AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಭಾನುವಾರ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ, ಇಲ್ಲಿದೆ ವಿವರ

ಬೆಂಗಳೂರು ಪವರ್ ಕಟ್: ನಿರ್ವಹಣಾ ಕಾಮಗಾರಿಗಳ ಪ್ರಯುಕ್ತ ಭಾನುವಾರ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಎಷ್ಟು ಗಂಟೆಯಿಂದ ಎಷ್ಟು ಗಂಟೆಯ ವರೆಗೆ ವಿದ್ಯುತ್ ಕಡಿತ ಇರಲಿದೆ, ಯಾವೆಲ್ಲ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯ ಇರಲಿದೆ ಎಂದು ಬೆಸ್ಕಾಂ ತಿಳಿಸಿದ್ದು, ಆ ಮಾಹಿತಿ ಇಲ್ಲಿದೆ.

Bengaluru Power Cut: ಭಾನುವಾರ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ, ಇಲ್ಲಿದೆ ವಿವರ
ಪ್ರಾತಿನಿಧಿಕ ಚಿತ್ರ
Ganapathi Sharma
|

Updated on:Jun 28, 2025 | 1:04 PM

Share

ಬೆಂಗಳೂರು, ಜೂನ್ 28: ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಭಾನುವಾರ (ಜೂನ್ 29) ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ (Bengaluru Power Cut) ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ತಿಳಿಸಿದೆ . ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಕಡಿತ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಸಮಯದಲ್ಲಿ ತುಸು ಬದಲಾವಣೆ ಇರಬಹುದು. ನಿಗದಿತ ತ್ರೈಮಾಸಿಕ ನಿರ್ವಹಣಾ ಕಾರ್ಯಗಳು ಮತ್ತು ನಿರ್ವಹಣಾ ಕಾಮಗಾರಿಯ ಕಾರಣ ವಿದ್ಯುತ್ ಕಡಿತ ಮಾಡಲಾಗುತ್ತದೆ. ಇದು 66/11 ಕಿಲೋವೋಲ್ಟ್ (ಕೆವಿ) ಎ ಸ್ಟೇಷನ್ ಅಡಿಯಲ್ಲಿ ಬರುವ ಪ್ರದೇಶಗಳ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ.

ವಾರಾಂತ್ಯದಲ್ಲಿ ಗ್ರಿಡ್‌ನಲ್ಲಿ ಒಟ್ಟಾರೆ ವಿದ್ಯುತ್ ಬಳಕೆಯ ಹೊರೆ ಗಮನಾರ್ಹವಾಗಿ ಕಡಿಮೆಯಾದ ಸಂದರ್ಭದಲ್ಲೇ ಬೆಸ್ಕಾಂ ವಿದ್ಯುತ್ ಕಡಿತ ಯೋಜಿಸುಗತ್ತಿದೆ. ಆ ಮೂಲಕ ಕಚೇರಿ ಕೆಲಸಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಯಾವೆಲ್ಲ ಪ್ರದೇಶಗಳಲ್ಲಿ ಪವರ್ ಕಟ್?

ಬೆಸ್ಕಾಂ ನೀಡಿರುವ ಮಾಹಿತಿ ಪ್ರಕಾರ, ಶೇಷಾದ್ರಿ ರಸ್ತೆ, ಕುರುಬರ ಸಂಘದ ವೃತ್ತ 1ನೇ ಮುಖ್ಯರಸ್ತೆ, ಗಾಂಧಿ ನಗರ 1ನೇ ಕ್ರಾಸ್ ಮತ್ತು 2ನೇ ಕ್ರಾಸ್ ಭಾಗಗಳು, ಕ್ರೆಸೆಂಟ್ ರಸ್ತೆ, ಶೇಷಾದ್ರಿಪುರಂ, ವಿನಾಯಕ ವೃತ್ತ, ಕೆಂಪೇಗೌಡ ರಸ್ತೆ, ಟ್ಯಾಂಕ್ ಬಂಡ್ ರಸ್ತೆ, ಸುಬೇದಾರ್ ಛತ್ರಂ ರಸ್ತೆ, ಲಕ್ಷ್ಮಣಪುರಿ ಸ್ಲಂ ಏರಿಯಾ, ಕಬ್ಬನ್‌ಪೇಟೆ, ಚಲುಕೂರ್‌ಪೇಟೆ, ಚಲುಕೂರ್‌ಪೇಟೆ, ಸಿ.ಸಿ. ಹೈಗ್ರೌಂಡ್ಸ್, ಮಲ್ಲೇಶ್ವರಂ ಮತ್ತು ಶೇಷಾದ್ರಿಪುರಂನ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ.

ಇದನ್ನೂ ಓದಿ
Image
ತಿರುಪತಿಗೆ ತೆರಳುವ ಭಕ್ತರಿಗೆ ಗುಡ್​ ನ್ಯೂಸ್​: ಕರ್ನಾಟಕದಿಂದ ನೂತನ ರೈಲು
Image
ಜೋಹ್ರಾನ್ ಮಮ್ದಾನಿ ವಿರುದ್ಧ ಕಾಂಗ್ರೆಸ್, ಬಿಜೆಪಿ ವಾಗ್ದಾಳಿ
Image
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
Image
ಕಾಜಿಪೇಟೆ ರೈಲು ಉತ್ಪಾದನಾ ಘಟಕದಲ್ಲಿ MEMU ರೈಲುಗಳ ತಯಾರಿ

ಇದನ್ನೂ ಓದಿ: ತಿರುಪತಿಗೆ ತೆರಳುವ ಭಕ್ತರಿಗೆ ಗುಡ್​ ನ್ಯೂಸ್​: ಕರ್ನಾಟಕದಿಂದ ನೂತನ ರೈಲು, ಇಲ್ಲಿದೆ ಮಾಹಿತಿ

ಜೂನ್ 24 ರಂದು ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಮಾಡಲಾಗಿತ್ತು. ಬೆಸ್ಕಾಂ ಮತ್ತು ಕೆಪಿಟಿಸಿಎಲ್​ನಂತಹ ವಿದ್ಯುತ್ ಪೂರೈಕೆದಾರರು ವಿವಿಧ ಯೋಜನೆಗಳ ಅನುಷ್ಠಾನ ಕಾಮಗಾರಿ ಮತ್ತು ನಿರ್ವಹಣಾ ಕಾಮಗಾರಿಗಳ ಪ್ರಯುಕ್ತ ನಗರದಾದ್ಯಂತ ವಿವಿಧ ಸಂದರ್ಭಗಳಲ್ಲಿ ವಿದ್ಯುತ್ ಕಡಿತ ಮಾಡುತ್ತವೆ. ಮರಗಳನ್ನು ಅಥವಾ ಗೆಲ್ಲುಗಳನ್ನು ಕಡಿಯುವುದು, ಓವರ್​ಹೆಡ್ ಕೇಬಲ್‌ಗಳ ಅಂಡರ್​ಗ್ರೌಂಡ್ ಕಾಮಗಾರಿ, ಜಲಸಿರಿ 24×7 ನೀರು ಸರಬರಾಜು ಯೋಜನೆ, ಹೈ-ಟೆನ್ಷನ್ (ಎಚ್‌ಟಿ) ಲೈನ್‌ಗಳ ರಿಕಂಡಕ್ಟರಿಂಗ್, ಆರ್‌ಎಂಯು ಸೇವೆ, ಎಚ್‌ಟಿ ಸಂಪರ್ಕಗಳನ್ನು ದುರಸ್ತಿ ಮಾಡುವುದು ಮತ್ತು ಬದಲಾಯಿಸುವುದು, ಸಿಸ್ಟಮ್ ನವೀಕರಣಗಳು ಮತ್ತು ಇತರ ಅಗತ್ಯ ದುರಸ್ತಿಗಳಿಗಾಗಿ ವಿದ್ಯುತ್ ಕಡಿತ ಮಾಡಲಾಗುತ್ತದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:02 pm, Sat, 28 June 25

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ