AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಧಿ ಮೀರಿ ವಾಸವಾಗಿರುವ ವಿದೇಶಿ ಪ್ರಜೆಗಳ ಪತ್ತೆಗೆ ಮುಂದಾದ ಬೆಂಗಳೂರು ಪೊಲೀಸ್​​: ಮನೆ ಮಾಲೀಕರ ವಿರುದ್ಧ ಕೇಸ್

ಬೆಂಗಳೂರು ಪೊಲೀಸರು ಅವಧಿ ಮೀರಿ ವಾಸವಾಗಿರುವ ವಿದೇಶಿ ಪ್ರಜೆಗಳ ಪತ್ತೆ ಮಾಡುತ್ತಿದ್ದಾರೆ. ಆ ಮೂಲಕ ಸರಿಯಾದ ದಾಖಲಾತಿ ಪಡೆಯದೆ ವಿದೇಶಿ ಪ್ರಜೆಗಳಿಗೆ ಮನೆ ನೀಡಿದ ಮಾಲೀಕರಿಗೂ ಶಾಕ್​​ ಎದುರಾಗಿದೆ. ಈಗಾಗಲೇ ಯಲಹಂಕ ಪೊಲೀಸ್ ಠಾಣೆ ಸೇರಿದಂತೆ ಒಟ್ಟು 23 ಪ್ರಕರಣಗಳು ದಾಖಲಾಗಿವೆ.

ಅವಧಿ ಮೀರಿ ವಾಸವಾಗಿರುವ ವಿದೇಶಿ ಪ್ರಜೆಗಳ ಪತ್ತೆಗೆ ಮುಂದಾದ ಬೆಂಗಳೂರು ಪೊಲೀಸ್​​: ಮನೆ ಮಾಲೀಕರ ವಿರುದ್ಧ ಕೇಸ್
ಪ್ರಾತಿನಿಧಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on: Sep 05, 2025 | 8:55 AM

Share

ಬೆಂಗಳೂರು, ಸೆಪ್ಟೆಂಬರ್​ 05: ಬೆಂಗಳೂರಿಗೆ (bangaluru) ಸಾಕಷ್ಟು ಜನರು ಬಂದು ನೆಲೆಸುತ್ತಾರೆ. ಅದೇ ರೀತಿಯಾಗಿ ವಿದೇಶಿ ಪ್ರಜೆಗಳು (Foreign nationals) ಕೂಡ ಆಗಮಿಸುತ್ತಾರೆ. ಆದರೆ ಇವರು ತಮ್ಮ ವೀಸಾ ಅವಧಿ ಮುಗಿದರೂ ಇಲ್ಲೇ ಉಳಿದುಕೊಳ್ಳುತ್ತಾರೆ. ಈ ರೀತಿ ಅವಧಿ ಮೀರಿ ವಾಸವಾಗಿರುವ ವಿದೇಶಿ ಪ್ರಜೆಗಳ ಪತ್ತೆಗೆ ಇದೀಗ ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಅಷ್ಟೇ ಅಲ್ಲದೆ ಹಣದಾಸೆಗೆ ಸರಿಯಾದ ದಾಖಲಾತಿ ಪಡೆಯದೆ ಮನೆ ನೀಡಿದ ಮಾಲೀಕರಿಗೂ ಶಾಕ್​​ ಎದುರಾಗಿದ್ದು, ಪ್ರಕರಣಗಳು ದಾಖಲಾಗಿವೆ.

ಬೆಂಗಳೂರಿಗೆ ಬರುವ ವಿದೇಶಿ ಪ್ರಜೆಗಳು ತಮ್ಮ ಪಾಸ್​​ ಪೋರ್ಟ್​, ವೀಸಾ ಅವಧಿ ಮುಗಿದಿದ್ದರು ಸಹ ಅಕ್ರಮವಾಗಿ ನಗರದಲ್ಲಿ ವಾಸವಿರುತ್ತಾರೆ. ಈ ವಾಸವಿದ್ದವರೂ ಹಣ ಸಂಪಾದನೆಗೆ ಅನ್ಯ ಮಾರ್ಗಗಳನ್ನು ಹಿಡಿದು ಬಳಿಕ ಪೊಲೀಸರ ಅತಿಥಿಗಳಾದ ಸಾಕಷ್ಟು ಉದಾಹರಣೆಗಳಿವೆ. ಪೊಲೀಸ್ ಠಾಣೆಗೆ ಸಿ ಫಾರಂ ಸಲ್ಲಿಸದೆ, ವಿದೇಶಿ ಪ್ರಜೆಗಳ ದಾಖಲಾತಿ ಪಡೆಯದೆ ಮನೆ ನೀಡಿದ್ದ ಮಾಲೀಕರ ವಿರುದ್ಧ ರಿಜಿಸ್ಟ್ರೇಷನ್ ಆಫ್ ಫಾರಿನರ್ಸ್ ಆ್ಯಕ್ಟ್ ಅಡಿ ಕೇಸ್​ ದಾಖಲಾಗಿವೆ.

ಎಲ್ಲೆಲ್ಲಿ ಪ್ರಕರಣಗಳು ದಾಖಲು

ಅಮೃತಹಳ್ಳಿ, ಬಾಗಲೂರು, ಸಂಪಿಗೆಹಳ್ಳಿ, ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ತಲಾ 1 ಪ್ರಕರಣ ದಾಖಲಾಗಿವೆ. ಕೊಡಿಗೆಹಳ್ಳಿ, ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ತಲಾ 2, ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ 3, ಕೊತ್ತನೂರು ಪೊಲೀಸ್ ಠಾಣೆಯಲ್ಲಿ 5, ಯಲಹಂಕ ಪೊಲೀಸ್ ಠಾಣೆಯಲ್ಲಿ 7 ಸೇರಿದಂತೆ ಪೂರ್ವ ವಿಭಾಗದಲ್ಲಿ ಒಟ್ಟು 23 ಪ್ರಕರಣ ದಾಖಲಾಗಿವೆ.

ವಿದೇಶಿ ಪ್ರಜೆಗಳಿಗೆ ಬಾಡಿಗೆ ಕೊಡುವ ಮನೆ ಮಾಲೀಕರಿಗೆ ಗೈಡ್​ಲೈನ್ಸ್

ಇನ್ನು ಇತ್ತೀಚೆಗೆ ವಿದೇಶಿ ಪ್ರಜೆಗಳಿಗೆ ಬಾಡಿಗೆ ಕೊಡುವ ಮನೆ ಮಾಲೀಕರಿಗೆ ವೈಟ್​ಫೀಲ್ಡ್ ವಿಭಾಗದ ಡಿಸಿಪಿಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿತ್ತು. ಮನೆ ಮಾಲೀಕರು ಸಿ ಫಾರಂ ಅನ್ನು ಎಫ್​​ಆರ್​ಆರ್​​ಓಗೆ ಸಲ್ಲಿಸಬೇಕು. ಬಾಡಿಗೆದಾರರ ಪಾಸ್​ಪೋರ್ಟ್, ವೀಸಾ ಪ್ರತಿ ಸಂಗ್ರಹಿಸಬೇಕು. ಬಾಡಿಗೆ ನೀಡುವ ಮೊದಲು ಸ್ಥಳೀಯ ಠಾಣೆಗೆ ಮಾಹಿತಿ ನೀಡಬೇಕು.

ಇದನ್ನೂ ಓದಿ: ಸಿಸಿಬಿ ಭರ್ಜರಿ ಕಾರ್ಯಚರಣೆ: ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ 9 ವಿದೇಶಿಗರ ಬಂಧನ

ಮಾನ್ಯ ವೀಸಾ ಅಥವಾ ಅನುಮತಿ ಇಲ್ಲದೆ ವಾಸಿಸಲು ಅವಕಾಶ ನೀಡಬಾರದು. ನೊಂದಾಯಿತ ಬಾಡಿಗೆ ಒಪ್ಪಂದ ಮಾಡಬೇಕು. ವಿದೇಶಿ ಬಾಡಿಗೆದಾರರ ಬಗ್ಗೆ ಮಾಹಿತಿ ನೀಡದಿದ್ದರೆ ಕಾನೂನು ಕ್ರಮಕೈಗೊಳ್ಳಲಾಗುವುದು. ಅನುಮಾನಾಸ್ಪದ ಚಟುವಟಿಕೆ ಕಂಡು ಬಂದರೆ ಪೊಲೀಸರಿಗೆ ತಿಳಿಸಬೇಕು ಎಂದು ಗೈಡ್​ಲೈನ್ಸ್ ಬಿಡುಗಡೆ ಮಾಡಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ