AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿಗರೇ ಗಮನಿಸಿ; ಈ ಏರಿಯಾಗಳಲ್ಲಿ ಇಂದಿನಿಂದ ಡಿ. 4ರವರೆಗೆ ಪವರ್ ಕಟ್

BESCOM Power Cut: ಬೆಂಗಳೂರಿನ ಹಲವು ಏರಿಯಾಗಳಲ್ಲಿ ವಿದ್ಯುತ್ ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ಇಂದಿನಿಂದ 4 ದಿನ ಪವರ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.

Bengaluru Power Cut: ಬೆಂಗಳೂರಿಗರೇ ಗಮನಿಸಿ; ಈ ಏರಿಯಾಗಳಲ್ಲಿ ಇಂದಿನಿಂದ ಡಿ. 4ರವರೆಗೆ ಪವರ್ ಕಟ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 01, 2021 | 1:39 PM

Share

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ಮಳೆ ಮುಂದುವರೆಯುತ್ತಿದ್ದು, ಬೆಂಗಳೂರಿನಲ್ಲೂ ತುಂತುರು ಮಳೆಯಾಗುತ್ತಲೇ ಇದೆ. ಬೆಂಗಳೂರಿನಲ್ಲಿ ಇಂದಿನಿಂದ 4 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ನಡುವೆ ಬೆಂಗಳೂರಿಗರಿಗೆ ಮತ್ತೊಂದು ತಲೆನೋವು ಎದುರಾಗಿದ್ದು, ಇಂದಿನಿಂದ ಡಿ. 4ರವರೆಗೆ ಹಲವು ಏರಿಯಾಗಳಲ್ಲಿ ಪವರ್ ಕಟ್ ಇರಲಿದೆ. ಸಿಲಿಕಾನ್ ಸಿಟಿಯ ಯಾವ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರಿನ ಹಲವು ಏರಿಯಾಗಳಲ್ಲಿ ವಿದ್ಯುತ್ ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ಇಂದಿನಿಂದ 4 ದಿನ ಪವರ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಇಂದಿನಿಂದ (ಡಿಸೆಂಬರ್ 1)ಡಿಸೆಂಬರ್ 4ರವರೆಗೆ ಬೆಂಗಳೂರಿನ ದಕ್ಷಿಣ ಹಾಗೂ ಪಶ್ಚಿಮ ವಲಯದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ. ಇದರಿಂದ ವರ್ಕ್ ಫ್ರಂ ಹೋಂ ಇರುವ ಉದ್ಯೋಗಿಗಳಿಗೆ, ಮನೆ ಕೆಲಸಗಳನ್ನು ಮಾಡಿಕೊಳ್ಳುವ ಗೃಹಿಣಿಯರಿಗೆ ತೊಂದರೆಗಳು ಆಗಬಹುದು. ಹೀಗಾಗಿ, ಪವರ್ ಕಟ್​ ಸಮಯಕ್ಕೂ ಮೊದಲೇ ಆದಷ್ಟೂ ಕೆಲಸಗಳನ್ನು ಮಾಡಿಕೊಳ್ಳುವುದು ಉತ್ತಮ.

ಇಂದು ಬೆಂಗಳೂರಿನ ವಿನಾಯಕ ಲೇಔಟ್, ನಾಗರಭಾವಿ 9ನೇ ಬ್ಲಾಕ್, ಹೊಸಹಳ್ಳಿ, ಮಾಗಡಿ ರಸ್ತೆ, ವಿಘ್ನೇಶ್ವರ ನಗರ, ವಿನಾಯಕನಗರ, ಕುಮಾರಸ್ವಾಮಿ ಲೇಔಟ್ ಮತ್ತು ಜರಗನಹಳ್ಳಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪವರ್ ಕಟ್ ಇರಲಿದೆ.

ಡಿಸೆಂಬರ್ 2ರಂದು ಚುಂಚಘಟ್ಟ, ಬೀರೇಶ್ವರ ನಗರ ಮತ್ತು ಕೋಣನಕುಂಟೆ ಕೈಗಾರಿಕಾ ಪ್ರದೇಶದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಡಿಸೆಂಬರ್ 3ರಂದು ಇಸ್ರೋ ಲೇಔಟ್, ಕತ್ರಿಗುಪ್ಪೆ ಮುಖ್ಯ ರಸ್ತೆ ಮತ್ತು ಬನಶಂಕರಿ 3ನೇ ಹಂತದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ.

ಡಿಸೆಂಬರ್ 4ರಂದು ಬೆಂಗಳೂರಿನ ಪದ್ಮನಾಭನಗರ, ಹೊಸಕೆರೆಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನಲ್ಲಿ ನವೆಂಬರ್ 19 ರಿಂದ 21 ರವರೆಗೆ ಪವರ್ ಕಟ್; ಇಲ್ಲಿದೆ ಫುಲ್ ಡಿಟೇಲ್ಸ್

Bengaluru Power Cut: ಬೆಂಗಳೂರಿಗರೇ‌ ಗಮನಿಸಿ; ಇಂದು ಈ ಕೆಲವು ಏರಿಯಾಗಳಲ್ಲಿ ಪವರ್ ಕಟ್ ಆಗಲಿದೆ!

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ