗರ್, ಸಿಂಥೆಟಿಕ್, 2.554 ಕೆಜಿ ಅಫೀಮು ಮತ್ತು 15,689 ಕೆಜಿ ಎಂಡಿಎಂಎ ಸೇರಿ ವಿವಿಧ ವಿಧದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ ಕೂಡ ಇದೆ. ಆರೋಪಿಗಳು ಅಂತರಾಜ್ಯ ಮತ್ತು ವಿದೇಶಗಳಿಂದ  ಬೆಂಗಳೂರಿಗೆ ಡ್ರಗ್ಸ್ ತಂದು ಮಾರಾಟ ಮಾಡುತ್ತಿದ್ದರು. ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು, ಗೋವಾ, ಆಫ್ರಿಕಾ ಹಾಗೂ ಡಾರ್ಕ್ ವೆಬ್​ನಿಂದ ಬರುವ ಜನರು ನಗರದಲ್ಲಿ ಡ್ರಗ್ಸ್ ಮಾರುತ್ತಿದ್ದರು.

ಇವರು ಯುವತಿಯರು, ಟೆಕ್ಕಿಗಳು, ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು. 77,323 ಭಾರತೀಯರು, 159 ವಿದೇಶಿ ಪ್ರಜೆಗಳನ್ನು ಬಂಧಸಿಲಾಗಿದೆ. 943 ಡ್ರಗ್ ಪೆಡ್ಲರಗಳ ಮೇಲೆ ಮತ್ತು 5248 ಡ್ರಗ್ ಸೇವನೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳಲಾಗಿದೆ. 117 ಕೋಟಿ ಮೌಲ್ಯದ 6261 ಕೆಜಿ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ.  ಇಂದು ಮಾದಕವಸ್ತು ಮಾರಾಟ ಮತ್ತು ಸೇವನೆ ವಿರೋಧಿ ದಿನ ಹಿನ್ನೆಲೆ ವಶಪಡಿಸಿಕೊಂಡ ಮಾದಕವಸ್ತುಗಳನ್ನು ಪೊಲೀಸರು ದಾಬಸ್​ಪೇಟೆಯ ಕೈಗಾರಿಕಾ ಪ್ರದೇಶದಲ್ಲಿ ನಾಶಪಡಿಸಿದ್ದಾರೆ.

ಕಳೆದ ಕೆಲವು ತಿಂಗಳಿನಿಂದ ಬೆಂಗಳೂರು ಪೊಲೀಸರು ಮಾದಕ ವ್ಯಸನಿ ಹಾಗೂ ಮಾರಾಟಗಾರರ ವಿರುದ್ಧ ಸಮರ ಸಾರಿದ್ದು, ಅನೇಕರನ್ನು ಬಂಧಿಸಿದ್ದಾರೆ. ಇತ್ತೀಚಿಗೆ ನಗರದ ಬಾರ್​ ಹಾಗೂ ಪಬ್​​ಗಳ ಮೇಲೆ ದಾಳಿ ಮಾಡಿ ಮಾದಕ ವ್ಯಸನಿಗಳಾಗಿದ್ದ ಹಲವರನ್ನು ವಶಕ್ಕೆ ಪಡೆದುಕೊಂಡಿದ್ದರು. ಅಲ್ಲದೇ ಮಾದಕವಸ್ತು ಮಾರಾಟ ಮತ್ತು ಸೇವನೆಯಲ್ಲಿ ತೊಡಗಿದ್ದ ಅನೇಕ ವಿದೇಶಿಯರನ್ನು ಗಡೀಪಾರು ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪೊಲೀಸರ ಕಾರ್ಯಾಚರಣೆ; ಮಾದಕ ವಸ್ತು ಸೇವಿಸುತ್ತಿದ್ದ 18 ಜನ ಸೇರಿ 3 ಡ್ರಗ್ ಪೆಡ್ಲರ್​ಗಳ ಬಂಧನ

ಮೇ ಕೊನೆಯ ವಾರದಲ್ಲಿ ಅಧಿಕಾರ ವಹಿಸಿಕೊಂಡ ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಲೋಕ್ ಮೋಹನ್ ಅವರು ಮುಂದಿನ ವರ್ಷಗಳಲ್ಲಿ ಬೆಂಗಳೂರನ್ನು ಮಾದಕ ದ್ರವ್ಯ ಮುಕ್ತ ನಗರವನ್ನಾಗಿ ಮಾಡಲು ಇಲಾಖೆಗೆ ನಿರ್ದೇಶನ ನೀಡಿದರು.

ನಂತರ ಮಾತನಾಡಿದ ಅವರು, ಇಂದು ಎಲ್ಲ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಬೆಂಗಳೂರಿನಲ್ಲಿ ಡ್ರಗ್ಸ್ ಹಾವಳಿ ಮತ್ತು ಅದನ್ನು ನಿಭಾಯಿಸುವ ಬಗ್ಗೆ ಚರ್ಚಿಸಿದ್ದೇವೆ. ಬೆಂಗಳೂರು ಶೀಘ್ರದಲ್ಲೇ ಮಾದಕ ದ್ರವ್ಯ ಮುಕ್ತ ನಗರವಾಗಲಿದ್ದು, ಅದಕ್ಕಾಗಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನಾವು ಯೋಜನೆಯನ್ನು ಹೊಂದಿದ್ದೇವೆ ಮತ್ತು ಮುಂಬರುವ ತಿಂಗಳುಗಳಲ್ಲಿ ನಾವು ಎಲ್ಲಾ ಪೆಡ್ಲರ್‌ಗಳನ್ನು ವಶಪಡಿಸಿಕೊಳ್ಳುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:06 am, Mon, 26 June 23

ಗೌತಮಿನ ಸ್ವಮ್ಮಿಂಗ್​ಪೂಲ್​ಗೆ ತಳ್ಳಿದ ಮೋಕ್ಷಿತಾ; ಹೆಚ್ಚಿತು ದ್ವೇಷ
ಗೌತಮಿನ ಸ್ವಮ್ಮಿಂಗ್​ಪೂಲ್​ಗೆ ತಳ್ಳಿದ ಮೋಕ್ಷಿತಾ; ಹೆಚ್ಚಿತು ದ್ವೇಷ
ಮನೆಯಲ್ಲಿ ಕೆಲವು ವಸ್ತುಗಳನ್ನು ಭೂಮಿ ಮೇಲೆ ಇಡಬಾರದು: ಇದೆ ಅಧ್ಯಾತ್ಮ ಕಾರಣ!
ಮನೆಯಲ್ಲಿ ಕೆಲವು ವಸ್ತುಗಳನ್ನು ಭೂಮಿ ಮೇಲೆ ಇಡಬಾರದು: ಇದೆ ಅಧ್ಯಾತ್ಮ ಕಾರಣ!
ದಿನ ಭವಿಷ್ಯ; ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲ!
ದಿನ ಭವಿಷ್ಯ; ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲ!
ಜಾಮೀನು ಸಿಕ್ಕ 6 ದಿನದ ಬಳಿಕ ಶಿವಮೊಗ್ಗ ಜೈಲಿನಿಂದ ಆರೋಪಿ ಜಗದೀಶ್ ರಿಲೀಸ್​
ಜಾಮೀನು ಸಿಕ್ಕ 6 ದಿನದ ಬಳಿಕ ಶಿವಮೊಗ್ಗ ಜೈಲಿನಿಂದ ಆರೋಪಿ ಜಗದೀಶ್ ರಿಲೀಸ್​
ಮುಖ್ಯಮಂತ್ರಿ ಮಾತಾಡುತ್ತಿದ್ದರೂ ಹೊರಗೆ ಹೋದ ವಿರೋಧಪಕ್ಷಗಳ ಶಾಸಕರು
ಮುಖ್ಯಮಂತ್ರಿ ಮಾತಾಡುತ್ತಿದ್ದರೂ ಹೊರಗೆ ಹೋದ ವಿರೋಧಪಕ್ಷಗಳ ಶಾಸಕರು
ಜಮೀರ್ ಉತ್ತರದಿಂದ ಬಿಜೆಪಿ ಸಮಾಧಾನವಾಗದಿದ್ದಾಗ ಮುಖ್ಯಮಂತ್ರಿ ಉತ್ತರ
ಜಮೀರ್ ಉತ್ತರದಿಂದ ಬಿಜೆಪಿ ಸಮಾಧಾನವಾಗದಿದ್ದಾಗ ಮುಖ್ಯಮಂತ್ರಿ ಉತ್ತರ
ಪ್ರಿನ್ಸಿಪಾಲ್​ಗೆ ಅಡುಗೆ ಮಾಡಿಕೊಡಲು 8ನೇ ಕ್ಲಾಸ್ ಹುಡುಗನಿಗೆ ಒತ್ತಾಯ
ಪ್ರಿನ್ಸಿಪಾಲ್​ಗೆ ಅಡುಗೆ ಮಾಡಿಕೊಡಲು 8ನೇ ಕ್ಲಾಸ್ ಹುಡುಗನಿಗೆ ಒತ್ತಾಯ
ಚೈತ್ರಾ ಮೋಸದಾಟ; ಮನ ಒಲಿಸಲು ಹೊಸ ಉಪಾಯ ಕಂಡುಹಿಡಿದ ರಜತ್
ಚೈತ್ರಾ ಮೋಸದಾಟ; ಮನ ಒಲಿಸಲು ಹೊಸ ಉಪಾಯ ಕಂಡುಹಿಡಿದ ರಜತ್
ಸದನದಲ್ಲಿ ಸಚಿವ ಜಮೀರ್ ಅಹ್ಮದ್ ನೆರವಿಗೆ ಧಾವಿಸಿದ ಸಿದ್ದರಾಮಯ್ಯ
ಸದನದಲ್ಲಿ ಸಚಿವ ಜಮೀರ್ ಅಹ್ಮದ್ ನೆರವಿಗೆ ಧಾವಿಸಿದ ಸಿದ್ದರಾಮಯ್ಯ
ಹೊರಡುವ ಮುನ್ನ ಸುದೀಪ್, ಉಪೇಂದ್ರಗೆ ಶುಭ ಹಾರೈಸಿದ ಶಿವಣ್ಣ
ಹೊರಡುವ ಮುನ್ನ ಸುದೀಪ್, ಉಪೇಂದ್ರಗೆ ಶುಭ ಹಾರೈಸಿದ ಶಿವಣ್ಣ