AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಪವರ್​ ಕಟ್​!

ಸೆಪ್ಟೆಂಬರ್ 17 ಮತ್ತು 18 ರಂದು ರಾಜಾನುಕುಂಟೆ ಮತ್ತು ಸಾರಕ್ಕಿ ಉಪಕೇಂದ್ರಗಳಲ್ಲಿ ನಿರ್ವಹಣಾ ಕಾರ್ಯದಿಂದಾಗಿ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬೆಳಿಗ್ಗೆ ಸಂಜೆರವರೆಗೆ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ. ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ ಎಂಬ ಮಾಹಿತಿ ಇಲ್ಲಿದೆ.

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಪವರ್​ ಕಟ್​!
Bescom Power
ಗಂಗಾಧರ​ ಬ. ಸಾಬೋಜಿ
|

Updated on:Sep 17, 2025 | 9:25 AM

Share

ಬೆಂಗಳೂರು, ಸೆಪ್ಟೆಂಬರ್​ 17: ರಾಜಾನುಕುಂಟೆ ಉಪಕೇಂದ್ರ ಮತ್ತು ಸಾರಕ್ಕಿ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಹಿನ್ನಲೆ ಸೆ.17 ಮತ್ತು 18 ಎರಡು ದಿನ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ (Power Cut) ಉಂಟಾಗಲಿದೆ. ಬುಧವಾರದಂದು ಬೆಳಿಗ್ಗೆ 10 ರಿಂದ 4 ಮತ್ತು ಗುರುವಾರದಂದು 10 ರಿಂದ 5 ಗಂಟೆವರೆಗೆ ನಗರದ ಹಲವೆಡೆ ವಿದ್ಯುತ್​ ಕಡಿತವಾಗಲಿದೆ ಎಂದು ಬೆಸ್ಕಾಂ (Bescom) ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಹಾಗಾದರೆ ಬೆಂಗಳೂರಿನ ಯಾವೆಲ್ಲಾ ನಗರದಲ್ಲಿ ವಿದ್ಯುತ್​ ಕಡಿತವಾಗಲಿದೆ ಎಂದು ತಿಳಿಯಲು ಮುಂದೆ ಓದಿ.

ಇಂದು ಎಲ್ಲೆಲ್ಲಿ ವಿದ್ಯುತ್​ ಕಡಿತ

ಸಿಂಗ ನಾಯಕನಹಳ್ಳಿ, ಹೊನ್ನೇನಹಳ್ಳಿ, ಅಡ್ಡವಿಶ್ವನಾಥಪುರ, ರಾಜಾನು ಕುಂಟೆ, ಶ್ರೀರಾಮನಹಳ್ಳಿ, ಮಾರಸಂದ್ರ, ಹನಿಯೂರು, ನೆಲಕುಂಟೆ, ಕೆಎಂಎಫ್‌, ಚೆಲ್ಲ ಹಳ್ಳಿ, ಬೂದಮನಹಳ್ಳಿ, ಬೈರಾಪುರ, ಕಾಕೋಲು, ದಿಟ್ಟೂರು, ಸೊನ್ನೇನಹಳ್ಳಿ ಸೇರಿದಂತೆ ಸೆಂಚುರಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್​ ಕಡಿತವಾಗಲಿದೆ.

ಇದನ್ನೂ ಓದಿ
Image
ಕರ್ನಾಟಕದ ಜನತೆಗೆ ಮತ್ತೆ ಕರೆಂಟ್ ಶಾಕ್: ವಿದ್ಯುತ್ ದರ ಏರಿಕೆಗೆ ಪ್ರಸ್ತಾವನೆ
Image
ಒಸಿ, ಸಿಸಿ ಇಲ್ಲದೇ ಬೆಸ್ಕಾಂನಿಂದ ವಿದ್ಯುತ್​​ ಹೊಸ ಸಂಪರ್ಕ
Image
ಭಾನುವಾರ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ, ಇಲ್ಲಿದೆ ವಿವರ
Image
ಗ್ರಾಹಕರಿಗೆ ಮತ್ತೊಂದು ಶಾಕ್: ಬೆಸ್ಕಾಂ ವಿದ್ಯುತ್ ಬಿಲ್ ನೋಡಿ ಜನ ಬೇಸ್ತು

ಬೆಸ್ಕಾಂ ಟ್ವೀಟ್​​

ನಾಳೆ ಎಲ್ಲೆಲ್ಲಿ ವಿದ್ಯುತ್​ ಕಡಿತ

ಪೈಪ್ ಲೈನ್ ರೋಡ್, ಶಾಕಂಬರಿ ನಗರ, ರಾಘವೇಂದ್ರ ಸ್ವಾಮಿ ಮಠ, ಜೆ.ಪಿ ನಗರ ಮೊದಲನೇ ಹಂತ 14ನೇ ಅಡ್ಡ ರಸ್ತೆ, ಪುಟ್ಟೇನಹಳ್ಳಿ, ಸಲಾರ್ಪುರಿಯಾ ಅಪಾರ್ಟ್‌ ಮೆಂಟ್ ನಾಗಜುನ ಅಪಾರ್ಟ್‌ಮೆಂಟ್, ಐಟಿಐ ಲೇಔಟ್, ಜಯನಗರ 8 5. 7 ನೇ ಬ್ಲಾಕ್, ಎಸ್. ಬಿ. ಐ ಕಾಲೋನಿ ಮತ್ತು ಆರ್.ವಿ. ಡೆಂಟಲ್ ಕಾಲೇಜ್ ಸುತ್ತಮುತ್ತಲ ಪ್ರದೇಶ.

ಇದನ್ನೂ ಓದಿ: ಕರ್ನಾಟಕದ ಜನತೆಗೆ ಮತ್ತೆ ಕರೆಂಟ್ ಶಾಕ್: ವಿದ್ಯುತ್ ದರ ಏರಿಕೆಗೆ ಪ್ಲ್ಯಾನ್, ಎಷ್ಟು ಗೊತ್ತಾ?

ಅದೇ ರೀತಿಯಾಗಿ ಎಲ್‌ಐಸಿ ಕಚೇರಿ ಹಿಂಬಾಗ, 24ನೇ ಮೇನ್, ಕೆ ಆರ್ ಲೇಔಟ್, ಎಲ್‌ಐಸಿ ಕಾಲೋನಿ, ಜಿ.ಪಿ.ನಗರ 5ನೇ ಹಂತ, ವೆಂಕಟಾದ್ರಿ ಲೇಔಟ್, ಜೆ.ಪಿ.ನಗರ 6ನೇ ಹಂತ, 15 ನೇ ಕ್ರಾಸ್, ಸಾಯಿ ನರ್ಸರಿ ರಸ್ತೆ, 16 ಮತ್ತು 12 ನೇ ಕ್ರಾಸ್, ಬನ್ನೇರಘಟ್ಟ ರೋಡ್, ಆದರ್ಶ ರೆಸಿಡೆನ್ಸಿ ಅಪಾರ್ಟ್‌ ಮೆಂಟ್, ಕಲ್ಯಾಣಿ ಮ್ಯಾಗ್ನಮ್ ಅಪಾರ್ಟ್ಮೆಂಟ್, ಡಾಲರ್ಸ್ ಲೇಔಟ್, ಕಲ್ಯಾಣಿ ಕೃಷ್ಣ ಮ್ಯಾಗ್ನಮ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆ ಇರುವುದಿಲ್ಲ. ಹಾಗಾಗಿ ಸಾರ್ವಜನಿಕರು ಇದಕ್ಕೆ ಅನುಗುಣವಾಗಿ ತಮ್ಮ ಕೆಲಸ, ಕಾರ್ಯಗಳನ್ನು ನಿರ್ವಹಿಸುವಂತೆ ಮತ್ತು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:38 am, Wed, 17 September 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ