ಅಪಘಾತದ ಬಳಿಕ ಎಚ್ಚೆತ್ತ ಅಧಿಕಾರಿಗಳು; ರಸ್ತೆ ಗುಂಡಿ ಮುಚ್ಚುವ ಕೆಲಸ ಶುರು, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಗೌರವ್ ಗುಪ್ತಾ ಹೇಳಿಕೆ

Bengaluru: ಈಗಾಗಲೇ ಜಲಮಂಡಳಿ, ಬೆಸ್ಕಾಂ ಮೇಲೆ ಕೇಸ್ ದಾಖಲು ಮಾಡಲಾಗಿದೆ. ಕಾನೂನಿನಲ್ಲಿ ಅವಶ್ಯಕತೆ ಇದ್ದರೆ ಪರಿಹಾರದ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಮೃತ ಅಶ್ವಿನ್ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರದ ಬಗ್ಗೆಯೂ ಗೌರವ್ ಗುಪ್ತಾ ತಿಳಿಸಿದ್ದಾರೆ.

ಅಪಘಾತದ ಬಳಿಕ ಎಚ್ಚೆತ್ತ ಅಧಿಕಾರಿಗಳು; ರಸ್ತೆ ಗುಂಡಿ ಮುಚ್ಚುವ ಕೆಲಸ ಶುರು, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಗೌರವ್ ಗುಪ್ತಾ ಹೇಳಿಕೆ
ಬಿಬಿಎಂಪಿ ಕಮಿಷನರ್‌ ಗೌರವ್ ಗುಪ್ತಾ
Follow us
TV9 Web
| Updated By: ganapathi bhat

Updated on:Mar 14, 2022 | 1:59 PM

ಬೆಂಗಳೂರು: ನಗರದಲ್ಲಿ ರಸ್ತೆಗುಂಡಿಗೆ ಸಿಲುಕಿ, ಅಪಘಾತದಿಂದ ಬೈಕ್ ಸವಾರ ಅಶ್ವಿನ್ (27) ಸಾವು ಪ್ರಕರಣ ಪ್ರತಿಭಟನೆ, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಘಟನೆಗೆ ಸಂಬಂಧಿಸಿ ಬೆಂಗಳೂರಲ್ಲಿ BBMP ಆಯುಕ್ತ ಗೌರವ್ ಗುಪ್ತಾ ಪ್ರತಿಕ್ರಿಯೆ ನೀಡಿದ್ದಾರೆ. ಜಲಮಂಡಳಿ ತಪ್ಪಿನಿಂದ ಇಂತಹ ಅನಾಹುತ ಆಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜಲಮಂಡಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗುತ್ತೆ. BBMPಗೆ ಮಾಹಿತಿ ನೀಡದೆ ರಸ್ತೆ ಅಗೆದಿದ್ದಕ್ಕೆ ಅನಾಹುತ ಸಂಭವಿಸಿದೆ ಎಂದು ಹೇಳಿದ್ದಾರೆ. ಈಗಾಗಲೇ ಜಲಮಂಡಳಿ, ಬೆಸ್ಕಾಂ ಮೇಲೆ ಕೇಸ್ ದಾಖಲು ಮಾಡಲಾಗಿದೆ. ಕಾನೂನಿನಲ್ಲಿ ಅವಶ್ಯಕತೆ ಇದ್ದರೆ ಪರಿಹಾರದ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಮೃತ ಅಶ್ವಿನ್ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರದ ಬಗ್ಗೆಯೂ ಗೌರವ್ ಗುಪ್ತಾ ತಿಳಿಸಿದ್ದಾರೆ.

ಕೊನೆಗೂ ಘಟನಾ ಸ್ಥಳಕ್ಕೆ ಬಿಬಿಎಂಪಿ ಅಧಿಕಾರಿಗಳು ಬಂದಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಮೃತ ಅಶ್ವಿನ್ ಸ್ನೇಹಿತರ ಆಕ್ರೋಶ ಕೇಳಿಬಂದಿದೆ. ಸ್ನೇಹಿತರ ಜೀವ ಹೋದ್ಮೇಲೆ ಬರ್ತಿದೀರಾ. ಗುಂಡಿ ಈಗ ಯಾಕೆ ಮುಚ್ತೀರಾ. ಬಿಬಿಎಂಪಿ ಜಂಟಿ ಆಯುಕ್ತರನ್ನು ಕರೆಸಿ. ಕಮಿಷನರ್ ಕರೆಸಿ. ಕರೆಸೋವರೆಗೂ ಹೋಗಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಗುಂಡಿಯ ಒಳಗೆ ಕೂತು ಅಶ್ವಿನ್ ಸ್ನೇಹಿತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆಗುಂಡಿಗೆ ಯುವಕ ಬಲಿಯಾದ ಬಳಿಕ BBMP ಎಚ್ಚೆತ್ತುಕೊಂಡಿದೆ. ಮುನೇಶ್ವರ ಲೇಔಟ್​ನಲ್ಲಿ ಗುಂಡಿ ಮುಚ್ಚುವ ಕಾರ್ಯ ನಡೆಸಲಾಗುತ್ತಿದೆ. AE ರಾಮಕೃಷ್ಣಯ್ಯ ನೇತೃತ್ವದಲ್ಲಿ ಗುಂಡಿ ಮುಚ್ಚುವ ಕೆಲಸ‌ ನಡೆಸಲಾಗುತ್ತಿದೆ. ಬೆಂಗಳೂರಲ್ಲಿ ರಸ್ತೆಗುಂಡಿಗೆ ಅಶ್ವಿನ್ (27) ಬಲಿಯಾಗಿದ್ದ. ಬೆಂಗಳೂರಲ್ಲಿ ರಸ್ತೆಗುಂಡಿಗೆ ಅಶ್ವಿನ್ (27) ಸಾವು ಪ್ರಕರಣಕ್ಕೆ ಸಂಬಂಧಿಸಿ ಆಮ್ ಆದ್ಮಿ ಕಾರ್ಯಕರ್ತರಿಂದ ಸ್ಥಳದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಎಂ.ಎಸ್. ಪಾಳ್ಯದ ಮುನೇಶ್ವರ ಲೇಔಟ್​ನಲ್ಲಿ AAP ಪ್ರತಿಭಟನೆ ನಡೆಸಲಾಗಿದೆ.

ಇದೀಗ ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಅಶ್ವಿನ್ ಮೃತದೇಹ ಇರಿಸಲಾಗಿದೆ. ಗುಂಡಿ ಬಿದ್ದಿರುವ ಮಾರ್ಗವಾಗಿ ಮೃತದೇಹ ಶಿಫ್ಟ್ ಹಿನ್ನೆಲೆ, ಪ್ರತಿಭಟನೆ ಕೈ ಬಿಡುವಂತೆ ಆಪ್​ಗೆ ಪೊಲೀಸರಿಂದ ಮನವಿ ಮಾಡಲಾಗಿದೆ. ಈ ವೇಳೆ, ಪೊಲೀಸರು- ಆಮ್ ಆದ್ಮಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಜಂಟಿ ಪೊಲೀಸ್ ಆಯುಕ್ತರನ್ನ ಕರಿಸಿ ಎಂದು ಪ್ರತಿಭಟನೆ ಮಾಡ್ತಿದ್ರು. ಈ ವೇಳೆ ಪ್ರತಿಭಟನೆ ಮಾಡ್ಬೇಡಿ ಎಂದು ಯಲಹಂಕ ಪೊಲೀಸರು ತಡೆದಿದ್ದಾರೆ.

ಘಟನೆ ನಡೆದದ್ದೇನು?

ನಗರದಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಜೀವ ಬಲಿ ಆಗಿದೆ. ಎಂ.ಎಸ್. ಪಾಳ್ಯದ ಮುನೇಶ್ವರ ಲೇಔಟ್‌ನಲ್ಲಿ ರಸ್ತೆ ಗುಂಡಿಗೆ ಬಿದ್ದು ಅಪಘಾತ ಸಂಭವಿಸಿದೆ. ಜಲಮಂಡಳಿ ಅಗೆದಿದ್ದ ರಸ್ತೆಗುಂಡಿಗೆ ಬಿದ್ದು ಅಶ್ವಿನ್‌ ಎಂಬವರಿಗೆ ಗಾಯವಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅಶ್ವಿನ್ (27) ಸಾವನ್ನಪ್ಪಿದ್ದಾರೆ. ತಗ್ಗು ಗುಂಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಗುಂಡಿಗೆ ಬಿದ್ದು, ಅಪಘಾತ ಸಂಭವಿಸಿ ಬೈಕ್ ಸವಾರ ಅಶ್ವಿನ್ ಮೃತಪಟ್ಟ ಜಾಗದಲ್ಲಿ ಅಶ್ವಿನ್ ಸ್ನೇಹಿತರು ಜಮಾಯಿಸಿದ್ದಾರೆ. ಘಟನೆಗೆ ಬಿಬಿಎಂಪಿ, ಜಲಮಂಡಳಿಯ ನಿರ್ಲಕ್ಷ್ಯವೇ ಕಾರಣ ಅಂತ ಆಕ್ರೋಶ ಕೇಳಿಬಂದಿದೆ.

ನಿನ್ನೆ (ಮಾರ್ಚ್ 13) ರಾತ್ರಿ ಘಟನೆ ನಡೆದಿದೆ. ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಫಲಕಾರಿಯಾಗದೇ ಬೆಳಗಿನ ಜಾವ ಅಶ್ವಿನ್ ಸಾವನ್ನಪ್ಪಿದ್ದಾರೆ. ಅಶ್ವಿನ್, ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡ್ತಿದ್ದ. ತಾಯಿಗೆ ಒಬ್ಬನೇ ಮಗ ಅಶ್ವಿನ್. ಮೂಲತಃ ಹಾವೇರಿಯವರು ಎಂದು ತಿಳಿದುಬಂದಿದೆ.

ಅಲ್ಲದೆ, ಅಪಘಾತ ಸಂಭವಿಸಿ ರಕ್ತದ ಮಡುವಿನಲ್ಲಿ ಬಿದ್ದು, ಒದ್ದಾಡ್ತಿದ್ದರೂ ಆಂಬ್ಯೂಲೆನ್ಸ್ ಸ್ಥಳಕ್ಕೆ ಬಂದಿಲ್ಲ ಎಂದು ಆರೋಪ ಕೇಳಿಬಂದಿದೆ. ಒಂದು ಘಂಟೆಯಿಂದ ಆಂಬ್ಯೂಲೆನ್ಸ್​ಗೆ ಕಾಲ್ ಮಾಡಿದ್ರೂ ಆಂಬ್ಯೂಲೆನ್ಸ್ ಸ್ಥಳಕ್ಕೆ ಬಂದಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ನಂತರ ಸ್ಥಳೀಯರೇ ಕಾರಿನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಬೆಂಗಳೂರು: ರಸ್ತೆ ಗುಂಡಿಗೆ ಬಿದ್ದು ಮತ್ತೊಂದು ಜೀವ ಬಲಿ; ಜಲಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶ

ಇದನ್ನೂ ಓದಿ: ಬೆಂಗಳೂರು ವಿವಿ ಅಕ್ರಮಗಳ ಅಡ್ಡೆಯಾಗುತ್ತಿದೆ; ಸಿಂಡಿಕೇಟ್ ಸದಸ್ಯರಿಂದಲೇ ರಾಜ್ಯಪಾಲರಿಗೆ ದೂರು

Published On - 1:39 pm, Mon, 14 March 22

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್