ಬೆಂಗಳೂರು: ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸ್ತಿದ್ದ ಯುವಕನನ್ನು ರಕ್ಷಿಸಿದ ಪೊಲೀಸರು
ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸ್ತಿದ್ದ ಯುವಕನನ್ನು ಪೊಲೀಸರು ರಕ್ಷಿದ ಘಟನೆ ಬೆಂಗಳೂರು ನಗರದ ಮೆಜೆಸ್ಟಿಕ್ ಬಳಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ಸ್ನೇಹಿತ ನೀಡಿದ ಮಾಹಿತಿ ಆಧರಿಸಿ ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು, ಲಾಡ್ಜ್‌ವೊಂದರಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸ್ತಿದ್ದ ಯುವಕನನ್ನು ರಕ್ಷಿಸಿದ್ದಾರೆ.
ಬೆಂಗಳೂರು, ಅ.10: ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸ್ತಿದ್ದ ಯುವಕನನ್ನು ಪೊಲೀಸರು ರಕ್ಷಿದ ಘಟನೆ ಬೆಂಗಳೂರು (Bengaluru) ನಗರದ ಮೆಜೆಸ್ಟಿಕ್ ಬಳಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ಸ್ನೇಹಿತ ನೀಡಿದ ಮಾಹಿತಿ ಆಧರಿಸಿ ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು, ಲಾಡ್ಜ್‌ವೊಂದರಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸ್ತಿದ್ದ ಯುವಕನನ್ನು ರಕ್ಷಿಸಿದ್ದಾರೆ.
ಮೆಜೆಸ್ಟಿಕ್ ಬಳಿಯ ಲಾಡ್ಜ್‌ವೊಂದರಲ್ಲಿ ತನ್ನ ಸ್ನೇಹಿತ ಆತ್ಮಹತ್ಯೆಗೆ ಯತ್ನಿಸ್ತಿದ್ದ ಬಗ್ಗೆ ತಿಳಿದ ಯುವಕನೊಬ್ಬ ಉಪ್ಪಾರಪೇಟೆ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ಪೊಲೀಸರು ಹಲವು ಲಾಡ್ಜ್‌ಗಳಲ್ಲಿ ಪರಿಶೀಲಿಸಿದ್ದಾರೆ. ಈ ವೇಳೆ ಲಾಡ್ಜ್‌ವೊಂದರಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸ್ತಿದ್ದಾಗ ಲಾಡ್ಜ್‌ನ ರೂಂ ಬಾಗಿಲು ಮುರಿದು ಯುವಕನನ್ನು ರಕ್ಷಿಸಿದ್ದಾರೆ.
On October 8, 2023, at 16:34 hours, under @upparpetpsbcp limits, a concerned public called #Namma112 , reporting that his friend was attempting suicide at a lodge in Majestic. Immediately, Hoysala-78 police officials, rushed to the location. They swiftly searched the lodges… pic.twitter.com/jjD67zSlgL
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) October 10, 2023
ಇದನ್ನೂ ಓದಿ: ಕೋಲಾರ: ಎರಡು ತಿಂಗಳಿಂದ ವೇತನ ನೀಡಿಲ್ಲವೆಂದು ಪೌರಕಾರ್ಮಿಕ ಆತ್ಮಹತ್ಯೆಗೆ ಯತ್ನ; ಇಲ್ಲಿದೆ ವಿವರ
ಪೊಲೀಸರ ಸಮಯ ಪ್ರಜ್ಞೆ ಹಾಗೂ ಮಿಂಚಿನ ಕಾರ್ಯಾಚರಣೆಯಿಂದ ಯುವಕ ಬದುಕುಳಿದಿದ್ದಾನೆ. ಯುವಕನ ಪ್ರಾಣ ರಕ್ಷಿಸಿದ ಸಿಬ್ಬಂದಿಗೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:05 pm, Tue, 10 October 23