
ಬೆಂಗಳೂರು, ನವೆಂಬರ್ 24: ಬೆಂಗಳೂರಿನ ಹಲವು ಪ್ರದೇಶಗಳ ನಿವಾಸಿಗಳು ಇಂದು ವಿದ್ಯುತ್ ವ್ಯತ್ಯಯವನ್ನು ಎದುರಿಸಬೇಕಾಗಿದೆ. ಬೆಸ್ಕಾಂ ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವತಿಯಿಂದ ತುರ್ತು ಹಾಗೂ ತ್ರೈಮಾಸಿಕ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರದ ವಿವಿಧ ವಿದ್ಯುತ್ ಉಪಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆಯಿಂದಲೇ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದ್ದು, ಸಂಜೆವರೆಗೂ ಸಮಸ್ಯೆ ಮುಂದುವರಿಯುವ ಸಾಧ್ಯತೆಯಿದೆ. ಹೀಗಾಗಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಜಾಲಹಳ್ಳಿ ವಿಭಾಗದ ಸಿ-3 ಉಪವಿಭಾಗದ ವ್ಯಾಪ್ತಿಯ 66/11 ಕೆವಿ ಅಬ್ಬಿಗೆರೆ ವಿದ್ಯುತ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಕಮ್ಮಗೊಂಡನಹಳ್ಳಿ, ರಾಘವೇಂದ್ರ ಬಡಾವಣೆ, ಲಕ್ಷ್ಮೀಪುರ, ವಡೇರಹಳ್ಳಿ, ಅಬ್ಬಿಗೆರೆ, ಅಬ್ಬಿಗೆರೆ ಕೈಗಾರಿಕಾ ಪ್ರದೇಶ, ಸಿಂಗಾಪುರ, ಪೈಪ್ಲೈನ್ ರಸ್ತೆ, ನಿಸರ್ಗ ಬಡಾವಣೆ, ಕೆಂಪೇಗೌಡ ಬಡಾವಣೆ, ಕಲಾನಗರ ಮುಖ್ಯರಸ್ತೆ, ವಿಶ್ವೇಶ್ವರಯ್ಯ ಬಡಾವಣೆ, ಹೆಚ್ವಿವಿ ಬಡಾವಣೆ, ಕುವೆಂಪುನಗರ, ಕಾಶಿರಾಮನಗರ, ಸಿಂಹಾದ್ರಿ ಬಡಾವಣೆ, ಪ್ರಕೃತಿ ಬಡಾವಣೆ, ಮುನಿಸ್ವಾಮಪ್ಪ ಬಡಾವಣೆ, ಲಕ್ಕಪ್ಪ ಬಡಾವಣೆ, ಬಾಲಾಜಿ ಬಡಾವಣೆ ಹಾಗೂ ವರದರಾಜಸ್ವಾಮಿ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇನ್ನೊಂದೆಡೆ, ಹೆಬ್ಬಾಳ ವಿಭಾಗದ ಸಿ-7 ಉಪವಿಭಾಗದ ವ್ಯಾಪ್ತಿಯ 220/66/11 ಕೆವಿ ಪುಟ್ಟೇನಹಳ್ಳಿ ವಿದ್ಯುತ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿದೆ. ಈ ಕಾರಣದಿಂದ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ವಿದ್ಯುತ್ ಪೂರೈಕೆಯಲ್ಲಿ ಅಡಚಣೆಯಾಗಲಿದೆ.
ವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ಸೆಂಚುರಿ ಲೇಔಟ್, ಅನಂತಪುರ ಗೇಟ್, ಏರ್ಫೋರ್ಸ್ ಪ್ರದೇಶ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ರಾಮ್ಕಿ ನಾರ್ತ್-1, ಮಾರುತಿ ನಗರ, ಪ್ರೆಸ್ಟೀಜ್ ರಾಯಲ್ ಗಾರ್ಡನ್ಸ್, ಕೋಗಿಲು, ಪೂಜಾ ಮಹಾಲಕ್ಷ್ಮಿ ಲೇಔಟ್, ಸಪ್ತಗಿರಿ ಲೇಔಟ್, ಪ್ರಕೃತಿ ನಗರ, ಶ್ರೀನಿವಾಸಪುರ, ಅಯ್ಯಪ್ಪ ಎನ್ಕ್ಲೇವ್, ಎಸ್.ಎನ್. ಹಳ್ಳಿ ಹಾಗೂ ಮೈಲಪನಹಳ್ಳಿ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ.
ಇನ್ನು ಕಂಬೀಪುರದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ನವೆಂಬರ್ 24ರಂದು ಬೆಳಗ್ಗೆ 11ರಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಕಂಬೀಪುರ, ಕಾಟನಾಯಕನಪುರ, ವರಹಸಂದ್ರ, ಸ್ವಾಮೀಜನಗರ, ಅಂಜೇಪಾಳ್ಯ, ಅಪ್ಪುಮೇಯ ನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳು ಹಾಗೂ ಕೆಲವು ಅಪಾರ್ಟ್ಮೆಂಟ್ಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.
ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಕಾಮಗಾರಿ ಪೂರ್ಣಗೊಂಡರೆ ವಿದ್ಯುತ್ ಪೂರೈಕೆಯನ್ನು ಪುನರಾರಂಭಿಸುವ ಸಾಧ್ಯತೆಯಿದೆ. ಹೀಗಾಗಿ ಸಾರ್ವಜನಿಕರು ಮೊಬೈಲ್, ಲ್ಯಾಪ್ಟಾಪ್ ಸೇರಿದಂತೆ ಅಗತ್ಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ಮುಂಚಿತವಾಗಿ ಚಾರ್ಜ್ ಮಾಡಿಟ್ಟುಕೊಳ್ಳಬೇಕು. ನೀರಿನ ಸಂಗ್ರಹ ಸೇರಿದಂತೆ ದೈನಂದಿನ ಅಗತ್ಯಗಳಿಗೆ ಮುನ್ನೆಚ್ಚರಿಕೆ ವಹಿಸುವುದು ಉತ್ತಮ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ