AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ವಿದ್ಯಾರ್ಥಿಯ ಬಂಧನ

ಬೆಂಗಳೂರಿನ ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜೊಂದರಲ್ಲಿ ವಿದ್ಯಾರ್ಥಿಯನ್ನು ಅದೇ ಕಾಲೇಜಿನ ಕಿರಿಯ ವಿದ್ಯಾರ್ಥಿ ವಾಶ್​​ರೂಮ್​ಗೆ ಎಳೆದೊಯ್ದು ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಲ್ಲದೆ, ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ನಡೆದಿದೆ. ಅಕ್ಟೋಬರ್ 10 ರಂದು ನಡೆದ ಘಟಣೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ವಿದ್ಯಾರ್ಥಿಯ ಬಂಧನ
ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ವಿದ್ಯಾರ್ಥಿಯ ಬಂಧನ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Oct 17, 2025 | 10:41 AM

Share

ಬೆಂಗಳೂರು, ಅಕ್ಟೋಬರ್ 17: ಬೆಂಗಳೂರಿನ (Bengaluru) ಪ್ರತಿಷ್ಠಿತ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿ ಮೇಲೆ ಅದೇ ಕಾಲೇಜಿನ ಜ್ಯೂನಿಯರ್ ವಿದ್ಯಾರ್ಥಿ ಅತ್ಯಾಚಾರ ಎಸಗಿದ್ದು, ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಲೇಜಿನ ಶೌಚಾಲಯಕ್ಕೆ ವಿದ್ಯಾರ್ಥಿನಿಯನ್ನು ಎಳೆದೊಯ್ದು ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಆರೋಪಿ, ಅತ್ಯಾಚಾರ ಎಸಗಿದ್ದಾನೆ. ಸದ್ಯ ಆರೋಪಿ ಜೀವನ್ ಗೌಡ ಎಂಬಾತನನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದ್ದೇನು?

ದಿನಾಂಕ 10-10-2025 ರಂದು ಬೆಳಿಗ್ಗೆ 8.55ಕ್ಕೆ ತರಗತಿಗೆ ಹಾಜರಾಗಿದ್ದ ಸಂತ್ರಸ್ತೆ ಆರೋಪಿ ಜೀವನ್​ನಿಂದ ಕೆಲವೊಂದು ಸಾಮಗ್ರಿಗಳನ್ನು ಕಲೆಕ್ಟ್ ಮಾಡಿಕೊಳ್ಳಬೇಕಾಗಿದ್ದು, ಲಂಚ್ ಬ್ರೇಕ್​​ನಲ್ಲಿ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾಳೆ. ಹೀಗೆ ಲಂಚ್ ವೇಳೆಯಲ್ಲಿ ಭೇಟಿಯಾದಾಗ ಆರೋಪಿಯು ಸಂತ್ರಸ್ತೆಯ ಬಳಿ ಸ್ವಲ್ಪ ಮಾತನಾಡಬೇಕೆಂದು ಹೇಳಿ ಡೌನ್ ಸ್ಪೇರ್ಸ್​ಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿಂದ ಆರೋಪಿಯ ಮನವಿ ಮೇರೆಗೆ 7ನೇ ಮಹಡಿ ಪಿಜಿ ಬ್ಲಾಕ್​ಗೆ ಹೋಗಿರುತ್ತಾರೆ. ಅಲ್ಲಿ, ಆರೋಪಿಯು ಸಂತ್ರಸ್ತೆಗೆ ಕಿಸ್ ಮಾಡಲು ಬಂದಿದ್ದಾನೆ. ತಪ್ಪಿಸಿಕೊಳ್ಳಲು ಮುಂದಾದಾಗ ವಿದ್ಯಾರ್ಥಿನಿಯನ್ನು ಹಿಂಬಾಲಿಸಿಕೊಂಡು 6ನೇ ಮಹಡಿಗೆ ಬಂದ ಆರೋಪಿ, ಆಕೆಯನ್ನು ಬಲವಂತವಾಗಿ ವಾಶ್ ರೂಮ್ ಒಳಗೆ ಕರೆದುಕೊಂಡು ಡೋರ್ ಲಾಕ್ ಮಾಡಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದ ಆರೋಪಿ

ಸಂತ್ರಸ್ತೆಯನ್ನು ಪುರುಷರ ಶೌಚಗೃಹದೊಳಕ್ಕೆ ಎಳೆದೊಯ್ದ ಆರೋಪಿ ಅಲ್ಲಿ ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾನೆ. ಅಲ್ಲದೆ, ಬಲವಂತ ಮಾಡಿದ್ದಾನೆ. ನಂತರ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ, ಕತ್ತು ಕುಯ್ದ ಪುತ್ರ

ಘಟನೆಯಿಂದ ಆಘಾತಗೊಂಡ ವಿದ್ಯಾರ್ಥಿನಿ ಈ ವಿಚಾರವನ್ನು ಆಪ್ತ ಸ್ನೇಹಿತರ ಬಳಿ ಹೇಳಿಕೊಂಡಿದ್ದಾಳೆ. ಅವರು ಆಕೆಗೆ ಧೈರ್ಯ ತುಂಬಿ ಪೋಷಕರಿಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ. ನಂತರ ಪೊಲೀಸರ ಜತೆ ಹನುಮಂತನಗರ ಠಾಣೆಗೆ ತೆರಳಿ ಸಂತ್ರಸ್ತೆ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ. ಬಳಿಕ ಆರೋಪಿಯನ್ನು ಬಂಧಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:15 am, Fri, 17 October 25

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು