AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 5 ಕೋಟಿ ರೂ ಡ್ರಗ್ಸ್ ಸೀಜ್: ಆಫ್ರಿಕಾ ಮೂಲದ ಇಬ್ಬರ ಬಂಧನ

ಸಂಪಿಗೇಹಳ್ಳಿ, ಹೆಚ್​​ಎಸ್​​ಆರ್​​, ಯಲಹಂಕ ಸೇರಿದಂತೆ ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ ಐದು ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ್ದಾರೆ. ಜೊತೆಗೆ ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ಬೆಂಗಳೂರಿನಲ್ಲಿ ವಾಸವಿದ್ದು, ಡ್ರಗ್ಸ್​ ಮಾರಾಟ ಮಾಡುತ್ತಿದ್ದ ಆಫ್ರಿಕಾ ಮೂಲದ ಇಬ್ಬರನ್ನು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ 5 ಕೋಟಿ ರೂ ಡ್ರಗ್ಸ್ ಸೀಜ್: ಆಫ್ರಿಕಾ ಮೂಲದ ಇಬ್ಬರ ಬಂಧನ
ಬಂಧಿತರು
ಗಂಗಾಧರ​ ಬ. ಸಾಬೋಜಿ
|

Updated on:Aug 20, 2025 | 7:55 AM

Share

ಬೆಂಗಳೂರು, ಆಗಸ್ಟ್​ 20: ನಗರದಲ್ಲಿ ಡ್ರಗ್ಸ್ (Drugs) ಮಾರಾಟ ಎಗ್ಗಿಲ್ಲದೇ ಸಾಗುತ್ತಿದೆ. ಖಾಕಿ ಪಡೆ ಎಷ್ಟೇ ಕಣ್ಣಿಟ್ಟರು ಡ್ರಗ್ಸ್ ಪೆಡ್ಲರ್​ಗಳ ಆಟ ಮುಂದುವರಿದಿದೆ. ಅದರಲ್ಲೂ ವಿದೇಶಿಗರ ಹಾವಳಿ ಮಿತಿಮೀರಿದ್ದು, ವೀಸಾ ಅವಧಿ ಮುಗಿದಿದರೂ ಬೆಂಗಳೂರಲ್ಲಿ (bangaluru) ವಾಸಿಸುತ್ತಿದ್ದಾರೆ. ಇದೀಗ ಪೊಲೀಸರು ಒಂದಷ್ಟು ಪೆಡ್ಲರ್​ಗಳ ಹೆಡೆಮುರಿ ಕಟ್ಟಿದ್ದಾರೆ. ಜೊತೆಗೆ ಒಂದಲ್ಲ ಎರಡಲ್ಲ ಬರೋಬ್ಬರಿ ಐದು ಕೋಟಿ ರೂ. ಡ್ರಗ್ಸ್ ಸೀಜ್ ಮಾಡಿದ್ದಾರೆ.

ಆಫ್ರಿಕಾ ಮೂಲದ ಜೊಯಲ್ ಕಾಬೊಂಗ್, ಜೊಯ್ ಸಂಡೇ ಬಂಧಿತ ಪ್ರಜೆಗಳು. ಜೊಯಲ್ ಕಾಬೊಂಗ್​ 12 ವರ್ಷಗಳ ಹಿಂದೆ ವಿದ್ಯಾರ್ಥಿ ವೀಸಾದಡಿ ಭಾರತಕ್ಕೆ ಬಂದಿದ್ದ. ಅದೇ ರೀತಿಯಾಗಿ ಜೊಯ್ ಸಂಡೇ ಸಹ ಮೂರ ವರ್ಷಗಳ ಹಿಂದೆ ಭಾರತಕ್ಕೆ ಬಂದಿದ್ದಳು. ವೀಸಾ ಅವಧಿ ಮುಗಿದಿದರೂ ಬೆಂಗಳೂರಲ್ಲಿ  ವಾಸವಾಗಿದ್ದರು. ಈ ಇಬ್ಬರು ಮತ್ತೊಬ್ಬನಿಂದ ಡ್ರಗ್ಸ್ ಖರೀದಿ ಮಾಡಿ ಮಾರಾಟ ಮಾಡುತ್ತಿದ್ದರು. ಆದರೆ ಆ.15ರ ಸಂಜೆ ಬೆಟ್ಟದಾಮಸಪುರದಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಸದ್ಯ ಬಂಧಿತರಿಂದ 2.150 ಕೆಜಿ ಎಂಡಿಎಂಎ ವಶಕ್ಕೆ ಪಡೆದು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಸೀಮಂತ್ ಕುಮಾರ್ ಸಿಂಗ್​ ಹೇಳಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರಿನಲ್ಲಿ ಪಬ್​​​​ಗಳ ಮೇಲೆ ದಾಳಿ: ವಿದೇಶಿ ಡ್ರಗ್​ ಪೆಡ್ಲರ್​ಗಳ ಬಂಧನ
Image
ರೆಡಿಮೇಡ್ ಬಟ್ಟೆಗಳ ಪ್ಯಾಕ್​ನಲ್ಲಿ ಡ್ರಗ್ಸ್ ಸೇಲ್! ನೈಜೀರಿಯಾ ಪ್ರಜೆಗಳು ವಶ
Image
ಪಾರ್ಟಿಗಳಲ್ಲಿ ಡ್ರಗ್ಸ್ ಸಿಕ್ಕರೆ ರೆಸಾರ್ಟ್, ಹೋಂ ಸ್ಟೇ ಮಾಲೀಕರ ಮೇಲೆ ಕೇಸ್
Image
ಬೆಂಗಳೂರಿನಲ್ಲಿ 3 ಕೋಟಿ ರೂ. ಮೌಲ್ಯದ ಡ್ರಗ್ಸ್​, ಗಾಂಜಾ ಜಪ್ತಿ

ಇದನ್ನೂ ಓದಿ: ಬೆಂಗಳೂರು: ಪಾರ್ಟಿಗಳಲ್ಲಿ ಡ್ರಗ್ಸ್ ಕಂಡುಬಂದರೆ ರೆಸಾರ್ಟ್, ಹೋಂ ಸ್ಟೇ, ಹೋಟೆಲ್ ಮಾಲೀಕರ ಮೇಲೂ ಕೇಸ್

ಇತ್ತ ಸಿಸಿಬಿ ಪೊಲೀಸರು ಡ್ರಗ್ಸ್​ ಪೆಡ್ಲಿಂಗ್ ಮಾಡುತ್ತಿದ್ದ ಆಫ್ರಿಕನ್ ಮೂಲದ ಜಾನ್ ಡಿಕೊಸ್ಟೋ ಎಂಬಾತನನ್ನ ಬಂಧಿಸಿದ್ದು, 40 ಲಕ್ಷ ರೂ ಮೌಲ್ಯದ 255 ಗ್ರಾಂ. ತೂಕದ ಎಂಡಿಎಂಎ ಕ್ರಿಸ್ಟೆಲ್ ವಶಕ್ಕೆ ಪಡೆಯಲಾಗಿದೆ. ಟೂರಿಸ್ಟ್ ವೀಸಾದಡಿಯಲ್ಲಿ ಬಂದು ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ಜಾನ್, ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದ. ಆದರೆ ಪರಿಚಯಸ್ಥರು ಹಾಗೂ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪಬ್​​​​ಗಳ ಮೇಲೆ ದಾಳಿ: ಸಿಕ್ಕಿಬಿದ್ದ ವಿದೇಶಿ ಡ್ರಗ್​ ಪೆಡ್ಲರ್​ಗಳು

ಇನ್ನು ಸಂಪಿಗೇಹಳ್ಳಿ ಪೊಲೀಸರು, ಹೆಚ್​​ಎಸ್​​ಆರ್​​ ಪೊಲೀಸರು, ಯಲಹಂಕ ಪೊಲೀಸರು ಡ್ರಗ್ಸ್ ಮತ್ತು ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನ ಬಂಧಿಸಿದ್ದಾರೆ. ಈ ಬಂಧಿತ ಆರೋಪಿಗಳಿಂದ 31 ಲಕ್ಷ ರೂ ಮೌಲ್ಯದ ಮಾದಕ ವಸ್ತುಗಳನ್ನ ವಶಪಡಿಸಿಕೊಂಡಿದ್ದು, ಆರೋಪಿಗಳನ್ನ ಜೈಲಿಗಟ್ಟಲಾಗಿದೆ.

ವರದಿ: ಪ್ರದೀಪ್ ಚಿಕ್ಕಾಟಿ, Tv9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:54 am, Wed, 20 August 25