AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಸಿದ್ದರಾಮಯ್ಯಗೆ 10 ಸಾವಿರ ದಂಡ ವಿಧಿಸಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್​ ಸೂಚನೆ

ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ​​ಹೈಕೋರ್ಟ್ ವಜಾ ಮಾಡಿ, 10 ಸಾವಿರ ರೂ. ದಂಡ ವಿಧಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯಗೆ 10 ಸಾವಿರ ದಂಡ ವಿಧಿಸಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್​ ಸೂಚನೆ
ಸಿಎಂ ಸಿದ್ದರಾಮಯ್ಯಗೆ ದಂಡ ವಿಧಿಸಿದ ಹೈಕೋರ್ಟ್​
Ramesha M
| Edited By: |

Updated on:Feb 06, 2024 | 1:18 PM

Share

ಬೆಂಗಳೂರು, ಫೆಬ್ರವರಿ 06: ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸಲ್ಲಿಸಿದ್ದ ಅರ್ಜಿಯನ್ನು ​​ಹೈಕೋರ್ಟ್ (High Court)​ ವಜಾ ಮಾಡಿ, 10 ಸಾವಿರ ರೂ. ದಂಡ ವಿಧಿಸಿದೆ. ಹಾಗೆ ಮಾರ್ಚ್ 6 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ.

ಮಾರ್ಚ್ 7 ರಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ​ ರಣದೀಪ್ ಸುರ್ಜೇವಾಲಾ, ಮಾರ್ಚ್ 11 ರಂದು ಸಚಿವ ಎಂ.ಬಿ.ಪಾಟೀಲ್, ಮಾರ್ಚ್ 15 ರಂದು ಸಚಿವ ರಾಮಲಿಂಗಾರೆಡ್ಡಿ ಅವರು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.

ಅನಗತ್ಯವಾಗಿ ಪಿಎಸ್ಐ ಕು.ಜಹಿದಾ ಪ್ರತಿವಾದಿಯಾಗಿಸಿದ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮತ್ತಿತರರಿಗೆ ನ್ಯಾಯಾಲಯ 10 ಸಾವಿರ ದಂಡ ವಿಧಿಸಿದೆ.

ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವವರೆಗೆ ಆದೇಶವನ್ನು ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದರು. ಆದರೆ, ನ್ಯಾಯಾಲಯ ಮನವಿಯನ್ನು ತಿರಸ್ಕರಿಸಿತು.

ಇದನ್ನೂ ಓದಿ: 2023ರ ವಿಧಾನಸಭಾ ಚುನಾವಣೆ ವೇಳೆ‌ ಮತದಾರರಿಗೆ ಆಮಿಷ ಆರೋಪ: ಹೈಕೋರ್ಟ್ ಮೆಟ್ಟಿಲೇರಿದ ನಿಖಿಲ್ ಕುಮಾರಸ್ವಾಮಿ

ಜನಪ್ರತಿನಿಧಿಗಳು ಕಾನೂನು ಪಾಲಿಸಿದರೆ ಜನ ಪಾಲಿಸುತ್ತಾರೆ. ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರೆ ಜನರಿಗೆ ಕಷ್ಟವಾಗುತ್ತದೆ. ಸಿಟಿ ಲೈಫ್ ಈಸ್ ಟಾರ್ಚರ್,‌ ಪ್ರತಿಭಟನೆಗಳಿಂದ‌ ಜನರಿಗೆ ಮತ್ತಷ್ಟು ತೊಂದರೆಯಾಗುತ್ತದೆ. ಜನಪ್ರತಿನಿಧಿಯಾದ ಕಾರಣಕ್ಕೆ ರಸ್ತೆ ಅಡ್ಡಗಟ್ಟುವುದನ್ನು ಒಪ್ಪಲು ಸಾಧ್ಯವಿಲ್ಲ. ಜನ ನಾಯಕರಾದವರು ಮೊದಲು ಕಾನೂನು ಪಾಲಿಸಬೇಕು ಎಂದು ನ್ಯಾಯಾಲಯ ಚಾಟಿ ಬೀಸಿದೆ.

ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ, ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಅವರ ರಾಜಿನಾಮೆ ಆಗ್ರಹಿಸಿ 2022ರ ಏಪ್ರಿಲ್ 14 ರಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಸಿದ್ದರಾಮಯ್ಯ, ಸಚಿವ ಎಂಬಿ ಪಾಟೀಲ್​ ಸೇರಿದಂತೆ ಕಾಂಗ್ರೆಸ್​ನ ನಾಯಕರು ಮತ್ತು ಕಾರ್ಯಕರ್ತರು ಬೃಹತ್​ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಸ್ತೆ ತಡೆ ಉಂಟಾಗಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ಜನಸಾಮಾನ್ಯರ ಸಂಚಾರಕ್ಕೆ ತೊಂದರೆಯುಂಟಾಗಿತ್ತು. ಹೀಗಾಗಿ ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದಾರೆ ಎಂದು ಆರೋಪಿಸಿ ಆಗಿನ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:16 pm, Tue, 6 February 24

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!