AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪೊಲೀಸರು ಅಲರ್ಟ್, ಬೈಕ್​ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 6.5 ಕೆ.ಜಿ ಚಿನ್ನ ವಶ

ಫೆಬ್ರವರಿ 22 ರಂದು ಜೆಸಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಹೋಂಡಾ ಆಕ್ಟೀವಾದಲ್ಲಿ ತ್ರಿಬಲ್ ರೈಡಿಂಗ್ ತೆರಳ್ತಿದ್ದವರ ಮೇಲೆ ಪೊಲೀಸರಿಗೆ ಅನುಮಾನ ಬಂದಿದ್ದು ತಪಾಸಣೆ ಮಾಡಿದಾಗ ಚಿನ್ನಾಭರಣ ಪತ್ತೆಯಾಗಿದೆ.

ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪೊಲೀಸರು ಅಲರ್ಟ್, ಬೈಕ್​ನಲ್ಲಿ ಅಕ್ರಮವಾಗಿ  ಸಾಗಿಸುತ್ತಿದ್ದ 6.5 ಕೆ.ಜಿ ಚಿನ್ನ ವಶ
ಬೈಕ್​ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 6.5 ಕೆ.ಜಿ ಚಿನ್ನ ವಶ
TV9 Web
| Edited By: |

Updated on:Mar 02, 2023 | 10:53 AM

Share

ಬೆಂಗಳೂರು: ಚುನಾವಣೆ ಸಮೀಪಿಸ್ತಿದ್ದಂತೆ(Karnataka Assembly Elections 2023) ಬೆಂಗಳೂರು ಪೊಲೀಸರು(Bengaluru Police) ಅಲರ್ಟ್ ಆಗಿದ್ದಾರೆ. ಎಸ್.ಜೆ. ಪಾರ್ಕ್ ಪೊಲೀಸರು(SJ Park Police) ನಾಕಾಬಂಧಿ ತಪಾಸಣೆ ವೇಳೆ ಬರೋಬ್ಬರಿ 6.5 ಕೆಜಿ ಚಿನ್ನಾಭರಣ ಸೀಜ್ ಮಾಡಿದ್ದಾರೆ(Gold Seize) . ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಿದ ಖದೀಮರನ್ನು ಹಿಡಿದು 6.5 ಕೆಜಿ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಚಿನ್ನಾಭರಣ ಸಾಗಿಸುತ್ತಿದ್ದ ನಿಕುಂಜ್ ಬಾಬಿಲ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಫೆಬ್ರವರಿ 22 ರಂದು ಜೆಸಿ ರಸ್ತೆಯಲ್ಲಿ ವಾಹನ ತಪಸಾಣೆ ವೇಳೆ ದ್ವಿಚಕ್ರ ವಾಹನ ಹೋಂಡಾ ಆಕ್ಟೀವಾದಲ್ಲಿ ತ್ರಿಬಲ್ ರೈಡಿಂಗ್ ತೆರಳ್ತಿದ್ದವರ ಮೇಲೆ ಪೊಲೀಸರಿಗೆ ಅನುಮಾನ ಬಂದಿದ್ದು ವಾಹನ ನಿಲ್ಲಿಸಿದ್ದಾರೆ. ಬಳಿಕ ವಾಹನ ತಪಾಸಣೆ ನಡೆಸಿದಾಗ ಚಿನ್ನಾಭರಣ ಪತ್ತೆಯಾಗಿದೆ. ಚಿನ್ನಾಭರಣ ಸಮೇತ ವಾಹನ ಸವಾರ ನಿಕುಂಜ್ ಬಾಬಿಲ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ತಾಯಿ‌ ಶವದೊಂದಿಗೆ 2 ದಿನ ಕಳೆದ ಬಾಲಕ, ಅಪ್ಪನ ಸ್ನೇಹಿತರು ಮನೆಗೆ ಬಂದಾಗ ಘಟನೆ ಬಯಲು

ತಡರಾತ್ರಿ ಪತ್ತೆಯಾದ ಚಿನ್ನಾಭರಣಕ್ಕೆ ದಾಖಲೆ ನೀಡಲು ಸವಾರರು ತಡಬಡಾಯಿಸಿದ್ದಾರೆ. ಹವಾಲ ದಂಧೆ ಬಗ್ಗೆ ಶಂಕೆ ಹಿನ್ನಲೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಚುನಾವಣೆ ಸಮೀಪ ಹಿನ್ನಲೆ ಬೆಂಗಳೂರು ಪೊಲೀಸರು ಅನುಮಾನಾಸ್ಪದ ವ್ಯಕ್ತಿಗಳು, ವಸ್ತುಗಳ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ. ನಗರದಿಂದ ಹೊರಹೋಗುವ ಪ್ರಮುಖ ರಸ್ತೆಗಳು, ನಗರದ ಪ್ರಮುಖ ಬಸ್ ನಿಲ್ದಾಣಗಳ ಸಂಪರ್ಕಿಸುವ ಸ್ಥಳಗಳಲ್ಲಿ ನಾಕಾಬಂಧಿ ಹಾಕಲಾಗಿದೆ. ತಡರಾತ್ರಿ ಅಲರ್ಟ್ ಆಗಿ ಬ್ಯಾರಿಕೇಡ್ ಹಾಕಿ ಪರಿಶೀಲನೆ ನಡೆಸಲಾಗಿದೆ.

ಬೆಂಗಳೂರಿನಲ್ಲಿ ಬಾರ್​​ ಕ್ಯಾಶಿಯರ್ ಹತ್ಯೆ

ಬೆಂಗಳೂರು: ಬಾರ್​​ ಕ್ಯಾಶಿಯರ್ ತಲೆ ಮೇಲೆ ಕಲ್ಲು ಎತ್ತಿಹಾಕಿ​​​ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆರ್​ಎಂಸಿ ಯಾರ್ಡ್​​​ ಬಳಿ ನಡೆದಿದೆ. ಶೇಖರ್ ಬಾರ್​ನ ಕ್ಯಾಶಿಯರ್​​ ಶಿವಕುಮಾರ್ ಕೊಲೆಯಾದ ವ್ಯಕ್ತಿ. ಮಾತಿಗೆ ಮಾತು ಬೆಳೆದು ಪರಸ್ಪರ ಅವಾಚ್ಯ ಶಬ್ಧದಿಂದ ನಿಂದನೆ ತಾರಕಕ್ಕೇರಿದೆ. ಬಳಿಕ ಕರ್ಣ ಅಲಿಯಾಸ್ ಸಿದ್ದೋಜಿ ರಾವ್ , ಗಿರೀಶ್ ಎಂಬುವರು, ಶೇಖರ್ ಬಾರ್​ನ ಕ್ಯಾಶಿಯರ್​​ ಶಿವಕುಮಾರ್ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. ಈ ಬಗ್ಗೆ ಆರ್ ಎಂ ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:45 am, Thu, 2 March 23

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!