AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಕೋಣನಕುಂಟೆ ಸೇರಿ ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಕರೆಂಟ್ ಇರೋದಿಲ್ಲ

BESCOM: ಇನ್ನೂ 3 ದಿನ ಬೆಂಗಳೂರಿನ ದಕ್ಷಿಣ ಹಾಗೂ ಪಶ್ಚಿಮ ವಲಯದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

Bengaluru Power Cut: ಕೋಣನಕುಂಟೆ ಸೇರಿ ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಕರೆಂಟ್ ಇರೋದಿಲ್ಲ
ಪವರ್ ಕಟ್
TV9 Web
| Edited By: |

Updated on: Dec 02, 2021 | 7:07 AM

Share

ಬೆಂಗಳೂರು: ಮಳೆಯ ಕಾಟದಿಂದ ತತ್ತರಿಸಿದ್ದ ಬೆಂಗಳೂರಿನ (Bangalore) ಜನರಿಗೆ ಬೆಸ್ಕಾಂ (BESCOM) ಪವರ್ ಕಟ್ ಶಾಕ್ ನೀಡಿದೆ. ಇಂದಿನಿಂದ 3 ದಿನ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ಪವರ್ ಕಟ್ (Power Cut) ಇರಲಿದೆ. ಯಾವ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂಬ ಮಾಹಿತಿ ಇಲ್ಲಿದೆ. ಕೋಣನಕುಂಟೆ ಸೇರಿ ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ.

ಬೆಂಗಳೂರಿನ ಹಲವು ಏರಿಯಾಗಳಲ್ಲಿ ವಿದ್ಯುತ್ ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ಇಂದಿನಿಂದ ಡಿ. 4ರವರೆಗೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಇನ್ನೂ 3 ದಿನ ಬೆಂಗಳೂರಿನ ದಕ್ಷಿಣ ಹಾಗೂ ಪಶ್ಚಿಮ ವಲಯದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಇಂದು ಬೆಂಗಳೂರಿನ ಚುಂಚಘಟ್ಟ, ಬೀರೇಶ್ವರ ನಗರ ಮತ್ತು ಕೋಣನಕುಂಟೆ ಕೈಗಾರಿಕಾ ಪ್ರದೇಶದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ನಾಳೆ (ಡಿಸೆಂಬರ್ 3) ಇಸ್ರೋ ಲೇಔಟ್, ಕತ್ರಿಗುಪ್ಪೆ ಮುಖ್ಯ ರಸ್ತೆ ಮತ್ತು ಬನಶಂಕರಿ 3ನೇ ಹಂತದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ.

ಡಿಸೆಂಬರ್ 4ರಂದು ಬೆಂಗಳೂರಿನ ಪದ್ಮನಾಭನಗರ, ಹೊಸಕೆರೆಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಬೆಸ್ಕಾಂ ತನ್ನ ಗ್ರಾಹಕರಿಗೆ ಮುಂಚಿತವಾಗಿ ತಿಳಿಸಿದೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿಗರೇ ಗಮನಿಸಿ; ಈ ಏರಿಯಾಗಳಲ್ಲಿ ಇಂದಿನಿಂದ ಡಿ. 4ರವರೆಗೆ ಪವರ್ ಕಟ್

Tamil Nadu Rain: ತಮಿಳುನಾಡಿನಲ್ಲಿ ಮಳೆಯಿಂದ 106 ಜನ ಸಾವು; ಚೆನ್ನೈನಲ್ಲಿ ದಾಖಲೆಯ ಮಳೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್