Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಡಿಸೆಂಬರ್ 26, 27ಕ್ಕೆ ಕರೆಂಟ್ ಇರಲ್ಲ

| Updated By: sandhya thejappa

Updated on: Dec 25, 2021 | 11:44 AM

BESCOM: ಬೆಂಗಳೂರಿನ ಹಲವು ಏರಿಯಾಗಳಲ್ಲಿ ವಿದ್ಯುತ್ ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ನಾಳೆಯಿಂದ ಡಿಸೆಂಬರ್ 27ರ ವರೆಗೆ ಪವರ್ ಕಟ್ ಆಗಲಿದೆ ಅಂತ ಬೆಸ್ಕಾಂ ತಿಳಿಸಿದೆ.

Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಡಿಸೆಂಬರ್ 26, 27ಕ್ಕೆ ಕರೆಂಟ್ ಇರಲ್ಲ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ನಿರಂತರ ಮಳೆಯಿಂದ ಆದ ಅವಾಂತರ ಅಷ್ಟಿಷ್ಟಲ್ಲ. ಭಾರಿ ಗಾಳಿ, ಮಳೆಗೆ ವಿದ್ಯುತ್ ತಂತಿಗಳು ಜೋತು ಬಿದ್ದಿವೆ. ಹೀಗಾಗಿ ಬೆಸ್ಕಾಂ (BESCOM) ವಿದ್ಯುತ್ ನಿರ್ವಹಣಾ ಕಾರ್ಯ ನಡೆಸಲು ಬೆಂಗಳೂರಿನ ಕೆಲ ಏರಿಯಾಗಳಲ್ಲಿ  ಡಿಸೆಂಬರ್ 26ರಿಂದ ಅಂದರೆ ನಾಳೆಯಿಂದ 27ರ ವರೆಗೆ ಪವರ್ ಕಟ್ ಮಾಡಲು ನಿರ್ಧರಿಸಿದೆ. 26ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಒಟ್ಟು ಎರಡು ದಿನಗಳ ಕಾಲ ವಿವಿಧ ನಗರಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಬೆಂಗಳೂರಿನ ಹಲವು ಏರಿಯಾಗಳಲ್ಲಿ ವಿದ್ಯುತ್ ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ನಾಳೆಯಿಂದ ಡಿಸೆಂಬರ್ 27ರ ವರೆಗೆ ಪವರ್ ಕಟ್ ಆಗಲಿದೆ ಅಂತ ಬೆಸ್ಕಾಂ ತಿಳಿಸಿದೆ. ಟಾಟಾ ಐಬಿಎಂ, ಎಸ್.ಜೆ.ಆರ್. ಪಾರ್ಕ್, ಸುಮಧುರಾ ಅಪಾರ್ಟ್ಮೆಂಟ್ ಸಮುಚ್ಚಯ, ನಲ್ಲೂರಹಳ್ಳಿ, ಯುಟಿಎಲ್ ಕಂಪನಿ, ವಿ.ಕೆ.ಟೆಕ್ ಪಾರ್ಕ್, ಗಾಯತ್ರಿ ಟೆಕ್ ಪಾರ್ಕ್, ಮೈಕ್ರೊ ಚಿಪ್, ವೈದೇಹಿ ಆಸ್ಪತ್ರೆ, ಸತ್ಯ ಸಾಯಿ ಬಾಬಾ ಆಸ್ಪತ್ರೆ, ಚನ್ನಮ್ಮ ಬಡಾವಣೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಇದರ ಜೊತೆಗೆ ಗ್ರಾಫೈಟ್ ಸಿಗ್ನಲ್, ಆಕಾಶ್ ಟೆಕ್ಪಾರ್ಕ್, ಜನತಾ ಕಾಲೋನಿ, ಕೋಡಿಪಾಳ್ಯ, ಅನ್ನಪೂರ್ಣೇಶ್ವರಿ ಬಡಾವಣೆ, ವಿದ್ಯಾಪೀಠ ರಸ್ತೆ, ಡಿ.ಬಿ. ಕಲ್ಲು, ಬಿ.ಜಿ.ಎಸ್. ಆಸ್ಪತ್ರೆ ರಸ್ತೆ, ಸಿದ್ಧಗಂಗಾ ಬಡಾವಣೆ, ಮಾರಣ್ಣ ಬಡಾವಣೆ, ಉಲ್ಲಾಳ ನಗರ, ಮಾರುತಿನಗರ, ಕುವೆಂಪು ಮುಖ್ಯ ರಸ್ತೆ, ಜಿ.ಕೆ. ಗಲ್ಲಿ, ಬಿಇಎಲ್ 1ನೇ ಮತ್ತು 2ನೇ ಹಂತ ಸುತ್ತಮುತ್ತ ಪ್ರದೇಶಗಳಲ್ಲಿ ಎರಡು ದಿನಗಳ ಕಾಲ ಪವರ್ ಕಟ್ ಆಗಲಿದೆ.

ಇದನ್ನೂ ಓದಿ

Video: ಅಲಂಕರಿಸಿದ ಎತ್ತಿನಗಾಡಿಯಲ್ಲಿ ಹುಟ್ಟೂರು ಪ್ರವೇಶಿಸಿದ ಸಿಜೆಐ ಎನ್​.ವಿ.ರಮಣ; ಹೂಮಳೆ ಸುರಿದ ಗ್ರಾಮಸ್ಥರು

Income Tax: ಈ ಐದರಲ್ಲಿ ಹೆಚ್ಚಿನ ಮೌಲ್ಯದ ನಗದು ವಹಿವಾಟಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಬಹುದು

Published On - 11:44 am, Sat, 25 December 21