Power Cut: ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ಇಂದಿನಿಂದ 3 ದಿನ ಪವರ್ ಕಟ್

Power Cut in Bangalore: ಬನಶಂಕರಿ, ಮಾರತ್​ಹಳ್ಳಿ, ಇಸ್ರೋ ಲೇಔಟ್, ದೊಮ್ಮಲೂರು, ಹೆಗಡೆ ನಗರ, ಶ್ರೀನಗರ ಸೇರಿದಂತೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಪವರ್ ಕಟ್ ಇರಲಿದೆ.

Power Cut: ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ಇಂದಿನಿಂದ 3 ದಿನ ಪವರ್ ಕಟ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 28, 2022 | 6:06 AM

ಬೆಂಗಳೂರು: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದಿನಿಂದ (ಜನವರಿ 28) ಜನವರಿ 30ರವರೆಗೆ ವಿದ್ಯುತ್ ವ್ಯತ್ಯಯ ಇರಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ತಿಳಿಸಿದೆ. ವಿದ್ಯುತ್ ಕಾಮಗಾರಿಯ ನಿರ್ವಹಣೆಯ ಕಾರ್ಯಗಳ ಪರಿಣಾಮವಾಗಿ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಇಂದು ಬನಶಂಕರಿ, ಮಾರತ್​ಹಳ್ಳಿ, ಇಸ್ರೋ ಲೇಔಟ್, ದೊಮ್ಮಲೂರು, ಹೆಗಡೆ ನಗರ, ಶ್ರೀನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪವರ್ ಕಟ್ (Power Cut) ಇರಲಿದೆ.

ಇಂದು (ಶುಕ್ರವಾರ) ಬೆಂಗಳೂರಿನ ದಕ್ಷಿಣ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಲಕ್ಷ್ಮಿ ರಸ್ತೆ, ಬಿಕಿಸಿಪುರ, ಪ್ರತಿಮಾ ಇಂಡಸ್ಟ್ರಿಯಲ್ ಲೇಔಟ್, ಇಸ್ರೋ ಲೇಔಟ್, ಕೆಆರ್ ರಸ್ತೆ ಬನಶಂಕರಿ 2ನೇ ಹಂತ, ಪಾಪಯ್ಯ ಗಾರ್ಡನ್, ಬನಶಂಕರಿ 3ನೇ ಹಂತ, ಉತ್ತರಹಳ್ಳಿ ವೃತ್ತ, ಮಾರತಹಳ್ಳಿ, ಸಂಜಯ್ ನಗರ, ಮಂಜುನಾಥ ನಗರ, ಶ್ರೀನಗರ, ಅಶ್ವತ್ಥ ನಗರ, ಗೊಟ್ಟಿಗೆರೆ ಮುಖ್ಯರಸ್ತೆಯಲ್ಲಿ ಪವರ್ ಕಟ್ ಇರಲಿದೆ.

ಬೆಂಗಳೂರಿನ ಪೂರ್ವ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಟಿಸಿ ಪಾಳ್ಯ ರಸ್ತೆ, ಕೆಜಿ ಪುರ ಮುಖ್ಯ ರಸ್ತೆ, ಬಾಬುಸಪಾಳ್ಯ ಪ್ರದೇಶ, ದೊಮ್ಮಲೂರು 2ನೇ ಹಂತ, ಎಚ್‌ಎಎಲ್ 2ನೇ ಹಂತ ಮತ್ತು ನಾರ್ತ್ ಅವೆನ್ಯೂ ರಸ್ತೆಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಉತ್ತರ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಕಡಿತವಾಗಲಿದೆ. ಆಂಜನೇಯ ಬ್ಲಾಕ್, ಜೆಪಿ ಪಾರ್ಕ್, ಎಚ್‌ಎಂಟಿ ಲೇಔಟ್, ಚಾಮುಂಡೇಶ್ವರಿ ಲೇಔಟ್, ಮಾರುತಿ ನಗರ, ತಿರುಮಲ ನಗರ, ಆದಿತ್ಯನಗರ, ಹುರಳಿ ಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ದಾಸೇನಹಳ್ಳಿ, ಹೆಗಡೆ ನಗರ, ಕೋಗಿಲು ಮುಖ್ಯರಸ್ತೆ, ಜಕ್ಕೂರು ಮುಖ್ಯರಸ್ತೆ, ದಸರಹಳ್ಳಿ ಮುಖ್ಯರಸ್ತೆ, ಭುವನೇಶ್ವರಿ ನಾಗರ ಮತ್ತು ಎಂಎಲ್ ಪುರಂ 2ನೇ ಹಂತದಲ್ಲಿ ಕರೆಂಟ್ ಇರುವುದಿಲ್ಲ.

ಪಶ್ಚಿಮ ವಲಯದಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಉತ್ತರಹಳ್ಳಿ ರಸ್ತೆ, ಕೋನಚಂದ್ರ ರಸ್ತೆ, ಕೋಡಿಪಾಳ್ಯ, ಅನ್ನಪೂರ್ಣೇಶ್ವರಿ ಲೇಔಟ್, ಪಟಂಗಿರಿ, ಬಿಎಚ್‌ಇಎಲ್ ಲೇಔಟ್, ಹರ್ಷಾ ಲೇಔಟ್, ವಿದ್ಯಾಪೀಠ ರಸ್ತೆ, ಹೊಸಹಳ್ಳಿ ರಸ್ತೆ, ಅಂದ್ರಹಳ್ಳಿ ಮುಖ್ಯರಸ್ತೆ, ಉಳ್ಳಾಲ ನಗರ, ಮಾರುತಿ ನಗರ, ಬಿಡಿಎ ಏರಿಯಾ ಬ್ಲಾಕ್ -1, ಭುವನೇಶ್ವರ ನಗರ ಮತ್ತು ದೊಡ್ಡ ಬಸ್ತಿ ನಗರ ಸೇರಿವೆ. ಮುಖ್ಯ ರಸ್ತೆಯಲ್ಲಿ ಪವರ್ ಕಟ್ ಇರಲಿದೆ.

ಜನವರಿ 29ರಂದು ಪವರ್ ಕಟ್ ಇರುವ ಏರಿಯಾಗಳಿವು: ಬೆಂಗಳೂರಿನ ದಕ್ಷಿಣ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಒಕ್ಕಲಿಗರ ಸಂಘ, ಜೆಸಿ ಇಂಡಸ್ಟ್ರಿಯಲ್ ಲೇಔಟ್, ಇಸ್ರೋ ಲೇಔಟ್, ಕುಮಾರಸ್ವಾಮಿ ಲೇಔಟ್, ಸಿದ್ದಾಪುರ, ಸೋಮೇಶ್ವರನಗರ, ಅಶ್ವಥ್ ನಗರ ಮತ್ತು ಶ್ರೀನಗರದಲ್ಲಿ ಪವರ್ ಕಟ್ ಇರಲಿದೆ.

ಪೂರ್ವ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್‌ ಕಡಿತಗೊಳಿಸಲಾಗುವುದು. ಕಸ್ತೂರಿ ನಗರ, ಸದಾನಂದ ನಗರ ಮತ್ತು ಕೆಜಿ ಪುರ ಮುಖ್ಯ ರಸ್ತೆಯಲ್ಲಿ ಪವರ್ ಕಟ್ ಇರಲಿದೆ. ಉತ್ತರ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ರಾಮಚಂದ್ರಾಪುರ ಗ್ರಾಮ, ಪೀಣ್ಯ ಕೈಗಾರಿಕಾ ಪ್ರದೇಶದ ಕೆಲವು ಭಾಗಗಳು, ಪೀಣ್ಯ, ಕಂಠೀರವ ಸ್ಟುಡಿಯೋ ಬಳಿ ಮತ್ತು ಲಗ್ಗೆರೆ ಭಾಗಗಳಲ್ಲಿ ಪವರ್ ಕಟ್ ಇರಲಿದೆ. ಬೆಂಗಳೂರಿನ ಪಶ್ಚಿಮ ವಲಯದಲ್ಲಿ ನಾಳೆ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್‌ ಕಡಿತವಾಗಲಿದೆ. ಭೈರವೇಶ್ವರ ಕೈಗಾರಿಕಾ ರಸ್ತೆ, ತಿಮ್ಮಪ್ಪ ರಸ್ತೆ, ಡಿ ಗ್ರೂಪ್ ಲೇಔಟ್ ಮತ್ತು ವೀರಭದ್ರೇಶ್ವರ ನಗರದಲ್ಲಿ ಶನಿವಾರ ಪವರ್ ಕಟ್ ಇರಲಿದೆ.

ಇದನ್ನೂ ಓದಿ: Power Cut: ಬೆಂಗಳೂರಿನ ಹನುಮಂತನಗರ, ಬನಶಂಕರಿ, ಕೆಂಗೇರಿ ಹಲವೆಡೆ ಇಂದು ಪವರ್ ಕಟ್

Bengaluru Power Cut: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಜಯನಗರ, ಮತ್ತಿಕೆರೆ ಸೇರಿ ಈ ಏರಿಯಾಗಳಲ್ಲಿ ಇಂದು ಪವರ್ ಕಟ್

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ