AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿನ ವಿಜಯನಗರ, ಬಸವೇಶ್ವರ ನಗರ ಸೇರಿ ಹಲವೆಡೆ ಇಂದು ಪವರ್ ಕಟ್

Bangalore News: ಇಂದು (ಸೆಪ್ಟೆಂಬರ್ 20) ವಿಜಯನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

Bengaluru Power Cut: ಬೆಂಗಳೂರಿನ ವಿಜಯನಗರ, ಬಸವೇಶ್ವರ ನಗರ ಸೇರಿ ಹಲವೆಡೆ ಇಂದು ಪವರ್ ಕಟ್
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Sep 20, 2022 | 6:02 AM

Share

ಬೆಂಗಳೂರು: ಮಳೆ ಕಡಿಮೆಯಾಗಿದ್ದರೂ ದಿನವೂ ಸಂಜೆ ಮೋಡ ಮುಸುಕಿದ ವಾತಾವರಣ ಹಾಗೂ ತುಂತುರು ಮಳೆ ಇರುವುದರಿಂದ ಬೆಂಗಳೂರಿನಲ್ಲಿ ಯಾವಾಗ ಬೇಕಿದ್ದರೂ ಮಳೆಯ (Bengaluru Rains) ಆರ್ಭಟ ಹೆಚ್ಚಾಗಬಹುದು. ಹೀಗಾಗಿ, ವಿದ್ಯುತ್ ದುರಸ್ತಿ ಮತ್ತು ನಿರ್ವಹಣಾ ಕಾಮಗಾರಿಗಳು ನಡೆಯುವ ಕಾರಣದಿಂದ ಬೆಂಗಳೂರು ನಗರದ ಹಲವು ಭಾಗಗಳಲ್ಲಿ ಇಂದಿನಿಂದ (ಸೆ. 20) ಸೆ. 23ರವರೆಗೆ ವಿದ್ಯುತ್ ಪೂರೈಕೆಯಲ್ಲಿ (Bangalore Power Cut) ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ತಿಳಿಸಿದೆ.

ಇಂದು (ಸೆಪ್ಟೆಂಬರ್ 20) ವಿಜಯನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬಸವೇಶ್ವರ ನಗರ, ವಿಜಯನಗರ, ಗೋವಿಂದರಾಜ ನಗರ, ಕಾಮಾಕ್ಷಿಪಾಳ್ಯ, ಆರ್‌ಪಿಸಿ ಲೇಔಟ್, ಬಿನ್ನಿ ಲೇಔಟ್, ಪ್ರಶಾಂತ್ ನಗರ, ಹೊಸಹಳ್ಳಿ ವಿಜಯನಗರ, ಆರ್‌ಪಿಸಿ ಲೇಔಟ್, ಸರ್ವಿಸ್ ರಸ್ತೆ, ವಿಜಯನಗರ 7ನೇ ಮುಖ್ಯ ರಸ್ತೆಯಿಂದ 13ನೇ ಮುಖ್ಯ ರಸ್ತೆಯವರೆಗೆ, ಈಸ್ಟ್ ಸ್ಟೇಜ್ ತಿಮ್ಮೇನಹಳ್ಳಿ, ಎಂಸಿ ಲೇಔಟ್ ಭಾಗ, ಬಿನ್ನಿ ಲೇಔ, ಮಾರ್ನಳ್ಳಿ ವಿನಾಯಕ ಲೇಔಟ್ ಭಾಗ, ಪಿಸಿ ಇಂಡಸ್ಟ್ರಿಯಲ್ ಏರಿಯಾ, ಕಾವೇರಿಪುರ, ರಂಗನಾಥಪುರ, ಕೆಸಿಜಿ ಇಂಡಿ ಏರಿಯಾ, ನಂಜಪ್ಪ ಇಂಡಿ. ಎಸ್ಟೇಟ್, ಸುನ್ನದಗೋಡು, ಸೆಲ್ವಂ ಇಂಡಸ್ಟ್ರಿಯಲ್ ಎಸ್ಟೇಟ್, ಬಲ್ಲಯ್ಯನ ಕೆರೆ, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ಕಾವೇರಿಪುರ 1ನೇ ಬ್ಲಾಕ್, 2ನೇ ಬ್ಲಾಕ್, 5ನೇ ಬ್ಲಾಕ್, 5ನೇ ಬ್ಲಾಕ್, 7 ನೇ ಬ್ಲಾಕ್, 8ನೇ ಬ್ಲಾಕ್, ನಾಗರಭಾವಿ 11 ನೇ ಬ್ಲಾಕ್, KHB ಕಾಲೋನಿ, HVR ಲೇಔಟ್, ಸಿಂಡಿಕೇಟ್ ಬ್ಯಾಂಕ್ ಕಾಲೋನಿ ಮತ್ತು ಸುತ್ತಮುತ್ತಲಿನ ಪ್ರದೇಶ, ಸಿದ್ದಯ್ಯ ಪುರಾಣಿಕ ರಸ್ತೆ, ಪಾಪಯ್ಯ ಗಾರ್ಡನ್ KHB ಕಾಲೋನಿ, KHB ಕಾಲೋನಿ, ಮಾಗಡಿ ಮುಖ್ಯರಸ್ತೆ, ಅಗ್ರಹಾರ ದಾಸರಹಳ್ಳಿಯ ಭಾಗದಲ್ಲಿ ಕರೆಂಟ್ ಇರುವುದಿಲ್ಲ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದು ಸಂಜೆಯವರೆಗೆ ಪವರ್ ಕಟ್

ಸೆಪ್ಟೆಂಬರ್ 21ರಂದು ಜಯನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಹಾಗೇ, ಶ್ರೀನಗರ, ಹೊಸಕೆರೆಹಳ್ಳಿ, ಪಿಇಎಸ್ ಕಾಲೇಜು, ವೀರಭದ್ರನಗರ, ಬ್ಯಾಂಕ್ ಕಾಲೋನಿ, ಹನುಮಂತನಗರ, ಗಿರಿನಗರ, ಸೀತಾ ಸರ್ಕಲ್, ವಿದ್ಯಾಪೀಠ ಸರ್ಕಲ್, ಪ್ರಮೋದ ಲೇಔಟ್, ಮುನೇಶ್ವರ ಬ್ಲಾಕ್, ನಾಗೇಂದ್ರ ಬ್ಲಾಕ್, ಬುಲ್ ಟೆಂಪಲ್ ರಸ್ತೆ, ಕತ್ರಿಗುಪ್ಪೆ, ಅವಳಿಗುಪ್ಪೆ, ರಾಜವ್ವನಗರ ಅಪಾರ್ಟ್‌ಮೆಂಟ್, ಬಿಎಸ್‌ಕೆ 3ನೇ ಹಂತದಲ್ಲಿ ಪವರ್ ಕಟ್ ಇರಲಿದೆ.

ಸೆಪ್ಟಂಬರ್ 23ರಂದು ಕೆಂಗೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ 5 ಗಂಟೆಯವರೆಗೆ ಪವರ್ ಕಟ್ ಇರಲಿದೆ. ಬೈರೋಹಳ್ಳಿ, ರಾಮೋಹಳ್ಳಿ, ಕೆಂಗೇರಿ ಟೌನ್, ಬಿಡದಿ ಗ್ರಾಮಾಂತರ, ದೇವಿಕಿರಣ್, ಡೆಕ್ಕನ್ ಹೆರಾಲ್ಡ್, KAIDB 1 ನೇ ಹಂತ, KAIDB 2 ನೇ ಹಂತ, ISRO ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಇನ್ನಷ್ಟು ಕರ್ನಾಟಕದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು