AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಕಿಸ್​ಗೆ 50 ಸಾವಿರ ರೂ! ಲಕ್ಷಾಂತರ ರೂ. ಸುಲಿಗೆ: ಬೆಂಗಳೂರಿನಲ್ಲಿ ಖತರ್ನಾಕ್ ಟೀಚರ್, ಹನಿಟ್ರ್ಯಾಪ್ ಗ್ಯಾಂಗ್ ಬಂಧನ

ರಾಜಕಾರಣಿಗಳ ಹನಿಟ್ರ್ಯಾಪ್ ದೊಡ್ಡಮಟ್ಟದಲ್ಲಿ ಸುದ್ದಿಯಾಗಿರುವ ಸಂದರ್ಭದಲ್ಲೇ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್​ನಲ್ಲಿ ಖಾಸಗಿ ಪ್ರೀಸ್ಕೂಲ್ ಶಿಕ್ಷಕಿಯೊಬ್ಬಳು ಪ್ರಿ ಸ್ಕೂಲ್​ಗೆ ಬರುತ್ತಿದ್ದ ಮಕ್ಕಳ ಪೋಷಕನನ್ನೇ ಹನಿಟ್ರ್ಯಾಪ್ ಮಾಡಿ ಲಕ್ಷಾಂತರ ರೂ. ವಂಚಿಸಿರುವುದು ಬೆಳಕಿಗೆ ಬಂದಿದೆ. ಪೋಷಕನಿಗೆ ಮುತ್ತು ಕೊಟ್ಟು 50 ಸಾವಿರ ರೂ. ಪೀಕಿಸಿದ್ದ ಆರೋಪಿ, ರಿಲೇಷನ್​​ಶಿಪ್​​ನಲ್ಲಿ ಇರುವುದಾಗಿ ಲಕ್ಷಾಂತರ ರೂ. ವಂಚಿಸಿ ಪೊಲೀಸ್ ಬಲೆಗೆ ಬಿದ್ದಿದ್ದಾಳೆ.

ಒಂದು ಕಿಸ್​ಗೆ 50 ಸಾವಿರ ರೂ! ಲಕ್ಷಾಂತರ ರೂ. ಸುಲಿಗೆ: ಬೆಂಗಳೂರಿನಲ್ಲಿ ಖತರ್ನಾಕ್ ಟೀಚರ್, ಹನಿಟ್ರ್ಯಾಪ್ ಗ್ಯಾಂಗ್ ಬಂಧನ
ಆರೋಪಿಗಳಾದ ಶ್ರೀದೇವಿ, ಗಣೇಶ್, ಸಾಗರ್
Ganapathi Sharma
|

Updated on:Apr 01, 2025 | 9:28 AM

Share

ಬೆಂಗಳೂರು, ಏಪ್ರಿಲ್ 1: ಆ ಟೀಚರ್ ಅಂತಿಥ ಮಹಿಳೆಯಲ್ಲ. ಪ್ರಿ ಸ್ಕೂಲ್​ಗೆ ಬರುತ್ತಿದ್ದ ಮಕ್ಕಳ ತಂದೆಗೇ ಮುತ್ತು ಕೊಟ್ಟು ಹನಿಟ್ರ್ಯಾಪ್ (Honey Trap) ಮಾಡಿದ್ದಲ್ಲದೆ, 50 ಸಾವಿರ ರೂ. ಸುಲಿಗೆ ಮಾಡಿದ್ದಾಳೆ. ಮತ್ತೆ ಬೆದರಿಕೆಯೊಡ್ಡಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ಹಣ ವಸೂಲಿ ಮಾಡಿದ್ದಲ್ಲದೆ, ಲಕ್ಷಾಂತರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಮತ್ತಷ್ಟು ಹಣ ವಸೂಲಿ ಮಾಡಲು ಮುಂದಾದ ಟೀಚರ್ (Pre School Teacher) ಹಾಗೂ ಗ್ಯಾಂಗ್ ಈಗ ಪೊಲೀಸ್ ಬಲೆಗೆ ಬಿದ್ದಿದೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್​ನಲ್ಲಿ ಖಾಸಗಿ ಪ್ರೀಸ್ಕೂಲ್ (Pre School) ನಡೆಸುತ್ತಿದ್ದ ಶ್ರೀದೇವಿ ರುಡಿಗಿ ಎಂಬಾಕೆಯೇ ಹನಿಟ್ರ್ಯಾಪ್ ಎಸಗಿದ ಶಿಕ್ಷಕಿ.

ಶಿಕ್ಷಕಿಯ ಹನಿಟ್ರ್ಯಾಪ್ ಬಲೆಗೆ ಬಿದ್ದ ಪೋಷಕ

ಆರೋಪಿ ಶ್ರೀದೇವಿ ರುಡಿಗಿಗೆ 2023 ರಲ್ಲಿ ರಾಕೇಶ್ ಎಂಬ ಪೋಷಕನ ಪರಿಚಯವಾಗಿತ್ತು. ರಾಕೇಶ್​​ನಿಂದ ಶಾಲೆ ನಿರ್ವಹಣೆ, ತಂದೆಯ ಚಿಕಿತ್ಸೆಗೆಂದು ಶ್ರೀದೇವಿ 4 ಲಕ್ಷ ರೂ. ಸಾಲ ಪಡೆದಿದ್ದಳು. 2024ರ ಮಾರ್ಚ್​ನಲ್ಲಿ ವಾಪಸ್ ಕೊಡುವುದಾಗಿ ತಿಳಿಸಿದ್ದಳು. ಆದರೆ, ಹಣ ವಾಪಸ್ ಕೇಳಿದಾಗ ಕೊಟ್ಟಿರಲಿಲ್ಲ. ‘ತುಂಬಾ ಕಷ್ಟವಿದೆ. ಹಣ ಈಗ ಕೊಡಲು ಆಗುವುದಿಲ್ಲ. ನೀವು ಶಾಲೆಯ ಪಾರ್ಟನರ್ ಆಗಿ’ ಎಂದಿದ್ದಳು.

ಶುರುವಾಯ್ತು ಪಾರ್ಟನರ್​ಶಿಪ್, ಸುತ್ತಾಟ

ನಂತರ ಇಬ್ಬರ ನಡುವೆ ಸಲುಗೆ ಬೆಳೆದಿದೆ. ಇಬ್ಬರೂ ಹಲವೆಡೆ ಜತೆಯಾಗಿ ಸುತ್ತಾಟ ನಡೆಸಿದ್ದಾರೆ. ಶ್ರೀದೇವಿ‌ ಜೊತೆ ಮಾತನಾಡಲೆಂದೇ ರಾಕೇಶ್ ಹೊಸ ಸಿಮ್ ಹಾಗೂ ಪೋನ್ ಖರೀದಿಸಿದ್ದರು. ಆದರೆ, ನಂತರ ಜನವರಿ ಮೊದಲ ವಾರದಲ್ಲಿ ಹಣ ವಾಪಸ್ ಕೇಳಿದ್ದರು. ಹಣ ವಾಪಸ್ ಕೇಳಿದ್ದ ರಾಕೇಶ್​ಗೆ, ‘ನಿನ್ನ ಜೊತೆ ರಿಲೇಶನ್ ಶಿಪ್​​ನಲ್ಲಿ ಇರುತ್ತೇನೆ’ ಎಂದು ಹೇಳಿದ್ದ ಶ್ರೀದೇವಿ 15 ಲಕ್ಷ ರೂ. ಹಣ ಕೇಳಿದ್ದಳು. ಇದಕ್ಕೆ ರಾಕೇಶ್ ಒಪ್ಪಿರಲಿಲ್ಲ.

ಇದನ್ನೂ ಓದಿ
Image
ಕಾಮಖೆಡ್ಡಾ, ರಾಜೇಂದ್ರ ಕೊಲೆ ಯತ್ನದ ಸೂತ್ರಧಾರಿಯ ಹಿಡಿಯುವರೇ ಅಧಿಕಾರಿಗಳು
Image
ರಾಜೇಂದ್ರ ರಾಜಣ್ಣ ಹನಿಟ್ರ್ಯಾಪ್, ಕೊಲೆ ಯತ್ನದ ಸಂಚುಕೋರ ಒಬ್ಬನೇ!
Image
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
Image
ಹನಿಟ್ರ್ಯಾಪ್​ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಸದ್ದಿಲ್ಲದೇ ತನಿಖೆ ಶುರು!

ಮನೆಗೆ ತೆರಳಿ ಮುತ್ತಿಟ್ಟಿದ್ದಕ್ಕೆ 50 ಸಾವಿರ ರೂ!

ನಂತರ ಶ್ರೀದೇದಿ ಪೋಷಕ ರಾಕೇಶ್ ಮನೆಗೆ ತೆರಳಿ ಆತನಿಗೆ ಮುತ್ತುಕೊಟ್ಟಿದ್ದಳು. ಬಳಿಕ ಬ್ಲ್ಯಾಕ್​ಮೇಲ್ ಮಾಡಿ 50 ಸಾವಿರ ರೂ. ಪಡೆದಿದ್ದಳು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆ ಬಳಿಕ, ಪದೇ ಪದೇ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಆಕೆ ಜತೆ ಸಂಪರ್ಕಕ್ಕೆ ಇಟ್ಟುಕೊಂಡಿದ್ದ ಸಿಮ್ ಕಾರ್ಡ್ ಅನ್ನು ರಾಕೇಶ್ ಮುರಿದು ಬಿಸಾಡಿದ್ದರು.

ಮಾರ್ಚ್ 12 ರಂದು ರಾಕೇಶ್ ಪತ್ನಿಗೆ ಕರೆ ಮಾಡಿದ್ದ ಶ್ರೀದೇವಿ , ಮಕ್ಕಳ ಸ್ಕೂಲ್ ಟಿಸಿ ಕಳುಹಿಸಿಕೊಡುತ್ತೇನೆ, ನಿಮ್ಮ ಪತಿಯನ್ನು ಕಳುಹಿಸಿ ಎಂದಿದ್ದಳು. ಅದರಂತೆ ಶ್ರೀದೇವಿಯ ಪ್ರೀ ಸ್ಕೂಲ್​​ಗೆ ರಾಕೇಶ್ ತೆರಳಿದ್ದರು. ಆಗ ಅಲ್ಲಿ ಶ್ರೀದೇವಿ ಜೊತೆ ಹಾಜರಿದ್ದ ಇತರೆ ಆರೋಪಿಗಳಾದ ಸಾಗರ್ ಹಾಗೂ ಗಣೇಶ್ ಬೆದರಿಕೆ ಹಾಕಿದ್ದರು. ‘‘ಸಾಗರ್ ಜೊತೆ ಶ್ರೀದೇವಿಗೆ ನಿಶ್ಚಿತಾರ್ಥ ಆಗಿದೆ. ಆದರೆ ನೀನು ಆಕೆ ಜೊತೆ ಮಜಾ ಮಾಡುತ್ತಿದ್ದಿ’’ ಎಂದು ಆರೋಪಿ ಗಣೇಶ್ ಬೆದರಿಕೆ ಹಾಕಿದ್ದ. ಬಳಿಕ ಕಾರಿನಲ್ಲಿ‌ ಕೂರಿಸಿಕೊಂಡು, ‘‘ಯಾರಿಗೂ ವಿಚಾರ ಹೇಳಬಾರದು ಎಂದರೆ 1 ಕೋಟಿ‌ ರೂ. ಕೊಡು’’ ಎಂದು ಬ್ಲ್ಯಾಕ್​ಮೇಲ್ ಮಾಡಿದ್ದ. ಕೊನೆಯದಾಗಿ ಆರೋಪಿಗಳು 20 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. 1.90 ಲಕ್ಷ ರೂ. ಹಣ ಪಡೆದು ಬಿಟ್ಟು ಕಳುಹಿಸಿದ್ದರು. ಆದರೆ, ಉಳಿದ ಹಣ ನೀಡುವಂತೆ ಪ್ರಾಣ ಬೆದರಿಕೆ ಹಾಕಿದ್ದರು ಎಂದು ರಾಕೇಶ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿಟಿ ರವಿಗೆ ಕಬ್ಬಿನ ಗದ್ದೆ ತೋರಿಸಿದ ಅಧಿಕಾರಿಗಳು ಕಾಮಖೆಡ್ಡಾ ಮತ್ತು ರಾಜೇಂದ್ರ ಕೊಲೆ ಯತ್ನದ ಸೂತ್ರಧಾರಿಯನ್ನು ಹಿಡಿಯುವರೇ?

ಹೀಗಾಗಿ ರಾಕೇಶ್ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನನ್ವಯ ಶ್ರೀದೇವಿ, ಅರುಣ್ ಮತ್ತು ಸಾಗರ್​ರನ್ನು ಬಂಧಿಸಲಾಗಿದೆ. ಸದ್ಯ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಮೂವರು ಆರೋಪಿಗಳು ಕೂಡ ವಿಜಯಪುರ ಮೂಲದವರಾಗಿದ್ದಾರೆ.

ವರದಿ: ಪ್ರದೀಪ್​ ಚಿಕ್ಕಾಟಿ, ‘ಟಿವಿ9’

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:19 am, Tue, 1 April 25