AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರಿಗೆ ಜಿಬಿಎಯಿಂದ ಭರ್ಜರಿ ಶಾಕ್​​: ಹೆಚ್ಚುವರಿ ತೆರಿಗೆಗೆ ಬಿಜೆಪಿಗರು ಕೆಂಡ; ವಿಧಾನ ಸಭೆಯಲ್ಲೂ ಬಿಸಿ ಬಿಸಿ ಚರ್ಚೆ

ಬೆಂಗಳೂರಿನಲ್ಲಿ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ನಡೆಸಿದ ಡ್ರೋನ್ ಸರ್ವೆ ಬಳಿಕ ಹೊಸ ಹೆಚ್ಚುವರಿ ಆಸ್ತಿ ತೆರಿಗೆ ವಿಧಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಬಾಲ್ಕನಿ, ಟ್ಯಾಂಕ್ ಸೇರಿ ಮನೆಗಳ ಪೂರಕ ಕಟ್ಟಡಗಳಿಗೂ ತೆರಿಗೆ ವಿಧಿಸಿ ನೋಟಿಸ್ ನೀಡಲಾಗಿದೆ. ಬಿಜೆಪಿ ಶಾಸಕರು ಇದನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಡಿಸಿಎಂ ಡಿಕೆ ಶಿವಕುಮಾರ್, ಸಮಸ್ಯೆಯಿರುವವರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿರುವುದಾಗಿ ಹೇಳಿದ್ದಾರೆ.

ಬೆಂಗಳೂರಿಗರಿಗೆ ಜಿಬಿಎಯಿಂದ ಭರ್ಜರಿ ಶಾಕ್​​: ಹೆಚ್ಚುವರಿ ತೆರಿಗೆಗೆ ಬಿಜೆಪಿಗರು ಕೆಂಡ; ವಿಧಾನ ಸಭೆಯಲ್ಲೂ ಬಿಸಿ ಬಿಸಿ ಚರ್ಚೆ
ಗ್ರೇಟರ್​​ ಬೆಂಗಳೂರು ಪ್ರಾಧಿಕಾರImage Credit source: Google
Pramod Shastri G
| Edited By: |

Updated on: Mar 10, 2026 | 12:56 PM

Share

ಬೆಂಗಳೂರು, ಮಾರ್ಚ್​ 10: ತೆರಿಗೆ ವಸೂಲಿ ವಿಚಾರದಲ್ಲಿನ ಗ್ರೇಟರ್​​ ಬೆಂಗಳೂರು ಪ್ರಾಧಿಕಾರದ ನಡೆಯೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಡ್ರೋನ್ ಸರ್ವೆ ಮೂಲಕ ಹೆಚ್ಚುವರಿ ತೆರಿಗೆ ವಸೂಲಿಗೆ ಜಿಬಿಎ ಮುಂದಾಗಿದ್ದು, ಕಟ್ಟಡದ ಬಾಲ್ಕನಿ, ಕಿಟಿಕಿ ಮೇಲಿನ ಸಜ್ಜೆ, ವಾಟರ್ ಟ್ಯಾಂಕ್ ಸ್ಟ್ಯಾಂಡ್, ಕಾರ್ ಪಾರ್ಕಿಂಗ್, ಪೋರ್ಟಿಕೋ, ಮನೆ ಮುಂದಿನ ತಾತ್ಕಾಲಿಕ ಗಜಿಬೋ ಸೇರಿ ಮನೆಯ ಪೂರಕ ಕಟ್ಟಡಕ್ಕೂ ತೆರಿಗೆ ವಿಧಿಸಲಾಗಿದೆ. ಇದುವರೆಗೂ ಅಂದಾಜು 46 ಸಾವಿರ ಮನೆ ಮಾಲಿಕರಿಂದ ಟ್ಯಾಕ್ಸ್​​ ಸಂಗ್ರಹಕ್ಕೆ ಜಿಬಿಎ ಮುಂದಾಗಿದ್ದು, 5 ಲಕ್ಷದಿಂದ 18 ಲಕ್ಷದವರೆಗೂ ಹೆಚ್ಚವರಿ ತೆರಿಗೆ ವಸೂಲಿಗೆ ಮೆಸೇಜ್ ಮೂಲಕ ನೋಟಿಸ್ ನೀಡಿದೆ.

ಮೆಸೇಜ್ ಓಪನ್ ಮಾಡಿದ್ರೆ ನೋಟಿಸ್ ಸ್ವೀಕರಿಸಲಾಗಿದೆ ಎಂದೇ ಭಾವಿಸಿ ಕ್ರಮಕ್ಕೆ ಮುಂದಾಗಲಿರುವ ಜಿಬಿಎ ಹೆಚ್ಚುವರಿ ತೆರಿಗೆ ಪ್ರಶ್ನೆ ಮಾಡಿದವರ ಮನೆಯನ್ನೇ ಹರಾಜಿಗೆ ಮುಂದಾಗಿದೆ. 17 ಮನೆಗಳ ಹರಾಜು ಪ್ರಕ್ರಿಯೆಗೆ ಅಂತಿಮ ನೋಟಿಸ್ ನೀಡಲಾಗಿದ್ದು, ಐದು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 46 ಸಾವಿರ ಜನರಿಗೆ ನೋಟಿಸ್ ನೀಡಲಾಗಿರುವ ಜಿಬಿಎ ಕ್ರಮವನ್ನು ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಜಿಬಿಎಯ 5 ಪಾಲಿಕೆಗಳ ಚುನಾವಣೆ; ವಾರ್ಡ್ ವಾರು ಅಂತಿಮ ಮೀಸಲಾತಿ ಪ್ರಕಟ

ಜಿವಿಎ ನಡೆ ಬಗ್ಗೆ ವಿಧಾನಸಭೆಯಲ್ಲೂ ಚರ್ಚೆ

ಡ್ರೋನ್​​ ಸರ್ವೆ ನಡೆಸಿ ಬೆಂಗಳೂರಿನಲ್ಲಿ ಮನೆಗಳಿಗೆ ಬಾಕಿ ಹೆಚ್ಚುವರಿ ತೆರಿಗೆ, ದಂಡ ವಿಧಿಸಲಾಗುತ್ತಿದೆ. ಒಂದು ಮನೆಗೆ 7-8 ಲಕ್ಷ, 30 ಲಕ್ಷದವರೆಗೆ ತೆರಿಗೆ, ದಂಡ ಹಾಕ್ತಿದ್ದಾರೆ ಎಂದು ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಪ್ರಸ್ತಾಪಿಸಿದ್ದಾರೆ. ರಾಮಮೂರ್ತಿ ಹೇಳಿಕೆಗೆ ಧ್ವನಿಗೂಡಿಸಿದ ಶಾಸಕರ ಸುರೇಶ್ ಕುಮಾರ್,​​ ಇದು ಆಸ್ತಿ ತೆರಿಗೆ ಭಯೋತ್ಪಾದನೆ. ಇದನ್ನ ಹಿಂಪಡೆಯಿರಿ ಎಂದು ಆಗ್ರಹಿಸಿದ್ದಾರೆ. ಬಿಜೆಪಿ ಶಾಸಕರ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಉತ್ತರಿಸಿದ್ದು, ನಾವು ಡ್ರೋನ್​ ಸರ್ವೇ ನಡೆಸಿ  ಯಾವುದೇ ನೋಟಿಸ್ ಕೊಡ್ತಿಲ್ಲ. ಆದ್ರೆ ಡ್ರೋನ್​ ಮೂಲಕ ಮನೆಗಳ ಸರ್ವೆ ಕಾರ್ಯ ನಡೆಯುತ್ತಿದೆ. ಮೊದಲು ಸೆಲ್ಫ್ ಅಸೆಸ್‌ಮೆಂಟ್ ಸ್ಕೀಂ ತಂದವನು ನಾನು. ಒನ್ ಟೈಮ್ ಸೆಟ್ಲ್​ಮೆಂಟ್ ಸ್ಕೀಂ ಕೂಡಾ ಕೊಡುತ್ತಿದ್ದೇವೆ. ಈ ಬಗ್ಗೆ ಯಾರಿಗಾದ್ರೂ ಸಮಸ್ಯೆ ಇದ್ರೆ ಅರ್ಜಿ ಕೊಡಲಿ. ಸಮಸ್ಯೆ ಇದ್ದವರಿಗೆ ಸರಿಪಡಿಸ್ತೇವೆಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ