ಬೆಂಗಳೂರು: ಇನ್ನು ಮುಂದೆ ತಂದೆ ತಾಯಿಯನ್ನ ವೃದ್ಧಾಶ್ರಮಕ್ಕೆ ಸೇರಿಸಿದರೆ ಬೀಳುತ್ತೆ ಕ್ರಿಮಿನಲ್ ಕೇಸ್

ಸರಿಯಾಗಿ ನೋಡಿಕೊಳ್ಳದೆ ತಂದೆ ತಾಯಿಯನ್ನ ಮಕ್ಕಳು ವೃದ್ಧಾಶ್ರಮಕ್ಕೆ ಹಾಕುತ್ತಿದ್ದಾರೆ. ಹೀಗಾಗಿ ಪೊಲೀಸ್ ಕಮೀಷನರ್ ಬಿ. ದಯಾನಂದ್ ಅವರ ಸೂಚನೆ ಮೇರೆಗೆ ಬೆಂಗಳೂರು ಪೊಲೀಸರು ಮಹತ್ಕಾರ್ಯಕ್ಕೆ ಕೈ ಹಾಕಿದ್ದು, ಇನ್ನು ಮುಂದೆ ಪೋಷಕರನ್ನು ವೃದ್ಧಾಶ್ರಮಕ್ಕೆ ಹಾಕುವ ಮಕ್ಕಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.

ಬೆಂಗಳೂರು: ಇನ್ನು ಮುಂದೆ ತಂದೆ ತಾಯಿಯನ್ನ ವೃದ್ಧಾಶ್ರಮಕ್ಕೆ ಸೇರಿಸಿದರೆ ಬೀಳುತ್ತೆ ಕ್ರಿಮಿನಲ್ ಕೇಸ್
ತಂದೆ ತಾಯಿಯನ್ನ ವೃದ್ಧಾಶ್ರಮಕ್ಕೆ ಸೇರಿಸುವ ಮಕ್ಕಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾದ ಬೆಂಗಳೂರು ಪೊಲೀಸರು (ಸಾಂದರ್ಭಿಕ ಚಿತ್ರ)
Edited By:

Updated on: Jan 07, 2024 | 5:55 PM

ಬೆಂಗಳೂರು, ಜ.7: ತಂದೆ ತಾಯಿಯನ್ನು ಸರಿಯಾಗಿ ನೋಡಿಕೊಳ್ಳಲದೆ ಅವರನ್ನು ಮಕ್ಕಳು ವೃದ್ಧಾಶ್ರಮಕ್ಕೆ (Old Age Home) ಹಾಕುತ್ತಿರುವ ಪ್ರಕರಣಗಳು ನಗರದಲ್ಲಿ ನಡೆಯುತ್ತಿವೆ. ಹೀಗಾಗಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ (B Dayanand) ಅವರ ಸೂಚನೆ ಮೇರೆಗೆ ಬೆಂಗಳೂರು (Bengaluru) ಪೊಲೀಸರು ಮಹತ್ಕಾರ್ಯಕ್ಕೆ ಕೈ ಹಾಕಿದ್ದು, ಇನ್ನು ಮುಂದೆ ಪೋಷಕರನ್ನು ವೃದ್ಧಾಶ್ರಮಕ್ಕೆ ಹಾಕುವ ಮಕ್ಕಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.

2024 ಹೊಸ ವರ್ಷದ ಬಳಿಕ ಹೊಸ ಹೆಜ್ಜೆ ಇಟ್ಟ ನಗರ ಪೊಲೀಸರು, ನಗರದ ವೃದ್ಧಾಶ್ರಮಗಳ ಮೇಲೆ‌ ಕಣ್ಣಿಟ್ಟಿದ್ದಾರೆ. ತಂದೆ ತಾಯಿಯನ್ನ ಸರಿಯಾಗಿ ನೋಡಿಕೊಳ್ಳದ ಮಕ್ಕಳ ಮೇಲೆ ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಕೇಸ್ ಬುಕ್ ಮಾಡುವಂತೆ ಪೊಲೀಸ್ ಕಮೀಷನರ್ ಬಿ. ದಯಾನಂದ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ: ಕಾನೂನು ಬಾಹಿರ ಕೆಲಸ ಮಾಡಿದ್ರೆ ಕ್ರಮಕೈಗೊಳ್ಳುವಂತೆ ಸೂಚನೆ

ಹೆತ್ತು-ಹೊತ್ತು, ಸಾಕಿ ಸಲಹಿದ ಪೋಷಕರನ್ನು ಮನೆಯಿಂದ ಹೊರ ಹಾಕಲಾಗುತ್ತಿದೆ. ಇನ್ನು ಕೆಲವರು ಸಾಕಲು ಶಕ್ತರಾಗಿದ್ದರೂ ಇತ್ತಿಂಷ್ಟು ಹಣ ನೀಡಿ ಪೋಷಕರನ್ನ ವೃದ್ಧಾಶ್ರಮಕ್ಕೆ ಸೇರಿಸುತ್ತಿದ್ದಾರೆ. ಹೀಗೆ ಸುಖಾಸುಮ್ಮನೆ ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸುತ್ತಿರುವುದರಿಂದ ಅನೇಕರು ಆಶ್ರಮದಲ್ಲಿ ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ.

ವೃದ್ಧಾಶ್ರಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು, ತಮ್ಮ ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿರುವ ಆರ್ಥಿಕವಾಗಿ ಶಕ್ತರಾಗಿರುವ ಮಕ್ಕಳನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ. ವೃದ್ಧಾಶ್ರಮಗಳಿಂದ ತಮ್ಮ ಪೋಷಕರನ್ನು ಕರೆದೊಯ್ಯುವಂತೆ ಸೂಚನೆ ನೀಡಿದ್ದಾರೆ. ಆ ಮೂಲಕ ತಂದೆ ತಾಯಿಯನ್ನು ಮನೆಗೆ ವಾಪಸ್ ಕಳುಹಿಸಿ ಇಳಿ ವಯಸ್ಸಿನಲ್ಲಿ ಮಕ್ಕಳು ಮೊಮ್ಮಕ್ಕಳೊಂದಿಗೆ ಸಂತೋಷದಿಂದ ಇರುವಂತೆ ಮಾಡಲು ಪೊಲೀಸರು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ