AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ: ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್​ಗೆ ಎದುರಾಯ್ತು ಸಂಕಷ್ಟ

ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ರಾಜಕೀಯ ಮತ್ತು ಕಾನೂನು ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಎನ್ಎ ಹ್ಯಾರಿಸ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆ ಹೈಕೋರ್ಟ್ ನಿರ್ದೇಶನ ಉಲ್ಲಂಘಿಸಿದೆ ಎಂಬ ಆರೋಪವಿದೆ. ಫ್ರೀಡಂ ಪಾರ್ಕ್ ಹೊರತಾಗಿ ಬೇರೆಡೆ ಪ್ರತಿಭಟನೆ ನಡೆಸಿದ್ದರಿಂದ ಶಾಸಕರ ವಿರುದ್ಧ ದೂರು ದಾಖಲಾಗಿದೆ.

ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ: ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್​ಗೆ ಎದುರಾಯ್ತು ಸಂಕಷ್ಟ
ಅಲಿ ಖಮೇನಿ & ಎನ್ಎ ಹ್ಯಾರಿಸ್Image Credit source: TV9 Network
ಗಣಪತಿ ಶರ್ಮಾ
|

Updated on: Mar 05, 2026 | 11:55 AM

Share

ಬೆಂಗಳೂರು, ಮಾರ್ಚ್​ 5: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ali Khamenei) ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ವಿಚಾರ ಇದೀಗ ರಾಜಕೀಯ ಹಾಗೂ ಕಾನೂನು ವಿವಾದಕ್ಕೆ ಕಾರಣವಾಗಿದೆ. ಹೈಕೋರ್ಟ್ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂಬ ಆರೋಪದ ಹಿನ್ನೆಲೆ ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ (Congress) ಶಾಸಕ ಎನ್ಎ ಹ್ಯಾರಿಸ್ (NA Harris) ವಿರುದ್ಧ ದೂರು ಸಲ್ಲಿಕೆಯಾಗಿದೆ. ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಕೆಲವು ಸಂಘಟನೆಗಳು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದವು. ಆದರೆ, ಈ ವೇಳೆ ಹೈಕೋರ್ಟ್ ನಿರ್ದೇಶನ ಉಲ್ಲಂಘಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಸಾರ್ವಜನಿಕ ಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್‌ನಲ್ಲೇ ನಡೆಸಬೇಕು ಎಂದು ಹೈಕೋರ್ಟ್ ನಿರ್ದೇಶನ ಇದೆ. ಅದರ ಹೊರತಾಗಿ ಬೇರೆ ಸ್ಥಳದಲ್ಲಿ ಪ್ರತಿಭಟನೆ ನಡೆದಿರುವುದು ವಿವಾದಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ತೇಜಸ್ ಗೌಡ ಶಾಸಕ ಎನ್ಎ ಹ್ಯಾರಿಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಡಿಜಿ ಹಾಗೂ ಐಜಿಪಿಗೆ ದೂರು ಸಲ್ಲಿಸಿದ್ದಾರೆ. ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಪ್ರತಿಭಟನೆ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಕುರಿತು ಪೊಲೀಸರು ಈಗಾಗಲೇ ಹೈಕೋರ್ಟ್ ಗಮನಕ್ಕೆ ತಂದಿದ್ದಾರೆ. ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಅಶೋಕ್ ನಗರ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ದೂರು ಸಲ್ಲಿಸಿರುವುದಾಗಿ ತಿಳಿದುಬಂದಿದೆ. ಘಟನೆಯ ಬಗ್ಗೆ ಕಾನೂನು ಪ್ರಕಾರ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ವಿಚಾರ ರಾಜಕೀಯವಾಗಿ ಮತ್ತಷ್ಟು ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.

ಖಮೇನಿ ಹತ್ಯೆ ಖಂಡಿಸಿ ಭಾರತದ ಹಲವೆಡೆ ಮುಸ್ಲಿಮರು ಪ್ರತಿಭಟನೆಗಳನ್ನು ನಡೆಸಿದ್ದಾರೆ. ಕರ್ನಾಟಕದಲ್ಲಿಯೂ ಚಿಕ್ಕಬಳ್ಳಾಪುರದ ಅಲೀಪುರ, ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಅಮೆರಿಕದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಭಾರತದಿಂದ ತೆರಳುತ್ತಿದ್ದ ಇರಾನ್ ಯುದ್ಧನೌಕೆಯ ಮುಳುಗಿಸಿದ ಅಮೆರಿಕ: ಸಾವಿನ ಸಂಖ್ಯೆ 87ಕ್ಕೆ ಏರಿಕೆ

ಮತ್ತೊಂದೆಡೆ ಇರಾನ್-ಇಸ್ರೇಲ್ ಸಂಘರ್ಷ ತೀವ್ರಗೊಂಡಿದ್ದು, ಸಾವಿರಕ್ಕೂ ಹೆಚ್ಚು ಮಂದಿ ಹತರಾಗಿದ್ದಾರೆ. ಬುಧವಾರವಷ್ಟೇ ಶ್ರೀಲಂಕಾ ವ್ಯಾಪ್ತಿಯಲ್ಲಿ ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯನ್ನು ಅಮೆರಿಕದ ಸಬ್​ಮರೀನ್ ಮುಳುಗಿಸಿದ ಪರಿಣಾಮ 87ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ