AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಆಸ್ತಿ ಕಲಹಕ್ಕೆ ತಂಗಿಯ ಪ್ರಾಣ ತೆಗೆದ ಅಣ್ಣ; ಮತ್ತೊಂದೆಡೆ ಮದ್ಯದ ನಶೆಯಲ್ಲಿ ತನಗೆ ತಾನೇ ಚಾಕುವಿನಿಂದ ಇರಿದುಕೊಂಡು ಯುವಕ

ಬೆಂಗಳೂರಿನ ಜುನ್ನಸಂದ್ರದಲ್ಲಿ ಆಸ್ತಿ ವಿವಾದ ತಾರಕಕ್ಕೇರಿ ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಸಹೋದರಿ ಮೀನಾಕ್ಷಿ (39) ಅವರನ್ನು ಸಹೋದರ ಜಯರಾಮ್ ಬ್ಯಾಟ್‌ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ. ಬೆಳ್ಳಂದೂರು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಆಸ್ತಿಗಾಗಿ ನಡೆದ ಈ ಕೃತ್ಯದ ವಿವರಗಳು ಸಾರ್ವಜನಿಕರನ್ನು ಬೆಚ್ಚಿಬೀಳಿಸಿವೆ.

ಪ್ರತ್ಯೇಕ ಘಟನೆ: ಆಸ್ತಿ ಕಲಹಕ್ಕೆ ತಂಗಿಯ ಪ್ರಾಣ ತೆಗೆದ ಅಣ್ಣ; ಮತ್ತೊಂದೆಡೆ ಮದ್ಯದ ನಶೆಯಲ್ಲಿ ತನಗೆ ತಾನೇ ಚಾಕುವಿನಿಂದ ಇರಿದುಕೊಂಡು ಯುವಕ
ತಂಗಿಯ ಹತ್ಯೆ ಮಾಡಿದ ಅಣ್ಣ Image Credit source: Tv9 kannada
ಅಕ್ಷಯ್​ ಪಲ್ಲಮಜಲು​​
|

Updated on:Nov 25, 2026 | 4:33 PM

Share

ಬೆಂಗಳೂರು, ನ.25: ಆಸ್ತಿ ವಿಚಾರಕ್ಕಾಗಿ ಅಣ್ಣನೇ ತನ್ನ ಸ್ವಂತ ತಂಗಿಯನ್ನು ಬ್ಯಾಟ್‌ನಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಜುನ್ನಸಂದ್ರದಲ್ಲಿ ನಡೆದಿದೆ. ಮೀನಾಕ್ಷಿ (39) ಕೊಲೆಯಾದ ದುರ್ದೈವಿ ಮಹಿಳೆಯಾಗಿದ್ದು, ಆರೋಪಿ ಅಣ್ಣ ಜಯರಾಮ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಜುನ್ನಸಂದ್ರ ನಿವಾಸಿಗಳಾದ ಜಯರಾಮ್ ಮತ್ತು ತಂಗಿ ಮೀನಾಕ್ಷಿ ನಡುವೆ ಆಸ್ತಿ ವಿಚಾರವಾಗಿ ಜಗಳ ನಡೆದಿದೆ. ಈ ವೇಳೆ ಕೋಪಗೊಂಡ ಆರೋಪಿ ಜಯರಾಮ್, ತಂಗಿ ಮೀನಾಕ್ಷಿ ಮೇಲೆ ಬ್ಯಾಟ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದು, ತೀವ್ರ ಗಾಯಗೊಂಡ ಮೀನಾಕ್ಷಿ ಮೃತಪಟ್ಟಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಬೆಳ್ಳಂದೂರು ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಜಯರಾಮ್‌ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಮದ್ಯದ ಅಮಲಿನಲ್ಲಿ ಹೊಟ್ಟೆಗೆ ಚುಚ್ಚಿಕೊಂಡು ಕತ್ತು ಕೊಯ್ದುಕೊಂಡ ಯುವಕ

ಮದ್ಯದ ಅಮಲಿನಲ್ಲಿ ಯುವಕನೊಬ್ಬ ತನಗೆ ತಾನೇ ಹೊಟ್ಟೆಗೆ ಚಾಕುವಿನಿಂದ ಚುಚ್ಚಿಕೊಂಡು, ನಂತರ ಕತ್ತನ್ನೂ ಕೊಯ್ದುಕೊಂಡಿರುವ ಭಯಾನಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಾಂತಿನಗರದಲ್ಲಿ ನಡೆದಿದೆ. ಹೊರರಾಜ್ಯದ ಕೂಲಿ ಕಾರ್ಮಿಕ ಬಬ್ಲು (33) ಎಂಬಾತನೇ ಈ ಕೃತ್ಯ ಎಸಗಿಕೊಂಡಿದ್ದು, ಸದ್ಯ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಯುವಕನ ವರ್ತನೆಗೆ ಬೆಚ್ಚಿಬಿದ್ದ ಶಾಂತಿನಗರ ನಿವಾಸಿಗಳು

ಶಾಂತಿನಗರದಲ್ಲಿ ವಾಸವಿದ್ದ ಹೊರರಾಜ್ಯದ ಕೂಲಿ ಕಾರ್ಮಿಕ ಬಬ್ಲು, ಮದ್ಯದ ನಶೆಯಲ್ಲಿ ಏಕಾಏಕಿ ಚಾಕುವಿನಿಂದ ತನ್ನ ಹೊಟ್ಟೆಗೆ ಚುಚ್ಚಿಕೊಂಡಿದ್ದಾನೆ. ಅಷ್ಟಕ್ಕೇ ನಿಲ್ಲದೆ ಬಳಿಕ ತನ್ನ ಕತ್ತನ್ನೂ ಕೊಯ್ದುಕೊಂಡಿದ್ದು, ರಕ್ತದ ಮಡುವಿನಲ್ಲಿ ಬಿದ್ದು ನರಳಾಡಿದ್ದಾನೆ. ಯುವಕನ ಭೀಕರ ವರ್ತನೆಯನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದು ಆತಂಕಕ್ಕೊಳಗಾಗಿದ್ದಾರೆ. ತಕ್ಷಣವೇ ಸ್ಥಳೀಯರು ಆತನನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು, ಯುವಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕಾಫಿನಾಡಿನಲ್ಲಿ ಒಮ್ಮೆಲೆ ಕ್ಯಾಮರಾ ಕಣ್ಣಿಗೆ ಬಿದ್ದ 39 ಕಾಡಾನೆಗಳ ಹಿಂಡು: ಹೇಗಿದೆ ನೋಡಿ ?

ಜಮೀನು ವಿವಾದಕ್ಕೆ ವೃದ್ಧನ ಹತ್ಯೆ

ಜಮೀನು ವಿವಾದದ ಹಿನ್ನೆಲೆಯಲ್ಲಿ ತಮ್ಮನ ಮಕ್ಕಳೇ ವೃದ್ಧನೊಬ್ಬನನ್ನು ಮರದ ಕಟ್ಟಿಗೆಯಿಂದ ಹೊಡೆದು ಬರ್ಬರವಾಗಿ ಕೊಲೆಗೈದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಗ್ರಾಮದಲ್ಲಿ ನಡೆದಿದೆ. ಕ್ಯಾತಪ್ಪ ಕೊಲೆಯಾದ ವೃದ್ಧರಾಗಿದ್ದು, “ತಂದೆಗೆ ಗಂಡು ಮಕ್ಕಳಿಲ್ಲ, ಕೊಲೆ ಮಾಡಿ ಪರಾರಿಯಾಗಿರುವ ತಮ್ಮನ ಮಕ್ಕಳೇ ಬಂದು ಶವಕ್ಕೆ ಕೊಳ್ಳಿ ಇಡಬೇಕು” ಎಂದು ಮೃತ ಕ್ಯಾತಪ್ಪನ ಹೆಣ್ಣುಮಕ್ಕಳು ಶವದ ಮುಂದೆ ಕಣ್ಣೀರಿಡುತ್ತಾ ಪಟ್ಟು ಹಿಡಿದಿರುವ ಹೃದಯವಿದ್ರಾವಕ ದೃಶ್ಯ ಮನಕಲಕುವಂತಿದೆ. ದಿಬ್ಬೂರು ಗ್ರಾಮದ ಕ್ಯಾತಪ್ಪ ಹಾಗೂ ಅವರ ತಮ್ಮ ಬಾಲರಾಜ್ ಅಕ್ಕ-ಪಕ್ಕದ ಮನೆಯ ಸಂಬಂಧಿಗಳಾಗಿದ್ದು, ಇವರ ನಡುವೆ ಜಮೀನು ವಿವಾದವಿತ್ತು. ಇದೇ ದ್ವೇಷದಿಂದ ನಿನ್ನೆ (ನವೆಂಬರ್ 24) ಸಂಜೆ ಕ್ಯಾತಪ್ಪನ ತಮ್ಮ ಬಾಲರಾಜ್ ಅವರ ಮಕ್ಕಳಾದ ಶ್ರೀಕಾಂತ್, ಕೇಶವ ಹಾಗೂ ತರುಣ್ ಎಂಬುವವರು ಮರದ ಕಟ್ಟಿಗೆಯಿಂದ ಕ್ಯಾತಪ್ಪನ ಮೇಲೆ ಮನಬಂದಂತೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೃತ್ಯ ಎಸಗಿದ ಬಳಿಕ ಆರೋಪಿಗಳಾದ ಶ್ರೀಕಾಂತ್, ಕೇಶವ ಮತ್ತು ತರುಣ್ ಸ್ಥಳದಿಂದ ಪರಾರಿಯಾಗಿದ್ದಾರೆ. ತಂದೆ ಕ್ಯಾತಪ್ಪನ ಮೃತದೇಹವನ್ನು ನೋಡುತ್ತಿದ್ದಂತೆಯೇ ಪುತ್ರಿಯರಾದ ಮಾಲಾ ಕೆ. ಮತ್ತು ಮೇಘಶ್ರೀ ಕೆ. ಅವರ ಆಕ್ರಂದನ ಮುಗಿಲು ಮುಟ್ಟಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:32 pm, Wed, 25 November 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ
ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ
ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ
ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ
ಕಾರವಾರ: ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ
ಕಾರವಾರ: ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'
9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಫಾಸ್ಟ್‌ಟ್ರ್ಯಾಕ್‌ ನೇಮಕಾತಿ: ಸರ್ಕಾರಿ ಹುದ್ದೆಗಳ ಭರ್ತಿಗೆ ಹೊಸ ದಾರಿ
ಫಾಸ್ಟ್‌ಟ್ರ್ಯಾಕ್‌ ನೇಮಕಾತಿ: ಸರ್ಕಾರಿ ಹುದ್ದೆಗಳ ಭರ್ತಿಗೆ ಹೊಸ ದಾರಿ
ಹಾಸನಕ್ಕೆ ಕಾಲಿಟ್ಟ ‘ರಾಪಿಡೋ’; ಆಟೋ ಚಾಲಕರ ಆಕ್ರೋಶ, ಬೈಕ್ ಸವಾರನ ಕಣ್ಣೀರು!
ಹಾಸನಕ್ಕೆ ಕಾಲಿಟ್ಟ ‘ರಾಪಿಡೋ’; ಆಟೋ ಚಾಲಕರ ಆಕ್ರೋಶ, ಬೈಕ್ ಸವಾರನ ಕಣ್ಣೀರು!
ಬೆಂಗಳೂರಿನಲ್ಲಿ ದಿಲ್ಜಿತ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ
ಬೆಂಗಳೂರಿನಲ್ಲಿ ದಿಲ್ಜಿತ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ