Bengaluru News: ನೈತಿಕ ಪೊಲೀಸ್​​ಗಿರಿ, ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷದ ಪೋಸ್ಟ್; ಖಡಕ್ ಎಚ್ಚರಿಕೆ ನೀಡಿದ ಬೆಂಗಳೂರು ಪೊಲೀಸರು

ದ್ವೇಷವನ್ನು ಹರಡುವ ವಿಷಯಗಳನ್ನು ಪೋಸ್ಟ್ ಮಾಡುವ ಜನರನ್ನು ತಕ್ಷಣವೇ ಬಂಧಿಸಲಾಗುವುದು. ನಾವು ಸಾಮಾಜಿಕ ಮಾಧ್ಯಮ ಸೇವಾ ಪೂರೈಕೆದಾರರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಹೇಳಿದ್ದಾರೆ.

Bengaluru News: ನೈತಿಕ ಪೊಲೀಸ್​​ಗಿರಿ, ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷದ ಪೋಸ್ಟ್; ಖಡಕ್ ಎಚ್ಚರಿಕೆ ನೀಡಿದ ಬೆಂಗಳೂರು ಪೊಲೀಸರು
ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ
Follow us
|

Updated on:Jun 07, 2023 | 7:35 PM

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷದ (Hate Messege) ಸಂದೇಶಗಳನ್ನು ಪ್ರಕಟಿಸುವುದು ಮತ್ತು ನೈತಿಕ ಪೊಲೀಸ್‌ಗಿರಿ (Moral Policing), ಅಪರಾಧಗಳ ಚಟುವಟಿಕೆಗಳ ಬಗ್ಗೆ ಬೆಂಗಳೂರು ನಗರ ಪೊಲೀಸರು (Bangalore Police) ಬುಧವಾರ ಎಚ್ಚರಿಕೆ ನೀಡಿದ್ದಾರೆ. ದ್ವೇಷಪೂರಿತ ಪೋಸ್ಟ್‌ಗಳನ್ನು ತಡೆಯುವ ವಿಚಾರವಾಗಿ ಪೊಲೀಸರಿಗೆ ಸಹಾಯ ಮಾಡಲು ಸಾಮಾಜಿಕ ಮಾಧ್ಯಮ ಸೇವಾ ಪೂರೈಕೆದಾರರು ಕೂಡ ಒಪ್ಪಿಕೊಂಡಿದ್ದಾರೆ.

ದ್ವೇಷವನ್ನು ಹರಡುವ ವಿಷಯಗಳನ್ನು ಪೋಸ್ಟ್ ಮಾಡುವ ಜನರನ್ನು ತಕ್ಷಣವೇ ಬಂಧಿಸಲಾಗುವುದು. ನಾವು ಸಾಮಾಜಿಕ ಮಾಧ್ಯಮ ಸೇವಾ ಪೂರೈಕೆದಾರರೊಂದಿಗೆ ಸಂಪರ್ಕದಲ್ಲಿದ್ದೇವೆ. ದ್ವೇಷವನ್ನು ಹರಡುವ ಅಥವಾ ಜನರ ಪ್ರತಿಷ್ಠೆಗೆ ಧಕ್ಕೆ ತರುವ ಪೋಸ್ಟ್‌ಗಳನ್ನು ಸಹಿಸಲಾಗುವುದಿಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಹೇಳಿದ್ದಾರೆ.

ಇಷ್ಟೇ ಅಲ್ಲದೆ, ಕಮಿಷನರ್ ದಯಾನಂದ ಸೇರಿದಂತೆ ಬೆಂಗಳೂರು ಪೊಲೀಸ್ ಅಧಿಕಾರಿಗಳು ನಗರದ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಕೋಮು ಸೌಹಾರ್ದತೆ ಕಾಪಾಡುವ ಕುರಿತು ಜಾಗೃತಿ ಮೂಡಿಸಲಿದ್ದಾರೆ.

ನೈತಿಕ ಪೊಲೀಸ್‌ಗಿರಿಯನ್ನು ತಡೆಯಲು ಆ್ಯಂಟಿ ಕಮ್ಯೂನಲ್ ವಿಂಗ್ ಸ್ಥಾಪಿಸಲಾಗುವುದು ಎಂದು ಮಂಗಳವಾರ ಕರ್ನಾಟಕ ಗೃಹ ಸಚಿವ ಡಾ ಜಿ ಪರಮೇಶ್ವರ ಮಂಗಳೂರಿನಲ್ಲಿ ಘೋಷಿಸಿದ್ದರು. ಕಳೆದ ವಾರ ಮಂಗಳೂರಿನ ಸೋಮೇಶ್ವರದಲ್ಲಿ ಯುವತಿಯರೊಂದಿಗೆ ವಾಯುವಿಹಾರಕ್ಕೆ ತೆರಳಿದ್ದವರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ನಾಲ್ವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ: ಗೃಹ ಸಚಿವ ಡಾ ಜಿ ಪರಮೇಶ್ವರ್

ನೈತಿಕ ಪೋಲೀಸಿಂಗ್ ಮಾಡಲು ಜನರಿಗೆ ಏನು ಹಕ್ಕಿದೆ? ಅದಕ್ಕಾಗಿ ನಮ್ಮಲ್ಲಿ ಪೊಲೀಸ್ ಮತ್ತು ಕಾನೂನು ಇದೆ. ಕರ್ನಾಟಕ ಪೊಲೀಸರು ದೇಶದಲ್ಲೇ ಅತ್ಯುತ್ತಮ ಸೇವೆಗೆ ಹೆಸರುವಾಸಿಯಾಗಿದ್ದಾರೆ. ನೈತಿಕ ಪೋಲೀಸಿಂಗ್ ಜನರಿಗೆ ತೊಂದರೆ ಉಂಟುಮಾಡುತ್ತದೆ ಮತ್ತು ರಾಜ್ಯಕ್ಕೆ ಕೆಟ್ಟ ಹೆಸರನ್ನು ತರುತ್ತದೆ ಎಂದು ಪರಮೇಶ್ವರ ಅವರು ಮಂಗಳೂರಿನಲ್ಲಿ ಹೇಳಿದ್ದರು.

ಮುಂದಿನ ದಿನಗಳಲ್ಲಿ ರಾಜ್ಯದ ಇತರ ಜಿಲ್ಲೆಗಳಲ್ಲೂ ಆ್ಯಂಟಿ ಕಮ್ಯೂನಲ್ ವಿಂಗ್ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು ಪರಮೇಶ್ವರ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:35 pm, Wed, 7 June 23

‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ