ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣಾ ಫಲಿತಾಂಶ ಪ್ರಕಟ; ಇಲ್ಲಿದೆ ವಿವರ

ಪ್ರೆಸ್ ಕ್ಲಬ್ ಆಫ್​ ಬೆಂಗಳೂರಿಗೆ’(Press Club of Bangalore) ಇಂದು(ಭಾನುವಾರ) ನಡೆದ ಚುನಾವಣೆಯಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಶ್ರೀಧರ್‌.ಆರ್‌ ಪುನರಾಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ವಿ.ಎನ್.ಮೋಹನ್ ಕುಮಾರ್ ಚುನಾಯಿತರಾಗಿದ್ದಾರೆ. 1040 ಮತದಾರರಲ್ಲಿ  767 ಮತಗಳು ಚಲಾವಣೆಯಾದವು.

ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣಾ ಫಲಿತಾಂಶ ಪ್ರಕಟ; ಇಲ್ಲಿದೆ ವಿವರ
ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣಾ ಫಲಿತಾಂಶ ಪ್ರಕಟ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 07, 2024 | 9:49 PM

ಬೆಂಗಳೂರು, ಜು.07: ‘ಪ್ರೆಸ್ ಕ್ಲಬ್ ಆಫ್​ ಬೆಂಗಳೂರಿಗೆ’(Press Club of Bangalore) ಇಂದು(ಭಾನುವಾರ) ನಡೆದ ಚುನಾವಣೆಯಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಶ್ರೀಧರ್‌.ಆರ್‌ ಪುನರಾಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ವಿ.ಎನ್.ಮೋಹನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಆಗಿ ಶಿವಕುಮಾರ್ ಬೆಳ್ಳಿತಟ್ಟೆ ಹಾಗೂ ಕಾರ್ಯದರ್ಶಿಯಾಗಿ ಜಿ.ವೈ.ಮಂಜುನಾಥ್ ಆಯ್ಕೆ ಆಗಿದ್ದಾರೆ.

ಇಂದು ಬೆಳಗ್ಗೆ 9 ರಿಂದ 2ಗಂಟೆ ಮತದಾನಕ್ಕೆ ಅವಕಾಶವಿದ್ದು, ಮತದಾರರು ಮತಗಟ್ಟೆಗೆ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರಿಂದ ಮತಗಟ್ಟೆ ಅಧಿಕಾರಿ ಮತದಾನ ಹೆಚ್ಚಿನ ಸಮಯ ತೆಗೆದುಕೊಂಡು ಸರತಿ ಸಾಲಿನಲ್ಲಿ ನಿಂತ ಎಲ್ಲರಿಗೂ ಮತದಾನ ಮಾಡಲು ಅವಕಾಶ ನೀಡಿದರು. 1040ಮತದಾರರಲ್ಲಿ  767 ಮತಗಳು ಚಲಾವಣೆಯಾದವು.

ಅಧ್ಯಕ್ಷ ಸ್ಥಾನಕ್ಕೆ ಧ್ಯಾನಪೂಣಚ್ಚ, ಶ್ರೀಧರ್ ಆರ್.ಮತ್ತು ಸುಭಾಶ್ ಹೂಗಾರ್ ರವರು ಸ್ಪರ್ಧೆ ಮಾಡಿದ್ದರೆ. ಉಪಾಧ್ಯಕ್ಷ ಸ್ಥಾನ, ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ , ಜಂಟಿ ಕಾರ್ಯದರ್ಶಿ, ಖಜಾಂಚಿ ಮತ್ತು 6 ಕಮಿಟಿ ಸದಸ್ಯರುಗಳು ಮತ್ತು ಮಹಿಳಾ ಮೀಸಲು ಸ್ಥಾನಗಳಿಗೆ ಚುನಾವಣೆ ಜರುಗಿತು.

ಇದನ್ನೂ ಓದಿ:ಶಾಸಕರಿಗಾಗಿ ನಿರ್ಮಿಸಲಾದ ಕ್ಲಬ್ ಉದ್ಘಾಟನೆ: ​ಇಲ್ಲಿ‌ ಸ್ವಲ್ಪ ಎಣ್ಣೆ ಹಾಕಬಹುದು ಎಂದ ಹೊರಟ್ಟಿ

ಇನ್ನುಳಿದಂತೆ ಪ್ರೆಸ್ ಕ್ಲಬ್ ಜಂಟಿ ಕಾರ್ಯದರ್ಶಿ ಆಗಿ ಧರಣೇಶ್. ಪ್ರೆಸ್ ಕ್ಲಬ್ ಖಜಾಂಚಿ ಆಗಿ ಜಿ.ಗಣೇಶ್, ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶಿವಣ್ಣ. ಯಾಸಿರ್‌ ಮುಸ್ತಾಕ್‌, ಶರಣಬಸಪ್ಪ, ಮುಮ್ತಾಜ್‌ ಅಲೀಮ್‌, ರೋಹಿಣಿ ವಿ ಅಡಿಗ, C.R. ಮಂಜುನಾಥ್ ಹಾಗೂ ಮಹಿಳಾ ಮೀಸಲು ಸ್ಥಾನದಲ್ಲಿ ತೇಜಸ್ವಿನಿ ಆಯ್ಕೆಯಾಗಿದ್ದಾರೆ.

ಪಡೆದ ಮತಗಳ ವಿವರ

ಶ್ರೀಧರ್ ಆರ್ , ಅಧ್ಯಕ್ಷರು- 404ಮತಗಳು ವಿ.ಎನ್.ಮೋಹನ್ ಕುಮಾರ್ ಉಪಾಧ್ಯಕ್ಷರು -417ಮತಗಳು. ಶಿವಕುಮಾರ್ ಬೆಳ್ಳಿತಟ್ಟೆ ಪ್ರಧಾನ ಕಾರ್ಯದರ್ಶಿ- ಮತಗಳು 336

ಜಿ.ಗಣೇಶ್ ಖಜಾಂಚಿ-ಮತಗಳು 556 ಜಿ.ವೈ.ಮಂಜುನಾಥ್ ಕಾರ್ಯದರ್ಶಿ-ಮತಗಳು 288 ಧರಣೇಶ್ ಜಂಟಿ ಕಾರ್ಯದರ್ಶಿ ಮತಗಳು-195 ಮಹಿಳಾ ಸ್ಥಾನ- ಮಿನಿ ತೇಜಸ್ವಿ ಮತಗಳು-491

6 ಕಮಿಟಿ ಸದಸ್ಯರು- ಶಿವಣ್ಣ-234, ಶರಣಬಸಪ್ಪ-258 ಯಾಸ್ನಿಫ್ ಮುಸ್ತಾಕ್-259 ಮುತ್ತಾಜ್ ಅಲೀಮ್-272 ರೋಹಿಣಿ ಅಡಿಗ-306 ಮಂಜುನಾಥ್-281

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:47 pm, Sun, 7 July 24

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ