AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿನ ಹಲವೆಡೆ ಇಂದು, ನಾಳೆ ಪವರ್​​ ಕಟ್; ಇಲ್ಲಿದೆ ವಿವರ

Bangalore Power Outage; ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳ ಕಾರಣದಿಂದಾಗಿ ಬೆಂಗಳೂರು ನಗರದ ಹಲವೆಡೆ ಜೂನ್ 12 ರವರೆಗೆ ವಿದ್ಯುತ್ ಕಡಿತ ಮಾಡಲಾಗುತ್ತದೆ ಎಂದು ಬೆಸ್ಕಾಂ ತಿಳಿಸಿದೆ. ಯಾವೆಲ್ಲ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ? ಪವರ್ ಕಟ್ ಸಮಯ ಎಷ್ಟು ಗಂಟೆಯಿಂದ ಎಷ್ಟು ಗಂಟೆಯವರೆಗೆ ಎಂಬ ಮಾಹಿತಿ ಇಲ್ಲಿದೆ.

Bengaluru Power Cut: ಬೆಂಗಳೂರಿನ ಹಲವೆಡೆ ಇಂದು, ನಾಳೆ ಪವರ್​​ ಕಟ್; ಇಲ್ಲಿದೆ ವಿವರ
ಬೆಂಗಳೂರಿನ ಹಲವೆಡೆ ಇಂದು, ನಾಳೆ ಪವರ್​​ ಕಟ್; ಇಲ್ಲಿದೆ ವಿವರ
ಗಣಪತಿ ಶರ್ಮಾ
|

Updated on: Jun 11, 2024 | 9:33 AM

Share

ಬೆಂಗಳೂರು, ಜೂನ್ 11: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಕೆಲವು ಪ್ರದೇಶಗಳಲ್ಲಿ ಪವರ್ ಕಟ್ (Power Cut) ಇರಲಿದೆ ಎಂದು ಬೆಸ್ಕಾಂ (BESCOM) ತಿಳಿಸಿದೆ. ದುರಸ್ತಿ ಕಾರ್ಯ, ನಿರ್ವಹಣೆ ಮತ್ತಿತರ ಕಾರ್ಯಗಳಿಗಾಗಿ ಪವರ್ ಕಟ್ ಮಾಡಲಾಗುತ್ತಿದೆ ಎಂದು ಬೆಸ್ಕಾಂ ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ತಿಳಿಸಿವೆ.

ಜೂನ್ 10 ರಿಂದಲೇ ನಿರ್ವಹಣೆ, ದುರಸ್ತಿ ಕಾರ್ಯ ಆರಂಭಿಸಲಾಗಿದ್ದು, ಮೊದಲ ದಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಆಗಿದೆ. ಜೂನ್ 8-9 ರಂದು ಕೂಡ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಿತ್ತು. ಜೂನ್ 10 ರ ಅದೇ ಸಮಯದಲ್ಲಿ ಸಿ ಕುಪ್ಪೆ, ತಾವರೆಕೆರೆ, ಹಕ್ಕಿ ಮಾರಿಪಾಳ್ಯ, ಹಂಗರಹಳ್ಳಿ, ಎಂಎಚ್ ಪಾಳ್ಯ, ಟಿ.ಬೊಮ್ಮೇನಹಳ್ಳಿ, ನೀಲಸಂದ್ರ ಮತ್ತು ಆರ್ ಬ್ಯಾಡರಹಳ್ಳಿಯಲ್ಲಿ ವಿದ್ಯುತ್ ಕಡಿತ ಮಾಡಲಾಗಿತ್ತು.

ಪವರ್ ಕಟ್ ಸಮಯ

ಇಂದು ಮತ್ತು ನಾಳೆ (ಜೂನ್ 11-12 ರಂದು) ವಿದ್ಯುತ್ ಕಡಿತದ ಸಮಯವು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಇರುತ್ತದೆ.

ಎಲ್ಲೆಲ್ಲಿ ಪವರ್ ಕಟ್?

ಜೂನ್ 11 (ಬೆಳಿಗ್ಗೆ 10 ರಿಂದ ಮಧ್ಯಾಹ್ನ 3): ಆಡುಗೋಡಿ, ಸಾಲರ್ಪುರಿಯ ಟವರ್, ಚಿಕ್ಕ ಆಡುಗೋಡಿ, ನಂಜಪ್ಪ ಲೇಔಟ್, ಚಿಕ್ಕ ಲಕ್ಷ್ಮಯ್ಯ ಲೇಔಟ್, ವಿಲ್ಸನ್ ಗಾರ್ಡನ್, ಲಕ್ಕಸಂದ್ರ ಮತ್ತು ಲಾಲ್ಜಿನಗರ.

ಇದನ್ನೂ ಓದಿ: ಸಂಚಾರ ನಿಲ್ಲಿಸಿದ ಇಂದಿರಾ ಮೊಬೈಲ್ ಕ್ಯಾಂಟೀನ್​ಗಳು; ಗ್ಯಾರಂಟಿ ಗಮನದಲ್ಲಿ ಸಿಎಂ ಕನಸಿನ ಯೋಜನೆಗೆ ನಿರ್ಲಕ್ಷ್ಯ

ಜೂನ್ 12 (ಬೆಳಿಗ್ಗೆ 10 ರಿಂದ ಮಧ್ಯಾಹ್ನ 3): ಶ್ರೀನಗರ, ಹೊಸಕೆರೆಹಳ್ಳಿ, ವೀರಭದ್ರನಗರ, ನ್ಯೂ ಟಿಂಬರ್ಯಾರ್ಡ್ (NTY) ಲೇಔಟ್, ತ್ಯಾಗರಾಜನಗರ, ಬಿಎಸ್​ಕೆ III ಹಂತ, ಕತ್ರಿಗುಪ್ಪೆ, ಗಿರಿನಗರ 4 ನೇ ಹಂತ, ವಿಲ್ಸನ್ ಗಾರ್ಡನ್, ಜೆಸಿ ರಸ್ತೆ, ಶಾಂತಿನಗರ, ರಿಚ್ಮಂಡ್ ವೃತ್ತ, ರೆಸಿಡೆನ್ಸಿ ರಸ್ತೆ ರಸ್ತೆ, ಸಂಪಂಗಿರಾಮನಗರ, ಕೆಎಚ್ ರಸ್ತೆ, ಸುಬ್ಬಯ್ಯ ವೃತ್ತ ಮತ್ತು ಸುಧಾಮನಗರ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು