ಬೆಂಗಳೂರು: ಅಪರಾಧ ಕೃತ್ಯ ತಡೆಗೆ ಮಾಸ್ಟರ್ ಪ್ಲಾನ್; ಪಾತಕಿಗಳ ಪತ್ತೆಗೆ ಮೊಬೈಲ್ ಅಪ್ಲಿಕೇಷನ್‌ ಬಳಕೆ

ಬೆಂಗಳೂರು ಮಹಾನಗರದಲ್ಲಿ ಅಪರಾಧ ಕೃತ್ಯ ತಡೆಯಲು ಮಾಸ್ಟರ್ ಪ್ಲ್ಯಾನ್ ರೂಪಿಸಲಾಗಿದೆ.

ಬೆಂಗಳೂರು: ಅಪರಾಧ ಕೃತ್ಯ ತಡೆಗೆ ಮಾಸ್ಟರ್ ಪ್ಲಾನ್; ಪಾತಕಿಗಳ ಪತ್ತೆಗೆ ಮೊಬೈಲ್ ಅಪ್ಲಿಕೇಷನ್‌ ಬಳಕೆ
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 13, 2022 | 9:00 PM

ಬೆಂಗಳೂರು: ಮಹಾನಗರದಲ್ಲಿ ಅಪರಾಧ ಕೃತ್ಯ ತಡೆಯಲು ಮಾಸ್ಟರ್ ಪ್ಲ್ಯಾನ್ ರೂಪಿಸಲಾಗಿದೆ. ಕೇಂದ್ರ ಸರ್ಕಾರ ಪರಿಚಯಿಸಿದ್ದ ಸಿಸಿಟಿಎನ್ಎಸ್ ಮೊಬೈಲ್ ಅಪ್ಲಿಕೇಷನ್‌ ಮೂಲಕ ಕಳೆದ 2 ತಿಂಗಳಿಂದ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ನಗರದಲ್ಲಿ ಪೊಲೀಸರು ರಾತ್ರಿ 11 ಗಂಟೆ ನಂತರ ಸಿಸಿಟಿಎನ್ಎಸ್ ಅಪ್ಲಿಕೇಷನ್‌ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ರಾತ್ರಿ ವೇಳೆ ಅನುಮಾನಸ್ಪದ ವ್ಯಕ್ತಿಗಳು, ವಾಹನಗಳನ್ನು ತಪಾಸಣೆ ನಡೆಸಿ ಅಪ್ಲಿಕೇಷನ್‌ ಮೂಲಕ ಪಾತಾಕಿಗಳನ್ನು ಪತ್ತೆ ಹಚ್ಚಲಾಗುತ್ತಿಸದೆ. ಈ ವೇಳೆ ಎಂಸಿಸಿಟಿಎನ್ಎಸ್ ಅಪ್ಲಿಕೇಷನ್‌ ನಲ್ಲಿ ಬೆರಳಚ್ಚುಗಳ ಪರಿಶೀಲನೆ ನಡೆಸಲಾಗುತ್ತದೆ.

ಈಗಾಗಲೇ ಪೊಲೀಸರ ಬಳಿಯಿರುವ ಅಪರಾಧಿಗಳ ಪಿಂಗರ್ ಪ್ರಿಂಟ್ ಜೊತೆ ಮ್ಯಾಚ್ ಮಾಡಲಾಗುತ್ತದೆ. ಬೆರಳಚ್ಚು ಪರಿಶೀಲನೆ ವೇಳೆ ಆತ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರೋದು ಕಂಡು ಬಂದರೆ ಕೂಡಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತದೆ.

ಮೊಬೈಲ್ ಸ್ನಾಚ್ ಮತ್ತು ಮನೆಗಳ್ಳತನ ಮಾಡಿದ್ದ ಆರೋಪಿಗಳ ಬಂಧನ

ಬೆಂಗಳೂರು: ಮಹಾನಗರದಲ್ಲಿ ಮೊಬೈಲ್ ಸ್ನಾಚ್ ಮತ್ತು ಮನೆಗಳ್ಳತನ ಮಾಡಿದ್ದ ಆರೋಪಿಗಳನ್ನು ಹಾಸನದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಆನಂದ್​ ಅರಸೀಕೆರೆ ರೈಲ್ವೆ ಸ್ಟೇಷನ್ ಬಳಿ ರಾತ್ರಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದನು.

ಈ ವೇಳೆ ನೈಟ್ ಬೀಟ್ ಇದ್ದ ಅರಸೀಕೆರೆ ಪೊಲೀಸ್ ಠಾಣಾ ಪೊಲೀಸರು ಅನುಮಾನಗೊಂಡು MCCTNS ಮೊಬೈಲ್ ಅಪ್ಲೀಕೇಷನ್ ಮೂಲಕ ಫಿಂಗರ್ ಪ್ರಿಂಟ್ ಸಂಗ್ರಹಿಸಿದ್ದರು. ಆಗ ಆರೋಪಿ ಆನಂದ್​ ಮೊಬೈಲ್ ಸ್ನಾಚ್ ಮತ್ತು ಮನೆಗಳ್ಳತನದಲ್ಲಿ ಭಾಗಿಯಾಗಿದ್ದಾನೆ ಎಂದು ಗೊತ್ತಾಗಿದೆ.

ಕೂಡಲೇ ಆನಂದನನ್ನು ಪೊಲೀಸರು ಬಂಧಿಸಿದ್ದಾರೆ. ಆನಂದ್ ಬಂಧನದ ಬಳಿಕ ಅರಸೀಕೆರೆ ಟೌನ್ ಪೊಲೀಸರು ಸಹಚರ ಚಂದ್ರುನನ್ನು ಬಂಧಿಸಿದ್ದಾರೆ. ಬಂಧಿತ ಆನಂದ್ ಮತ್ತು ಚಂದ್ರು ಬೆಂಗಳೂರಿನಲ್ಲಿ ಮನೆಗಳ್ಳತನದಲ್ಲಿ 30 ಗ್ರಾಂ ಚಿನ್ನಾಭರಣ ಕದ್ದಿದ್ದಾಗಿ ಬಾಯ್ಬಿಟ್ಟಿದ್ದಾರೆ. ಬಂಧಿತ ಆರೋಪಿಗಳಿಂದ 30 ಗ್ರಾಂ. ಚಿನ್ನಾಭರಣ ಮತ್ತು 90 ಮೊಬೈಲ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:11 pm, Tue, 13 September 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್