AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ

ಬೆಂಗಳೂರಿನ ಭೈರಸಂದ್ರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 23ರಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. 66/11 ಬ್ರಿಗೇಡ್ ಮೆಡೋಸ್ ವಿದ್ಯುತ್ ವಿತರಣಾ ಕೇಂದ್ರದ ತ್ರೈಮಾಸಿಕ ನಿರ್ವಹಣೆ ಕಾರ್ಯದಿಂದಾಗಿ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ಎಲ್ಲೆಲ್ಲಿ ವಿದ್ಯುತ್ ಕಡಿತಗೊಳ್ಳಿಸಲಾಗುತ್ತಿದೆ ಎಂಬ ಮಾಹಿತಿ ಇಲ್ಲಿದೆ.

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
Power Cut
ಗಂಗಾಧರ​ ಬ. ಸಾಬೋಜಿ
|

Updated on: Jul 23, 2025 | 8:05 AM

Share

ಬೆಂಗಳೂರು, ಜುಲೈ 23: ಭೈರಸಂದ್ರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಇಂದು (ಜು.23ರಂದು) ಬೆಳಗ್ಗೆ 10 ರಿಂದ ಸಂಜೆ 5ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ (power cut). 66/11 ಬ್ರಿಗೇಡ್ ಮೆಡೋಸ್ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ತ್ರೈಮಾಸಿಕ ನಿರ್ವಹಣೆ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ. ಈ ಕುರಿತಾಗಿ ಬೆಸ್ಕಾಂ (BESCOM) ಮಾಹಿತಿ ನೀಡಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಎಲ್ಲೆಲ್ಲಿ ವಿದ್ಯುತ್​ ಕಡಿತ?

ಭೈರಸಂದ್ರ, ಹೊಸಪಾಳ್ಯ, ಎಂ.ಎಲ್.ಎ ತೋಟ, ಬಂಜಾರಪಾಳ್ಯ, ಅಗರ, ಕರಡಿಗುಡ್ಡ, ಸಿದ್ದನಪಾಳ್ಯ, ಅಭಯ ಕಾಲೇಜ್, ವ್ಯಾಲಿ ಸ್ಕೂಲ್, ನವಿಲು ಮನೆ, ಸಾಲುದೊಡ್ಡಿ, ತಾತಗುಣಿ ಕಾಲೋನಿ, ಲಕ್ಷ್ಮೀಪುರ, ಸಾಲುದೊಡ್ಡಿ ಗೇಟ್, ನವಗ್ರಾಮ, ವಡೇರಹಳ್ಳಿ, ಚೌಡೇಶ್ವರಿ ನಗರ, ತಾತ ಗುಣಿ, ರಾಮಚಂದ್ರಪ್ಪ ಲೇಔಟ್, ಕಾವೇರಿ ನಗರ, ರಮೇಶ್ ನಗರ, ಸಾಲುಹುಣಸೆ.

ಇದನ್ನೂ ಓದಿ: Karnataka Smart Meter Scam | ಸ್ಮಾರ್ಟ್ ಮೀಟರ್ ಅಕ್ರಮ ಆರೋಪ: ಸಚಿವ ಕೆಜೆ ಜಾರ್ಜ್​ಗೆ ಸಂಕಷ್ಟ, ಕೋರ್ಟ್​ ಮೆಟ್ಟಿಲೇರಿದ ಬಿಜೆಪಿ

ಇದನ್ನೂ ಓದಿ
Image
ಕೊಳವೆ ಬಾವಿ ನೀರು ಬಳಕೆಗೂ ಶುಲ್ಕ, ಬರಲಿದೆ ಡಿಜಿಟಲ್ ಟೆಲಿಮೆಟ್ರಿ!
Image
ವಿದ್ಯುತ್ ಬಿಲ್ ಪಾವತಿ ಸೇರಿ 5 ಎಸ್ಕಾಂ ಆನ್‌ಲೈನ್ ಸೇವೆ 2 ದಿನ ಸ್ಥಗಿತ
Image
ಬೆಂಗಳೂರಿನ ಈ ನಗರಗಳಲ್ಲಿ ಒಂದು ವಾರ ವಿದ್ಯುತ್ ವ್ಯತ್ಯಯ, ಇಲ್ಲಿದೆ ಮಾಹಿತಿ
Image
ಸ್ಮಾರ್ಟ್ ಮೀಟರ್ ಅಕ್ರಮ: ಜಾರ್ಜ್​ಗೆ ಸಂಕಷ್ಟ, ಕೋರ್ಟ್​ಗೆ ಬಿಜೆಪಿ ದೂರು

ಬಾದೇಕಟ್ಟೆ, ಉತ್ತರಿ, ತಿಮ್ಮೇಗೌಡನಪಾಳ್ಯ, ದಿಣ್ಣೆಪಾಳ್ಯ, ಊದಿಪಾಳ್ಯ, ಬಸಪ್ಪನ ಪಾಳ್ಯ, ಬಿ.ಎಂ. ಕಾವಲ್, ಓ.ಬಿ. ಚೂಡಹಳ್ಳಿ, ಮಂತ್ರಿ ಪ್ರಿಮೈಸ್, ಬ್ರಿಗೇಡ್ ಮೆಡೋಸ್ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಪಶ್ಚಿಮ ವೃತ್ತದ ಅಧೀಕ್ಷಕ ಎಂಜಿನಿಯರ್ ತಿಳಿಸಿದ್ದಾರೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಈ ನಗರಗಳಲ್ಲಿ ಒಂದು ವಾರ ವಿದ್ಯುತ್ ವ್ಯತ್ಯಯ, ಇಲ್ಲಿದೆ ಮಾಹಿತಿ

ಇದೇ ರೀತಿಯಾಗಿ 66 ಕೆ.ವಿ ಕನಕಪುರ ಟಿ.ಕೆ. ಹಳ್ಳಿಯ ಲೈನ್-3ರ 66/11 ಕೆ.ವಿ ಅಚ್ಚಲು ಮತ್ತು ಹೊನ್ನಿಗನಹಳ್ಳಿ ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕೂಡ ಕಾಮಗಾರಿ ನಡೆಯಲಿದೆ. ಈ ನಿಟ್ಟಿನಲ್ಲಿ ಹೊನ್ನಿ-ಗನಹಳ್ಳಿ, ಸಾತನೂರು, ಕಾಡಹಳ್ಳಿ, ಬೊಮ್ಮನಹಳ್ಳಿ, ಅರೆಕಟ್ಟೆ-ದೊಡ್ಡಿ, ತೋಟಹಳ್ಳಿ ಮತ್ತು ಅಚ್ಚಲು ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ 4ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಕನಕಪುರ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್​ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು