Bengaluru Potholes: ಬೆಂಗಳೂರಿನಲ್ಲಿವೆ 9,500 ರಸ್ತೆಗುಂಡಿಗಳು; ಸ್ವಲ್ಪ ಯಾಮಾರಿದರೂ ಸಾವು ಗ್ಯಾರಂಟಿ!

| Updated By: ಸುಷ್ಮಾ ಚಕ್ರೆ

Updated on: May 17, 2022 | 2:22 PM

ಬೆಂಗಳೂರಿನಲ್ಲಿರುವ ರಸ್ತೆ ಗುಂಡಿಗಳ ಸಂಖ್ಯೆ ಕೇವಲ 9,500 ಮಾತ್ರವಲ್ಲ. ಇದು ಆರಂಭಿಕವಾಗಿ ಪತ್ತೆಹಚ್ಚಲಾದ ರಸ್ತೆ ಗುಂಡಿಗಳ ಸಂಖ್ಯೆಯಷ್ಟೇ. ರಸ್ತೆ ಗುಂಡಿಗಳನ್ನು ಗುರುತಿಸುವ ಪ್ರಕ್ರಿಯೆಯು ಇದೀಗ ಪ್ರಾರಂಭವಾಗಿದೆ.

Bengaluru Potholes: ಬೆಂಗಳೂರಿನಲ್ಲಿವೆ 9,500 ರಸ್ತೆಗುಂಡಿಗಳು; ಸ್ವಲ್ಪ ಯಾಮಾರಿದರೂ ಸಾವು ಗ್ಯಾರಂಟಿ!
ಬೆಂಗಳೂರಿನ ರಸ್ತೆ ಗುಂಡಿಗಳು
Image Credit source: Hindustan Times
Follow us on

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಮೂರು ವಾರಗಳಿಂದ ಭಾರೀ ಮಳೆಯಾಗುತ್ತಿದೆ. ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿ ನೀರು ತುಂಬಿ ನಿಲ್ಲುತ್ತಿದೆ. ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳು (Bangalore Potholes) ಹೆಚ್ಚಾಗಿರುವುದರಿಂದ ದ್ವಿಚಕ್ರ ವಾಹನ ಸವಾರರಿಗೆ ಅಪಘಾತವಾದ ಸಾಕಷ್ಟು ಘಟನೆಗಳು ನಡೆದಿವೆ. ರಸ್ತೆ ಗುಂಡಿಗಳಿಂದ ಕೆಲವರು ಪ್ರಾಣವನ್ನೂ ಕಳೆದಕೊಂಡಿದ್ದಾರೆ. ಇದೀಗ ಬೆಂಗಳೂರಿನಾದ್ಯಂತ ಸುಮಾರು 9,500 ರಸ್ತೆ ಗುಂಡಿಗಳನ್ನು ಗುರುತಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮಾಹಿತಿ ನೀಡಿದೆ.

ಸದ್ಯಕ್ಕೆ ಬೆಂಗಳೂರಿನಲ್ಲಿ 9,500 ರಸ್ತೆ ಗುಂಡಿಗಳನ್ನು ಪತ್ತೆಹಚ್ಚಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಗುಂಡಿಗಳನ್ನು ಗುರುತಿಸಿ ಅವುಗಳನ್ನು ಸರಿಪಡಿಸಲಾಗುವುದು ಎಂದು ಪೌರಕಾರ್ಮಿಕರೊಬ್ಬರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿರುವ ರಸ್ತೆ ಗುಂಡಿಗಳ ಸಂಖ್ಯೆ ಕೇವಲ 9,500 ಮಾತ್ರವಲ್ಲ. ಇದು ಆರಂಭಿಕವಾಗಿ ಪತ್ತೆಹಚ್ಚಲಾದ ರಸ್ತೆ ಗುಂಡಿಗಳ ಸಂಖ್ಯೆಯಷ್ಟೇ. ರಸ್ತೆ ಗುಂಡಿಗಳನ್ನು ಗುರುತಿಸುವ ಪ್ರಕ್ರಿಯೆಯು ಇದೀಗ ಪ್ರಾರಂಭವಾಗಿದೆ. ಮುಂದಿನ ದಿನಗಳನ್ನು ಉಳಿದ ರಸ್ತೆಗುಂಡಿಗಳನ್ನು ಗುರುತಿಸಲಾಗುವುದು. ಮಳೆ ಕಡಿಮೆಯಾದ ನಂತರ ನಾವು ನಮ್ಮದೇ ಬ್ಯಾಚ್‌ನಿಂದ ಬಿಸಿ ಮಿಶ್ರಣವನ್ನು ಬಳಸುತ್ತೇವೆ ಮತ್ತು ಗುಂಡಿಗಳನ್ನು ಸರಿಪಡಿಸುತ್ತೇವೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಕೆ.ವಿ ತ್ರಿಲೋಕ್ ಚಂದ್ರ ಹೇಳಿದ್ದಾರೆ. (Source)

ಇದನ್ನೂ ಓದಿ
ಬೆಂಗಳೂರಿನಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಮೆಟ್ರೋ ಪಿಲ್ಲರ್​ಗೆ ಕೆಎಸ್ಆರ್​ಟಿಸಿ ಬಸ್ ಡಿಕ್ಕಿ! 29 ಜನರಿಗೆ ಗಾಯ
15 ದಿನಗಳಲ್ಲಿ ಬೆಂಗಳೂರಿನ ರಸ್ತೆ ಗುಂಡಿ ದುರಸ್ತಿ ಕಾರ್ಯ ಮಾಡಿ ವರದಿ ನೀಡುವಂತೆ ಬಿಬಿಎಂಪಿಗೆ ಹೈಕೋರ್ಟ್ ತಾಕೀತು
ಅಪಘಾತದ ಬಳಿಕ ಎಚ್ಚೆತ್ತ ಅಧಿಕಾರಿಗಳು; ರಸ್ತೆ ಗುಂಡಿ ಮುಚ್ಚುವ ಕೆಲಸ ಶುರು, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಗೌರವ್ ಗುಪ್ತಾ ಹೇಳಿಕೆ
Viral Video: ರಸ್ತೆ ಗುಂಡಿ ಮುಚ್ಚಿದ ಬೆಂಗಳೂರಿನ ಟ್ರಾಫಿಕ್ ಪೊಲೀಸ್; ವೈರಲ್ ವಿಡಿಯೋಗೆ ಗೃಹ ಸಚಿವರಿಂದಲೂ ಮೆಚ್ಚುಗೆ

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ದತ್ತಾಂಶದ ಪ್ರಕಾರ, 2020ರಲ್ಲಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳಿಂದಾಗಿ ಕನಿಷ್ಠ 18 ಸಾವುಗಳು ವರದಿಯಾಗಿವೆ. ಮೇ ತಿಂಗಳಿನಲ್ಲಿ ಬೆಂಗಳೂರು ಅಕಾಲಿಕ ಮಳೆಗೆ ಸಾಕ್ಷಿಯಾಗುತ್ತಿದ್ದರೂ ಆದಷ್ಟು ಬೇಗ ರಸ್ತೆ ರಿಪೇರಿ ಮಾಡುವ ಕೆಲಸಕ್ಕೆ ಬಿಬಿಎಂಪಿ ಮುಂದಾಗಲಿಲ್ಲ. ಬಿಬಿಎಂಪಿ ಮತ್ತು ರಾಜ್ಯ ಸರ್ಕಾರಗಳು ರಸ್ತೆ ಗುಂಡಿಗಳ ಸಮಸ್ಯೆ ಬಗೆಹರಿಸುವ ಭರವಸೆ ನೀಡಿರುವುದು ಇದೇ ಮೊದಲಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಒಪ್ಪಿಕೊಂಡಂತೆ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಸಂಬಂಧಿತ ಕಾಮಗಾರಿಗಳಿಗೆ ಕಳೆದ 5 ವರ್ಷಗಳಲ್ಲಿ 20,000 ಕೋಟಿ ರೂ.ಗೂ ಹೆಚ್ಚು ಖರ್ಚು ಮಾಡಲಾಗಿದೆ.

ಬಿಬಿಎಂಪಿ ಅಂದಾಜಿನ ಪ್ರಕಾರ, ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಎರಡು ಪಥದ ರಸ್ತೆಯ ಒಂದು ಕಿಲೋಮೀಟರ್‌ಗೆ 7.5 ಕೋಟಿ ರೂ.ನಿಂದ 11 ಕೋಟಿ ರೂ. ವೆಚ್ಚವಾಗುತ್ತದೆ. ಟಾರ್ ರಸ್ತೆಗೆ ಸುಮಾರು 80 ಲಕ್ಷ ರೂ.ನಿಂದ 1.3 ಕೋಟಿ ರೂ. ವೆಚ್ಚವಾಗುತ್ತದೆ.

ಇನ್ನಷ್ಟು ಬೆಂಗಳೂರಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:20 pm, Tue, 17 May 22