AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗರ್ಭಿಣಿ ಹೆಂಡತಿ ಬೀದಿಗೆ! ಗಂಡನ ಮೊಬೈಲ್‌ನಲ್ಲಿತ್ತು ಅಸಹ್ಯ ಚಿತ್ರಗಳು

ಬೆಂಗಳೂರಿನ ದಾಸರಹಳ್ಳಿಯಲ್ಲಿ ಅಮಾನವೀಯ ಘಟನೆ ನಡೆದಿದೆ. ಬಿಎಂಟಿಸಿ ಅಧಿಕಾರಿ ಜಗದೀಪ್, ಅಕ್ರಮ ಸಂಬಂಧದಿಂದ ಗರ್ಭಿಣಿ ಪತ್ನಿ ಶ್ವೇತಾರನ್ನು ಮನೆಯಿಂದ ಹೊರಹಾಕಿದ್ದಾರೆ. ಆರು ತಿಂಗಳ ಗರ್ಭಿಣಿಗೆ 'ಮಗು ತೆಗೆಸಿಬಿಡು' ಎಂದು ಕಿರುಕುಳ ನೀಡಿ, ದೈಹಿಕ ಹಲ್ಲೆ ನಡೆಸಿದ್ದಾರೆ. ಮನೆ ಕಳೆದುಕೊಂಡ ಶ್ವೇತಾ, ನ್ಯಾಯಕ್ಕಾಗಿ ಬಾಗಲಗುಂಟೆ ಪೊಲೀಸರನ್ನು ಆಶ್ರಯಿಸಿದ್ದಾರೆ. ಪತಿಯ ವಿರುದ್ಧ ಕ್ರಮಕ್ಕೆ ಮನವಿ ಮಾಡಿದ್ದಾರೆ.

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗರ್ಭಿಣಿ ಹೆಂಡತಿ ಬೀದಿಗೆ! ಗಂಡನ ಮೊಬೈಲ್‌ನಲ್ಲಿತ್ತು ಅಸಹ್ಯ ಚಿತ್ರಗಳು
ಅಕ್ರಮ ಸಂಬಂಧ ಬೆಂಗಳೂರು
ಮಂಜುನಾಥ ಕೆಬಿ
| Edited By: |

Updated on:May 03, 2026 | 1:10 PM

Share

ಬೆಂಗಳೂರು, ಮೇ.3: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗರ್ಭಿಣಿ ಹೆಂಡತಿಯನ್ನೇ ಮನೆಯಿಂದ ಆಚೆ ಹಾಕಿರುವ ಅಮಾನವೀಯ ಘಟನೆ ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಎಂಟಿಸಿ ಸೆಕ್ಯೂರಿಟಿ ಇನ್‌ಚಾರ್ಜ್ ಆಗಿರುವ ಜಗದೀಪ್ (42) ತನ್ನ ಪತ್ನಿ ಶ್ವೇತಾ (32)ಗೆ ದ್ರೋಹ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಶ್ವೇತಾ ಮತ್ತು ಜಗದೀಪ್ 14 ವರ್ಷಗಳ ಹಿಂದೆ ವಿವಾಹವಾಗಿದ್ದರು. ಜಯನಗರದ ಸರ್ಕಾರಿ ಕ್ವಾರ್ಟರ್ಸ್‌ನಲ್ಲಿ ಇಬ್ಬರೂ ವಾಸವಿದ್ದರು.

ಪತಿ ಜಗದೀಪ್‌ನ ವರ್ತನೆಯಲ್ಲೂ ತುಂಬಾ ಬದಲಾವಣೆಗಳು ಆಗಿತ್ತು. ಇದರಿಂದ ಅನುಮಾನಗೊಂಡು ವಾಟ್ಸಾಪ್ ಸಂದೇಶಗಳನ್ನು ಪರಿಶೀಲಿಸಿದಾಗ ಆತನಿಗೆ ಬೇರೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧವಿರುವುದು ಪತ್ನಿ ಶ್ವೇತಾಗೆ ಗೊತ್ತಾಗಿದೆ. ಅಕ್ರಮ ಸಂಬಂಧದ ಬಗ್ಗೆ ಪ್ರಶ್ನಿಸಿದಾಗ ಜಗದೀಪ್ ಪತ್ನಿಯ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೆ, ಪ್ರಸ್ತುತ ಆರು ತಿಂಗಳ ಗರ್ಭಿಣಿಯಾಗಿರುವ ಶ್ವೇತಾಗೆ “ಮಗು ತೆಗೆಸಿಬಿಡು, ನೀನು ನನಗೆ ಬೇಡ” ಎಂದು ಕಿರುಕುಳ ನೀಡಿದ್ದಾನೆ.

ಇದನ್ನೂ ಓದಿ: ದೇಹದಲ್ಲಿ ಒಂದೇ ಒಂದು ಮಚ್ಚೆ ಇರಬಾರದು, ಬೆತ್ತಲೆ ಪೂಜೆಗೆ 30 ಲಕ್ಷ ರೂ. : ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡುತ್ತಿದ್ದ ಕಿರಣ್

ಕಳೆದ ಆರು ತಿಂಗಳ ಹಿಂದೆ ಗರ್ಭಿಣಿ ಪತ್ನಿಯನ್ನು ಮನೆಯಿಂದ ಹೊರಹಾಕಿರುವ ಜಗದೀಪ್, ಈಗ ಆಕೆಗೆ ಯಾವುದೇ ಆಸರೆ ಇಲ್ಲದಂತೆ ಮಾಡಿದ್ದಾನೆ. ನ್ಯಾಯಕ್ಕಾಗಿ ಆಗ್ರಹಿಸಿ ನೊಂದ ಗರ್ಭಿಣಿ ಶ್ವೇತಾ ಬಾಗಲಗುಂಟೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ತನ್ನ ಗಂಡನ ವಿರುದ್ಧ ಕಾನೂನು ಕ್ರಮ ಕೈಗೊಂಡು ತನಗೆ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾರೆ.

ವರದಿ: ಮಂಜುನಾಥ್ ಟಿವಿ9 ಕನ್ನಡ

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:08 pm, Sun, 3 May 26

Follow Us
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ?
ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ?
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: BJP ಶಾಸಕಿ ಮನೆ ಬಳಿಯೇ ಬಾಂಬ್​​ ಸ್ಫೋಟ
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: BJP ಶಾಸಕಿ ಮನೆ ಬಳಿಯೇ ಬಾಂಬ್​​ ಸ್ಫೋಟ
ನೀರಿಗಾಗಿ ಮಂಗಗಳ ಪರದಾಟ, ಮನಕಲಕುವ ದೃಶ್ಯ ಇಲ್ಲಿದೆ ನೋಡಿ!
ನೀರಿಗಾಗಿ ಮಂಗಗಳ ಪರದಾಟ, ಮನಕಲಕುವ ದೃಶ್ಯ ಇಲ್ಲಿದೆ ನೋಡಿ!
ಡಿಕೆಶಿ​ಗೆ ಶುಭಸುದ್ದಿ ಸಿಗುತ್ತೆ ಎಂಬ ಮಾತಿಗೆ ಮಾಜಿ ಸಚಿವ ರಾಜಣ್ಣ ಏನಂದ್ರು?
ಡಿಕೆಶಿ​ಗೆ ಶುಭಸುದ್ದಿ ಸಿಗುತ್ತೆ ಎಂಬ ಮಾತಿಗೆ ಮಾಜಿ ಸಚಿವ ರಾಜಣ್ಣ ಏನಂದ್ರು?