AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಜೊತೆ ಅನುಚಿತ ವರ್ತನೆ ಆರೋಪ ಕೇಸ್: ಪಿಎಸ್‌ಐ ಮಂಜುನಾಥ್ ಅಮಾನತು, FIR ದಾಖಲು

ಮಹಿಳೆ ಜೊತೆ ಅನುಚಿತ ವರ್ತನೆ ಆರೋಪ ಕೇಸ್​ಗೆ ಸಂಬಂಧಿಸಿದಂತೆ ಸುದ್ದಗುಂಟೆಪಾಳ್ಯ ಠಾಣೆಯ ಪಿಎಸ್‌ಐ ಮಂಜುನಾಥ್‌ ವಿರುದ್ಧ FIR ದಾಖಲು ಮಾಡಿದ್ದು, ಜೊತೆಗೆ ಅಮಾನತು ಮಾಡಲಾಗಿದೆ.

ಮಹಿಳೆ ಜೊತೆ ಅನುಚಿತ ವರ್ತನೆ ಆರೋಪ ಕೇಸ್: ಪಿಎಸ್‌ಐ ಮಂಜುನಾಥ್ ಅಮಾನತು, FIR ದಾಖಲು
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Apr 12, 2023 | 7:11 PM

Share

ಬೆಂಗಳೂರು: ಮಹಿಳೆ ಜೊತೆ ಅನುಚಿತ ವರ್ತನೆ ಆರೋಪ ಕೇಸ್​ಗೆ ಸಂಬಂಧಿಸಿದಂತೆ ಸುದ್ದಗುಂಟೆಪಾಳ್ಯ ಠಾಣೆಯ ಪಿಎಸ್‌ಐ ಮಂಜುನಾಥ್‌ ವಿರುದ್ಧ FIR ದಾಖಲು ಮಾಡಿದ್ದು, ಜೊತೆಗೆ ಅಮಾನತು ಮಾಡಲಾಗಿದೆ. ಬೆಂಗಳೂರಿನ ಆಗ್ನೇಯ ವಿಭಾಗದ ಡಿಸಿಪಿಯಾಗಿರುವ ಸಿ.ಕೆ.ಬಾಬಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅನುಚಿತ ವರ್ತನೆ ಮಾಡಿದ್ದಾರೆಂದು ಏ.10ರಂದು ಮಹಿಳೆ ಟ್ವೀಟ್‌ ಮಾಡಿದ್ದರು. ಬಳಿಕ ಪಿಎಸ್‌ಐ ಮಂಜುನಾಥ್‌ ವಿರುದ್ಧ ದೂರು ಸಹ ನೀಡಿದ್ದರು. ಈ ಕುರಿತಾಗಿ ಮಾತನಾಡಿದ ಡಿಸಿಪಿ ಸಿ.ಕೆ.ಬಾಬಾ,  ನಮ್ಮ ಕಚೇರಿಯಿಂದ ಮಹಿಳೆಯನ್ನು ಸಂಪರ್ಕ ಮಾಡಿದ್ದೆವು. ಎಫ್‌ಐಆರ್ ದಾಖಲಿಸಲು ಲಿಖಿತ ದೂರು ನೀಡಬೇಕೆಂದು ಹೇಳಿದ್ದೆವು. ನಿನ್ನೆ ಸಂಜೆ ಕಚೇರಿಗೆ ಬಂದು ಲಿಖಿತ ರೂಪದಲ್ಲಿ ದೂರು ನೀಡಿದ್ದಾರೆ. ದೂರು ಆಧರಿಸಿ ಸುದ್ದಗುಂಟೆಪಾಳ್ಯ ಠಾಣೆಯಲ್ಲಿ FIR ದಾಖಲಾಗಿದೆ ಎಂದು ಹೇಳಿದರು.

ಐಪಿಸಿ ಸೆಕ್ಷನ್‌ 354A, 354Dರಡಿ ಎಫ್‌ಐಆರ್​ ದಾಖಲಿಸಿದ್ದು, ಪ್ರಕರಣದ ಬಗ್ಗೆ ಸತ್ಯಾಂಶ ತಿಳಿಯಲು ತನಿಖೆ ನಡೆಸಲಾಗುತ್ತಿದೆ. ಹಿರಿಯ ಅಧಿಕಾರಿಗಳಿಗೆ ತನಿಖೆಯ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ತಿಳಿಸಿದರು.‘

ಘಟನೆ ಹಿನ್ನೆಲೆ

ವರದಕ್ಷಿಣೆ ಪ್ರಕರಣದಲ್ಲಿ ಹೇಳಿಕೆ ನೀಡಲು ಹೋಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಕೇಳಿಬಂದಿತ್ತು. ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ ಸ್ವಾಮಿ ಅವರು ಮೈ ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಮಹಿಳೆ ಗಂಭೀರ ಆರೋಪ ಮಾಡಿದ್ದರು. ಅಲ್ಲದೇ ವಾಟ್ಸಾಪ್ ಮೆಸೇಜ್ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆ ಸರಣಿ ಟ್ವೀಟ್​ ಮೂಲಕ ಬೆಂಗಳೂರು ನಗರ ಪೊಲೀಸ್​ ಆಯುಕ್ತರಿಗೆ ಟ್ಯಾಗ್ ಮಾಡಿ ಅಳಲುತೋಡಿಕೊಂಡಿದ್ದರು.

ಇದನ್ನೂ ಓದಿ: ಹೇಳಿಕೆ ಪಡೆಯುವ ನೆಪದಲ್ಲಿ ಮೈ ಕೈ ಮುಟ್ಟಿ ಅನುಚಿತವಾಗಿ ವರ್ತನೆ: ಸುದ್ದಗುಂಟೆಪಾಳ್ಯ ಪೊಲೀಸ್ ಇನ್ಸ್​ಪೆಕ್ಟರ್​ ವಿರುದ್ಧ ಮಹಿಳೆ ಗಂಭೀರ ಆರೋಪ

ಏಪ್ರಿಲ್ 8ರಂದು ನನ್ನ ಸಹೋದರ ಸ್ನೇಹಿತನ  ವರದಕ್ಷಿಣೆ ಪ್ರಕರಣದಲ್ಲಿ ಸಾಕ್ಷಿ ಹೇಳಿಕೆ ನೀಡಲು ಠಾಣೆಗೆ ಹೋಗಿದ್ದ ವೇಳೆ ಸಬ್​ ಇನ್ಸ್​ ಪೆಕ್ಟರ್ ಮಂಜುನಾಥ ಸ್ವಾಮಿ ಅವರು ​ನನ್ನ ಮೈ ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾರೆ. ಅಲ್ಲದೇ ಮನೆಗೆ ಹೋಗಿ ಕರೆ ಮಾಡಿ ಹಾಗೂ ನಿಮ್ಮ ಪೋಟೊಗಳನ್ನ ಕಳುಹಿಸಿ ಎಂದಿದ್ದಾರೆ ಎಂದು  ಶೀತಲ್​ ಸುಸಾನ ಅಬ್ರಹಾಂ ಎನ್ನುವ ಮಹಿಳೆ ಟ್ವಿಟ್ಟರ್​ನಲ್ಲಿ ಆರೋಪಿಸಿದ್ದರು. ಅಲ್ಲದೇ ವಾಟ್ಸಾಪ್ ಮೆಸೇಜ್ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆ ಟ್ವಿಟ್ಟರ್​ನಲ್ಲಿ ಹೇಳಿಕೊಂಡಿದ್ದರು. ಮಹಿಳೆಯ ಟ್ವೀಟ್​ಗೆ ಬೆಂಗಳೂರು ನಗರ ಪೊಲೀಸ್​, ಪ್ರತಿಕ್ರಿಯಿಸಿ ಈ ಬಗ್ಗೆ ಸಂಪೂರ್ಣ ಮಾಹಿತಿ ಕೇಳಿದ್ದರು.

ಟ್ವೀಟ್​ನಲ್ಲಿ ಏನಿದೆ?

ವಿಚ್ಛೇದನ ಪ್ರಕರಣಕ್ಕೆ ಸಾಕ್ಷಿ ಹೇಳಿಕೆ ನೀಡಲು ನಾನು ಪೊಲೀಸ್ ಠಾಣೆಗೆ ಹೋಗಿದ್ದೆ, ಅದು ನನ್ನ ಸ್ನೇಹಿತನ ಸಹೋದರನಿಗಾಗಿ. ಪೊಲೀಸ್ ಠಾಣೆಯಲ್ಲಿ ನಾನು ಹೇಳಿಕೆ ನೀಡಲು ಸಬ್​ ಇನ್ಸ್​ಪೆಕ್ಟರ್​ ಜತೆ ಮಾತನಾಡಬೇಕಿತ್ತು. ಆರಂಭದಲ್ಲಿ ಆತ ತುಂಬಾ ಸ್ನೇಹಪರನಾಗಿದ್ದರು. ಆದರೆ, ನಂತರ ಅವರ ನಿಜವಾದ ಬಣ್ಣಗಳು ಹೊರಹೊಮ್ಮಲು ಪ್ರಾರಂಭಿಸಿದವು ಮತ್ತು ಪರಿಸ್ಥಿತಿ ತುಂಬಾ ಅಹಿತಕರವಾಗಲು ಪ್ರಾರಂಭಿಸಿತು. ನನ್ನೊಂದಿಗೆ ಚೆಲ್ಲಾಟವಾಡಲು ಪ್ರಾರಂಭಿಸಿದರು.

ವಿಚಾರಣೆ ಸಮಯದಲ್ಲಿ ನನ್ನ ಕೈಯನ್ನು ಹಿಡಿದು ಮುದ್ದಿಸಲು ಪ್ರಾರಂಭಿಸಿದರು. ನಾನು ಭಯಭೀತಳಾದೆ. ಮೊದಲು ನನ್ನ ಹೇಳಿಕೆಯನ್ನು ಪೂರ್ಣಗೊಳಿಸೋಣ ಎಂದು ಭಯದಿಂದ ಸುಮ್ಮನಾದೆ. ಹೇಳಿಕೆಯನ್ನು ಕೊಟ್ಟ ಬಳಿಕ ಆತ ತನ್ನ ಮೊಬೈಲ್​ ನಂಬರ್ ತೆಗೆದಿಟ್ಟು ಕರೆ ಮಾಡಲು ಕೇಳಿದರು ಎಂದು ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:11 pm, Wed, 12 April 23