AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇಫ್ ಸಿಟಿ, 112 ತುರ್ತು ಸೇವೆ: ಬೆಂಗಳೂರಲ್ಲಿ ಮಕ್ಕಳ ಸುರಕ್ಷತೆಗೆ ತಂತ್ರಜ್ಞಾನದ ಹೊಸ ಹೆಜ್ಜೆ

ಸೇಫ್ ಸಿಟಿ ಯೋಜನೆ ಮತ್ತು ನಮ್ಮ-112 ತುರ್ತು ವ್ಯವಸ್ಥೆಯಡಿ ಬೆಂಗಳೂರು ಪೊಲೀಸರು ಕಳೆದ 12 ದಿನಗಳಲ್ಲಿ ತಂತ್ರಜ್ಞಾನ ಆಧಾರಿತ ತ್ವರಿತ ಕಾರ್ಯಾಚರಣೆಗಳ ಮೂಲಕ ಕಾಣೆಯಾದ ಮತ್ತು ನಿರ್ಲಕ್ಷ್ಯಕ್ಕೊಳಗಾದ ಹಲವು ಮಕ್ಕಳನ್ನು ಕೆಲವೇ ನಿಮಿಷಗಳಲ್ಲಿ ಪತ್ತೆಹಚ್ಚಿ ಕುಟುಂಬಗಳಿಗೆ ಸುರಕ್ಷಿತವಾಗಿ ಒಪ್ಪಿಸಿದ್ದಾರೆ.  ಇದು ನಗರದಲ್ಲಿನ ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.

ಸೇಫ್ ಸಿಟಿ, 112 ತುರ್ತು ಸೇವೆ: ಬೆಂಗಳೂರಲ್ಲಿ ಮಕ್ಕಳ ಸುರಕ್ಷತೆಗೆ ತಂತ್ರಜ್ಞಾನದ ಹೊಸ ಹೆಜ್ಜೆ
ಸಾಂದರ್ಭಿಕ ಚಿತ್ರ
ಪ್ರಸನ್ನ ಹೆಗಡೆ
|

Updated on:Jan 19, 2026 | 12:04 PM

Share

ಬೆಂಗಳೂರು, ಜನವರಿ 19: ಕಳೆದ 12 ದಿನಗಳಲ್ಲಿ ಬೆಂಗಳೂರು ಸೇಫ್ ಸಿಟಿ ಯೋಜನೆಯಡಿ ತಂತ್ರಜ್ಞಾನ ಆಧಾರಿತ ತ್ವರಿತ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಿ ಕಾಣೆಯಾಗಿದ್ದ ಮತ್ತು ನಿರ್ಲಕ್ಷ್ಯವಾಗಿ ಉಳಿದಿದ್ದ ಹಲವು ಮಕ್ಕಳನ್ನು ಕೆಲವೇ ನಿಮಿಷಗಳಲ್ಲಿ ಪತ್ತೆಹಚ್ಚಿ ಕುಟುಂಬಗಳಿಗೆ ಸುರಕ್ಷಿತವಾಗಿ ಒಪ್ಪಿಸುವ ಕೆಲಸವನ್ನು ಬೆಂಗಳೂರು ಪೊಲೀಸರು ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ಮೂಲಕ ಈ ಬಗ್ಗೆ ಸ್ವರ್ತ ಇಲಾಖೆಯೇ ಮಾಹಿತಿ ಹಂಚಿಕೊಂಡಿದೆ.

ಬೆಂಗಳೂರು ಸೇಫ್ ಸಿಟಿ ಯೋಜನೆ ಹಾಗೂ ನಮ್ಮ-112 ತುರ್ತು ವ್ಯವಸ್ಥೆಯ ಮೂಲಕ ಈ ಕಾರ್ಯಾಚರಣೆ ನಡೆಸಲಾಗಿದ್ದು, ಇದರಿಂದ ಜಿಪಿಎಸ್ ಆಧಾರಿತ ಪೇಟ್ರೋಲ್ ವಾಹನಗಳ ನಿಯೋಜನೆ ಹಾಗೂ ನಿಯಂತ್ರಣ ಕೊಠಡಿ ಮತ್ತು ಸ್ಥಳೀಯ ಸಿಬ್ಬಂದಿ ನಡುವೆ ಸಮನ್ವಯ ಸಾಧ್ಯವಾಯಿತು ಎಂದು ಪೊಲೀಸರು ಹೇಳಿದ್ದಾರೆ. ನಿಯಂತ್ರಣ ಕೊಠಡಿ ಮತ್ತು ಕ್ಷೇತ್ರದಲ್ಲಿರುವ ಸಿಬ್ಬಂದಿ ನಡುವಿನ ಸಮನ್ವ ಈ ಕಾರ್ಯಾಚರಣೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ನಗರದಲ್ಲಿ ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆಗೆ ನೀಡಿರುವ ಮಹತ್ವವನ್ನು ಇದು ಸಾಬೀತು ಮಾಡಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ರಸ್ತೆ ಅಪಘಾತ ತಡೆಯಲು ಹೊಸ ತಂತ್ರಜ್ಞಾನ ಪರಿಚಯಿಸಿದ ಕೇಂದ್ರ; 2026ಕ್ಕೆ ಎಲ್ಲ ವಾಹನಗಳಿಗೆ ಅಳವಡಿಕೆ

ಮೊದಲ ಘಟನೆ 2025ರ ಡಿಸೆಂಬರ್ 27ರಂದು ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದ್ದು, ಮಾನಸಿಕವಾಗಿ ಅಸ್ಥಿರಳಾಗಿದ್ದ ಮಹಿಳೆಯೊಬ್ಬರು ಎರಡು ವರ್ಷದ ಮಗುವನ್ನು ಕರೆದೊಯ್ಯಲು ಯತ್ನಿಸಿದ್ದರು. ಘಟನೆಯನ್ನು ಗಮನಿಸಿದ ಸಹಾಯಕ ಉಪನಿರೀಕ್ಷಕರು ತಕ್ಷಣ ನಮ್ಮ-112ಗೆ ಮಾಹಿತಿ ನೀಡಿದ್ದು, ಐದು ನಿಮಿಷಗಳೊಳಗೆ ಹೋಯ್ಸಳಾ ಪೇಟ್ರೋಲ್ ವಾಹನ ಸ್ಥಳಕ್ಕೆ ತಲುಪಿ ಮಗುವನ್ನು ಸುರಕ್ಷಿತವಾಗಿ ತಾಯಿಗೆ ಒಪ್ಪಿಸಲಾಗಿದೆ.

ಅದೇ ರಾತ್ರಿ ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಣೆಯಾಗಿದ್ದ 16 ವರ್ಷದ ಮಾನಸಿಕವಾಗಿ ಸವಾಲುಗಳನ್ನು ಎದುರಿಸುತ್ತಿದ್ದ ಬಾಲಕನನ್ನು ತುರ್ತು ಕರೆ ಬಂದ ಕೆಲವೇ ನಿಮಿಷಗಳಲ್ಲಿ ಪತ್ತೆಹಚ್ಚಿ ತಾಯಿಯೊಂದಿಗೆ ಮರಳಿ ಸೇರಿಸಲಾಗಿದೆ. ಬೆಳ್ಳಂದೂರು, ರಾಜಗೋಪಾಲನಗರ, ಕಾಡುಗೋಡಿ ಹಾಗೂ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಒಂಟಿಯಾಗಿ ಕಂಡುಬಂದ ಮಕ್ಕಳನ್ನು ಪತ್ತೆಹಚ್ಚಿ ಅವರ ಕುಟುಂಬಗಳಿಗೆ ಸುರಕ್ಷಿತವಾಗಿ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜನವರಿ 14ರಂದು ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಕೆರಹಳ್ಳಿ ಫ್ಲೈಓವರ್ ಸಮೀಪ ನಡೆದಿದ್ದು, ಗದ್ದಲಭರಿತ ರಸ್ತೆಯಲ್ಲಿ ಒಂದು ಮಗುವಿನ ಓಡಾಟ ಗಮನಕ್ಕೆ ಬಂದಿದೆ. ನಾಲ್ಕು ನಿಮಿಷಗಳೊಳಗೆ ಸ್ಥಳ ತಲುಪಿದ ಪೊಲೀಸ್​​ ಸಿಬ್ಬಂದಿ ಪರಿಶೀಲನೆ ಬಳಿಕ ಮಗುವನ್ನು ಪೋಷಕರಿಗೆ ಒಪ್ಪಿಸಿದೆ. ಈ ಎಲ್ಲ ಘಟನೆಗಲಲ್ಲಿಯೂ ಪೊಲೀಸರ ಪ್ರತಿಕ್ರಿಯೆಯ ಸಮಯ 20 ನಿಮಿಷಗಳ ಒಳಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:03 pm, Mon, 19 January 26