8 ತಿಂಗಳ ಮಗು ನುಂಗಿದ್ದ ಬಾಟಲ್‌ ಮುಚ್ಚಳವನ್ನು ಯಶಸ್ವಿಯಾಗಿ ಹೊರತೆಗೆದ ಬೆಂಗಳೂರಿನ ವೈದ್ಯರು

8 ತಿಂಗಳ ಮಗು ನುಂಗಿದ್ದ ಬಾಟಲ್‌ ಮುಚ್ಚಳವನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿ ಹೊರತೆಗೆದಿದ್ದು, ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.

8 ತಿಂಗಳ ಮಗು ನುಂಗಿದ್ದ ಬಾಟಲ್‌ ಮುಚ್ಚಳವನ್ನು ಯಶಸ್ವಿಯಾಗಿ ಹೊರತೆಗೆದ ಬೆಂಗಳೂರಿನ ವೈದ್ಯರು
ಮಗುವಿನ ಗಂಟಲಿನಿಂದ ಬಾಟಲ್‌ ಮುಚ್ಚಳ ಹೊರತೆಗೆದ ವೈದ್ಯರು
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 07, 2022 | 10:21 PM

ಬೆಂಗಳೂರು: 8 ತಿಂಗಳ ಮಗು ನುಂಗಿದ್ದ 2 ಸೆಂ.ಮೀನ ಬಾಟಲ್‌ನ ರಬ್ಬರ್ ಮುಚ್ಚಳವನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆ ವೈದ್ಯರು(Bengaluru private hospital doctors) ಯಶಸ್ವಿಯಾಗಿ ಹೊರತೆಗೆದಿದ್ದಾರೆ. ಈ ಮೂಲಕ ಮಗುವಿನ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಎನ್‌ಟಿ ತಜ್ಞ ಡಾ. ಎಚ್‌. ಕೆ. ಸುಶೀನ್‌ ದತ್‌ ಹಾಗೂ ಡಾ ನರೇಂದ್ರನಾಥ್‌ ಅವರ ತಂಡ ಮಗುವಿಗೆ ಯಾವುದೇ ತೊಂದರೆಯಾಗದಂತೆ ಬಾಟಲ್‌ನ ರಬ್ಬರ್ ಮುಚ್ಚಳವನ್ನು ಹೊರತೆಗೆದಿದ್ದು, ಮಗುವಿನ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ: ಪ್ಲಾಟ್‌ಫಾರ್ಮ್ – ರೈಲಿನ ಮಧ್ಯೆ ಸಿಲುಕಿದ ವಿದ್ಯಾರ್ಥಿನಿಯ ರಕ್ಷಣೆ ಮಾಡಿದ ವಿಡಿಯೊ ವೈರಲ್

ಇನ್ನು ಈ ಕುರಿತು ಮಾತನಾಡಿದ ಡಾ ನರೇಂದ್ರನಾಥ್‌, 8 ತಿಂಗಳ ಗಂಡು ಮಗುವು ಮನೆಯಲ್ಲಿ ಆಟವಾಡುತ್ತಿರುವ ವೇಳೆ ಕೈಗೆ ಸಿಕ್ಕಿದ ರಬ್ಬರ್‌ನಂತಿದ್ದ ಬಾಟಲ್‌ನ ಮುಚ್ಚಳವನ್ನು ನುಂಗಿದೆ. ಆದರೆ, ಆ ಕ್ಷಣಕ್ಕೆ ಮಗುವಿಗೆ ಯಾವುದೇ ಸಮಸ್ಯೆಯಾಗಿಲ್ಲ. ಈ ಬಗ್ಗೆ ಪೋಷಕರಿಗೂ ತಿಳಿದಿಲ್ಲ. ಆದರೆ, ಒಂದು ವಾರದೊಳಗೆ ಮಗುವಿನ ಧ್ವನಿ ಕ್ಷೀಣಿಸುತ್ತಾ ಬಂದಿದೆ. ಮಗುವಿನ ಆರೋಗ್ಯ ಹದಗೆಟ್ಟಿದ್ದು, ಆಹಾರ ಸೇವಿಸುತ್ತಿರಲಿಲ್ಲ.  ಅಲ್ಲದೇ ಮಗುವಿನ ಗಂಟಲಿನಿಂದ ಶಿಳ್ಳೆಯ ರೀತಿಯಲ್ಲಿ ದನಿ ಕೇಳುತ್ತಿತ್ತು. ಇದರಿಂದ ಗಾಬರಿಯಾದ ಕುಟುಂಬಸ್ಥರು ಆಸ್ಪತ್ರೆಗೆ ಕರೆ ತಂದರು. ಪ್ರಾರಂಭದಲ್ಲಿ ಶ್ವಾಸಕೋಶದ ಸಮಸ್ಯೆ ಇರಬಹುದೆಂದು ತಿಳಿದಿದ್ದೆವು. ಆದರೆ, ಕೆಲ ಅನುಮಾನದಿಂದ ಲಾರಿಂಗೋಸ್ಕೋಪಿ ಮೂಲಕ ಗಂಟಲಿನ ಪರೀಕ್ಷೆ ನಡೆಸಿದಾಗ 2 ಸೆಂ.ಮೀ ಅಗಲದ ಬಿಳಿ ಆಕಾರದ ಮುಚ್ಚಳ ಇರುವುದು ತಿಳಿದು ಬಂದಿತ್ತು ಎಂದರು.

ಕೂಡಲೇ ಆ ಮುಚ್ಚಳವನ್ನು ತೆಗೆದು ಹಾಕುವಲ್ಲಿ ಯಶಸ್ವಿಯಾದೆವು. ಒಂದು ವೇಳೆ ಈ ವಿಷಯ ತಿಳಿಯದೇ ಕೇವಲ ಮಾತ್ರ, ಇಂಜಕ್ಷನ್‌ ನೀಡಿದ್ದರೆ, ಮುಂದಿನ ದಿನಗಳಲ್ಲಿ ಅನ್ನನಾಳದ ಮೇಲ್ಭಾಗ, ಎದೆಯ ಸೋಂಕು ಅಥವಾ ಶ್ವಾಸಕೋಶದ ಸೋಂಕು ಇತ್ಯಾದಿ ಬಹುದೊಡ್ಡ ಆರೋಗ್ಯ ಸಮಸ್ಯೆ ಉಂಟಾಗುತ್ತಿತ್ತು ಎಂದು ತಿಳಿಸಿದರು.

ಡಾ. ಎಚ್ ಕೆ ಸುಶೀನ್ ದತ್ ಮಾತನಾಡಿ, ಮನೆಯಲ್ಲಿ ಸಣ್ಣ ಮಕ್ಕಳ ಕೈಗೆ ಇಂತಹ ಸಣ್ಣ ಪದಾರ್ಥಗಳು ಸಿಗದಂತೆ ಎಚ್ಚರಿಕೆ ವಹಿಸುವುದು ಅತ್ಯಂತ ಅವಶ್ಯಕ. ಮಕ್ಕಳಿಗೆ ತಿಳಿಯದೇ ಅದನ್ನು ನುಂಗಬಹುದು. ಹೀಗಾಗಿ ಮನೆಯಲ್ಲಿ ಮಗುವಿನ ಆರೈಕೆ ಬಗ್ಗೆ ಹೆಚ್ಚು ಗಮನ ನೀಡಿ. ಈ ಮಗುವು ಸದ್ಯ ಆರೋಗ್ಯವಾಗಿದೆ ಎಂದು ಹೇಳಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:08 pm, Wed, 7 December 22

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್