AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ.. ಇಂದಿನಿಂದ ಜುಲೈ 31ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್​ ಕಡಿತ, ನಿಮ್ಮ ಏರಿಯಾದಲ್ಲೂ ಪವರ್​ ಕಟ್​ ಇದೆಯೇ?

ಜುಲೈ 26ರಿಂದ ಜುಲೈ 31ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರ ತನಕ ವಿದ್ಯುತ್ ವ್ಯತ್ಯಯವಾಗಲಿದೆ.

ಬೆಂಗಳೂರಿಗರೇ.. ಇಂದಿನಿಂದ ಜುಲೈ 31ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್​ ಕಡಿತ, ನಿಮ್ಮ ಏರಿಯಾದಲ್ಲೂ ಪವರ್​ ಕಟ್​ ಇದೆಯೇ?
ಸಾಂದರ್ಭಿಕ ಚಿತ್ರ
TV9 Web
| Updated By: Skanda|

Updated on: Jul 26, 2021 | 8:02 AM

Share

ಬೆಂಗಳೂರು: ಭಾರೀ ಮಳೆಯಿಂದಾಗಿ ಬೆಂಗಳೂರಿನ ಹಲವು ಪ್ರದೇಶಗಳ ಜನರು ಸಮಸ್ಯೆಗಳ ಸರಮಾಲೆಯನ್ನೇ ಎದುರಿಸುತ್ತಿದ್ದಾರೆ. ಮನೆಯೊಳಗೆ ನೀರು ನುಗ್ಗಿ, ರಸ್ತೆಯಲ್ಲೆಲ್ಲಾ ನೀರು ತುಂಬಿ, ಹೊರಬರಲಾರದೇ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಪವರ್​ ಕಟ್ (Power Cut)​ ಕೂಡಾ ಉಂಟಾಯಿತೆಂದರೆ ಅವರ ಅವಸ್ಥೆ ದೇವರಿಗೇ ಪ್ರೀತಿ ಎನ್ನುವಂತಾಗುತ್ತದೆ. ಒಂದೆರಡು ಗಂಟೆ ಕರೆಂಟ್ ಇಲ್ಲದಿದ್ದರೂ ಬೆಂಗಳೂರಿನಲ್ಲಿ (Bengaluru) ಅಲ್ಲೋಲಕಲ್ಲೋಲವಾಗಿಬಿಡುತ್ತದೆ. ಈಗಂತೂ ಕಾರ್ಖಾನೆಗಳು ಮತ್ತೆ ಆರಂಭವಾಗಿದ್ದು, ಲಾಕ್​ಡೌನ್​ಗೂ ಮೊದಲಿನಂತೆ ಕೆಲಸಗಳು ನಡೆಯುತ್ತಿವೆ. ಸಾಫ್ಟ್​ವೇರ್ ಮುಂತಾದ ಬೇರೆ ಕಂಪನಿಗಳ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಆಯ್ಕೆಯನ್ನು ನೀಡಲಾಗಿದೆ. ಇದರಿಂದ ವಿದ್ಯುತ್ ಇಲ್ಲದಿದ್ದರೆ ಬೆಂಗಳೂರಿನ ಜನರಿಗೆ ಪರದಾಟ ಖಚಿತ. ಅಂದಹಾಗೆ, ಕೆಲ ಏರಿಯಾಗಳಲ್ಲಿ ಇಂದಿನಿಂದ (ಜುಲೈ 26) ಮುಂದಿನ ಶನಿವಾರದ (ಜುಲೈ 31) ತನಕ ಬೆಳಗ್ಗೆಯಿಂದ ಸಂಜೆಯವರೆಗೂ ವಿದ್ಯುತ್ ವ್ಯತ್ಯಯವಾಗಲಿದೆ. ಹಾಗಾದರೆ, ಪವರ್ ಕಟ್ (Power Cut) ಇರುವ ಏರಿಯಾಗಳು ಯಾವುವು? ಅದರ ಪೂರ್ಣ ವಿವರ ಇಲ್ಲಿದೆ.

ಜುಲೈ 26ರಿಂದ ಜುಲೈ 31ರವರೆಗೆ ಕೆಲ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರ ತನಕ ವಿದ್ಯುತ್ ವ್ಯತ್ಯಯವಾಗಲಿದೆ. ವಿಕ್ಟೋರಿಯಾ ಲೇಔಟ್, ಪಾಮ್​ಗ್ರೋವ್ ರಸ್ತೆ, ಅಗರಂ, ವಿವೇಕ್ ನಗರ, ಸೊನ್ನೆನಹಳ್ಳಿ, ವನ್ನಾರ್​ಪೆಟ್, ಆಸ್ಟಿನ್ ಟೌನ್, ಆಂಜನೇಯ ದೇವಸ್ಥಾನ ರಸ್ತೆ, ಕೆಎಸ್​ಆರ್​ಪಿ ಕ್ವಾಟ್ರಸ್​, ದೊಮ್ಮಲೂರು, ಕ್ಯಾಂಪ್​ಬೆಲ್​ ರೋಡ್​ ಜಂಕ್ಷನ್, ರಿಚ್​ಮಂಡ್ ರಸ್ತೆ, ರುದ್ರಪ್ಪ ಗಾರ್ಡನ್, ನೀಲಸಂದ್ರ, ಬಜಾರ್ ಸ್ಟ್ರೀಟ್, ಆರ್​ಕೆ ಗಾರ್ಡನ್, ರೋಸ್ ಗಾರ್ಡನ್ ಹಾಗೂ ಓಆರ್​ಸಿ ರೋಡ್ ಈ ಪ್ರದೇಶಗಳಲ್ಲಿ ಮುಂದಿನ 6 ದಿನಗಳ ಕಾಲ ವಿದ್ಯುತ್​ ಪೂರೈಕೆ ಸಮರ್ಪಕವಾಗಿ ಇರುವುದಿಲ್ಲ.

ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನ ಜಯನಗರ ಉಪವಿಭಾಗದ ಅಡಿಯಲ್ಲಿ ಬರುವ ಹಲವು ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6ರವರೆಗೆ ಕರೆಂಟ್ ಇಲ್ಲದೇ ಜನ ಪರದಾಡುವಂತಾಗಿತ್ತು. ಜಯನಗರ, ಪದ್ಮನಾಭನಗರ, ಕತ್ರಿಗುಪ್ಪೆ, ಬನಶಂಕರಿ, ಮಾರತ್ತಹಳ್ಳಿ ಮುಂತಾದ ಕಡೆಗಳಲ್ಲಿ ಬೆಳಗ್ಗಿನಿಂದ ಸಂಜೆಯವರೆಗೆ ವಿದ್ಯುತ್ ಸಂಪರ್ಕ ಇಲ್ಲದೇ ಜನ ಸಮಸ್ಯೆ ಎದುರಿಸಿದ್ದರು.

ಇದನ್ನೂ ಓದಿ: Bengaluru Rains: ಭಾರೀ ಮಳೆಗೆ ಬೆಂಗಳೂರಿನಲ್ಲಿ ಕುಸಿದು ಬಿತ್ತು ಮನೆ; ರಸ್ತೆಯಲ್ಲಿ ಮೊಣಕಾಲಿನ ತನಕ ನಿಂತ ನೀರು 

Bengaluru Rains: ಬೆಂಗಳೂರು ನಗರದಲ್ಲಿ ದಿಢೀರ್ ಮಳೆ: ವಾಹನ ಸವಾರರ ಪರದಾಟ

(Bengaluru Power Cut Bescom informs there will be no continuous power supply in these areas of Bangalore till July 30)

ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ