Bangalore power Cut: ಬೆಂಗಳೂರು ಪವರ್ ಕಟ್, ಈ ಪ್ರದೇಶಗಳಲ್ಲಿಂದು‌ ವಿದ್ಯುತ್ ವ್ಯತ್ಯಯ

Bangalore power cut today: ಬೆಂಗಳೂರು ನಗರದ ಪೂರ್ವ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ನಿರ್ವಹಣಾ ಕಾಮಗಾರಿಯ ಕಾರಣ ಇಂದು ವಿದ್ಯುತ್ ಕಡಿತ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಯಾವೆಲ್ಲ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಎಂಬ ಮಾಹಿತಿ ಇಲ್ಲಿದೆ.

Bangalore power Cut: ಬೆಂಗಳೂರು ಪವರ್ ಕಟ್, ಈ ಪ್ರದೇಶಗಳಲ್ಲಿಂದು‌ ವಿದ್ಯುತ್ ವ್ಯತ್ಯಯ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Nov 28, 2024 | 6:47 AM

ಬೆಂಗಳೂರು, ನವೆಂಬರ್ 28: ಬೆಂಗಳೂರು ಪೂರ್ವ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ. ನಿರ್ವಹಣಾ ಕಾಮಗಾರಿಯ ಪ್ರಯುಕ್ತ ವಿದ್ಯುತ್ ಕಡಿತಗೊಳಿಸಲಾಗುವುದು ಎಂದು ಬೆಸ್ಕಾಂ ತಿಳಿಸಿದೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಮಾಹಿತಿ ನೀಡಿರುವ ಬೆಸ್ಕಾಂ, ವಿದ್ಯುತ್ ಕಡಿತಗೊಳ್ಳಲಿರುವ ಪ್ರದೇಶಗಳು ಮತ್ತು ಸಮಯದ ವಿವರ ನೀಡಿದೆ.

ಲೀಲಾ ವೆಂಚ್ಯೂರ್ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನೆಲೆಯಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯ ತನಕ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಯಾವೆಲ್ಲ ಪ್ರದೇಶಗಳಲ್ಲಿ ಪವರ್ ಕಟ್?

ಏರ್‌ಪೋರ್ಟ್ ರಸ್ತೆ, ಕೋಡಿಹಳ್ಳಿ, 16 ಮತ್ತು 19ನೇ ಮುಖ್ಯರಸ್ತೆ, ಎಚ್‌ಎಎಲ್ 2ನೇ ಹಂತ, ಕಾಲ್ಟನ್ ಟವರ್ಸ್, ಎನ್‌ಎಎಲ್ ಕಾಂಪೌಂಡ್, ಕೋಡಿಹಳ್ಳಿ, ರಾಮ ಟೆಂಪಲ್ ರಸ್ತೆ, ವೆಂಕಟೇಶ್ವರ ಕಾಲೋನಿ, ಬೂಮರೆಡ್ಡಿ ಕಾಲೋನಿ, 515 ಕಾಲೋನಿ, ಕೋಡಿಹಳ್ಳಿ ಗ್ರಾಮ, 17, 18 ಹಾಗೂ 19ನೇ ಅಡಿ ಮುಖ್ಯರಸ್ತೆ, ಸರ್ವೀಸ್ ರಸ್ತೆ 100, 13ನೇ ಎಚ್, 12ನೇ ಮುಖ್ಯರಸ್ತೆ, ದೊಮ್ಮಲೂರು 2ನೇ ಹಂತ, 6ನೇ ಮುಖ್ಯ ಡಿಫೆನ್ಸ್ ಕಾಲೋನಿ, 80 ಅಡಿ ರಸ್ತೆ, 11ನೇ ಮುಖ್ಯರಸ್ತೆ, ಹಳೆ ತಿಪ್ಪಸಂದ್ರ, ಹೊಸ ತಿಪ್ಪಸಂದ್ರ, ಎಂಜಿ ರಸ್ತೆಗಳಲ್ಲಿ ಪವರ್ ಕಟ್ ಇರಲಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಫ್ಲೂ, ವೈರಲ್ ಸೋಂಕು: ಮಾಸ್ಕ್ ಧರಿಸುವುದೂ ಸೇರಿ ತಜ್ಞ ವೈದ್ಯರು ನೀಡಿದ ಸಲಹೆಗಳು ಇಲ್ಲಿವೆ ನೋಡಿ

ಚರ್ಚ್ ಸ್ಟ್ರೀಟ್, ಸೇಂಟ್ ಮಾರ್ಕ್ಸ್ ರಸ್ತೆ, ಲ್ಯಾವೆಲ್ಲೆ ರಸ್ತೆ, ಮ್ಯೂಸಿಯಂ ರಸ್ತೆ, ರೆಸ್ಟ್‌ಹೌಸ್ ರಸ್ತೆ, ರಿಚ್ಮಂಡ್ ರಸ್ತೆ, ಕಸ್ತೂರಬಾ ರಸ್ತೆ, ವಾಲ್ಟನ್ ರಸ್ತೆ, ಡಿಕನ್ಸನ್ ರಸ್ತೆ, ಅಶೋಕ್ ನಗರ, ಪ್ರೈಮ್‌ರೋಸ್ ರಸ್ತೆ, ರೆಸಿಡೆನ್ಸಿ ರಸ್ತೆ, ಟ್ರಿನಿಟಿ ಸರ್ಕಲ್, ಹಲಸೂರು ರಸ್ತೆ, ಮರ್ಫಿ ಪಟ್ಟಣ, ಹಲಸೂರು ಗೀತಾಂಜಲಿ ಲೇಔಟ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:41 am, Thu, 28 November 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ