AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಮುಂದಿನ 3 ಗಂಟೆ ಭಾರಿ ಮಳೆ ಮುನ್ಸೂಚನೆ!; ಯಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು, ಕೋಲಾರ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಐಪಿಎಲ್ ಫೈನಲ್ ಪಂದ್ಯದ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಆತಂಕವಿದ್ದು, ವಿದ್ಯುತ್ ವ್ಯತ್ಯಯ, ಸಂಚಾರ ದಟ್ಟಣೆ, ಮರಗಳು ಉರುಳುವ ಸಾಧ್ಯತೆಯಿದೆ. ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಜನರಿಗೆ ಸೂಚಿಸಲಾಗಿದೆ.

ಬೆಂಗಳೂರಿಗೆ ಮುಂದಿನ 3 ಗಂಟೆ ಭಾರಿ ಮಳೆ ಮುನ್ಸೂಚನೆ!; ಯಲ್ಲೋ ಅಲರ್ಟ್ ಘೋಷಣೆ!
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: May 31, 2026 | 7:45 PM

Share

ಬೆಂಗಳೂರು,ಮೇ.31: ಸಿಲಿಕಾನ್ ಸಿಟಿಯಲ್ಲಿ ಐಪಿಎಲ್ ಮಹಾಸಮರದ ಕ್ರೇಜ್ ತುತ್ತತುದಿಗೆ ತಲುಪಿರುವ ಬೆನ್ನಲ್ಲೇ, ರಾಜಧಾನಿ ಜನತೆಗೆ ಹವಾಮಾನ ಇಲಾಖೆ ಬಿಗ್ ಶಾಕ್ ನೀಡಿದೆ. ಬೆಂಗಳೂರು ನಗರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ಹವಾಮಾನ ಇಲಾಖೆಯ ಲೇಟೆಸ್ಟ್ ಬುಲೆಟಿನ್ ಪ್ರಕಾರ, ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ ಹಾಗೂ ನೆರೆಯ ಕೋಲಾರ ಜಿಲ್ಲೆಗಳಲ್ಲಿ ಬಿರುಗಾಳಿ ಮತ್ತು ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಮೂರೂ ಜಿಲ್ಲೆಗಳಿಗೆ ತಕ್ಷಣದಿಂದಲೇ ಅನ್ವಯವಾಗುವಂತೆ ‘ಯಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಇವತ್ತು ರಾತ್ರಿ ಐಪಿಎಲ್ ಫೈನಲ್ ಪಂದ್ಯದ ಸಂಭ್ರಮಾಚರಣೆಗಾಗಿ ಎಂ.ಜಿ. ರೋಡ್, ಅಡುಗೋಡಿ ಹಾಗೂ ಸ್ಟೇಡಿಯಂ ಸುತ್ತಮುತ್ತ ಜನ ಜಮಾಯಿಸುತ್ತಿರುವ ಹೊತ್ತಿನಲ್ಲೇ ಈ ಮಳೆ ಮುನ್ಸೂಚನೆ ಬಂದಿರುವುದು ಅಭಿಮಾನಿಗಳಲ್ಲಿ ಮತ್ತು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಮುಂದಿನ 3 ಗಂಟೆಗಳ ಕಾಲ ಅನಿವಾರ್ಯ ಕೆಲಸಗಳಿದ್ದರೆ ಮಾತ್ರ ರಸ್ತೆಗಿಳಿಯುವಂತೆ ಮತ್ತು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಹವಾಮಾನ ತಜ್ಞರು ಸೂಚಿಸಿದ್ದಾರೆ.

ಯಾವೆಲ್ಲಾ ಪರಿಣಾಮಗಳು ಎದುರಾಗಬಹುದು?:

ವಿದ್ಯುತ್ ವ್ಯತ್ಯಯ: ನಗರದ ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ಸಂಪರ್ಕ ಕಡಿತಗೊಳ್ಳಬಹುದು.

ಸಂಚಾರ ದಟ್ಟಣೆ: ದಿಢೀರ್ ಮಳೆಯಿಂದಾಗಿ ರಸ್ತೆಗಳಲ್ಲಿ ಸಣ್ಣಪುಟ್ಟ ಸಂಚಾರ ದಟ್ಟಣೆ (Traffic Snarls) ಉಂಟಾಗಬಹುದು.

ಮರಗಳು ಉರುಳುವ ಭೀತಿ: ಬಿರುಗಾಳಿಯ ತೀವ್ರತೆಗೆ ದುರ್ಬಲ ಹಾಗೂ ಒಣಗಿದ ಮರದ ಕೊಂಬೆಗಳು ಮುರಿದು ಬೀಳುವ ಸಾಧ್ಯತೆಯಿದೆ.

ಬೆಳೆಗಳಿಗೆ ಹಾನಿ: ಬಯಲು ಪ್ರದೇಶದಲ್ಲಿ ಕೊಯ್ಲು ಮಾಡಿ ಇಟ್ಟಿರುವ ಬೆಳೆಗಳಿಗೆ ಹಾನಿಯಾಗಬಹುದು.

ಇದನ್ನೂ ಓದಿ: ಬೆಂಗಳೂರು ಜಂಗಲ್ ರಾಜ್‌ ಆಗಿ ಬದಲಾಗುತ್ತಿದೆ?: ಶಾಲೆಯ ಮುಂದೆಯೇ ಲಾಂಗ್ ಬೀಸಿದ ಪುಂಡರು!; ವಿಡಿಯೋ ವೈರಲ್!

ಹವಾಮಾನ ಇಲಾಖೆ ಸೂಚಿಸಿರುವ ಪ್ರಮುಖ ಸುರಕ್ಷತಾ ಕ್ರಮಗಳು:

ಮನೆಯೊಳಗೇ ಇರಿ: ಮಳೆ ಮತ್ತು ಗಾಳಿ ಇರುವಾಗ ಮನೆಯೊಳಗೆ ಇರಿ, ಕಿಟಕಿ ಹಾಗೂ ಬಾಗಿಲುಗಳನ್ನು ಕಡ್ಡಾಯವಾಗಿ ಮುಚ್ಚಿ. ಸಾಧ್ಯವಾದಷ್ಟು ಪ್ರಯಾಣ ಮಾಡುವುದನ್ನು ತಪ್ಪಿಸಿ.

ಮರಗಳ ಕೆಳಗೆ ಆಶ್ರಯ ಬೇಡ: ಬಿರುಗಾಳಿ ಬೀಸುವಾಗ ಯಾವುದೇ ಕಾರಣಕ್ಕೂ ಮರಗಳ ಕೆಳಗೆ ಅಥವಾ ಕಾಂಕ್ರೀಟ್ ಗೋಡೆಗಳ ಪಕ್ಕದಲ್ಲಿ ನಿಲ್ಲಬೇಡಿ.

ಪ್ಲಗ್‌ಗಳನ್ನು ಅನ್‌ಪ್ಲಗ್ ಮಾಡಿ: ಗುಡುಗು-ಮಿಂಚಿನ ಸಂದರ್ಭದಲ್ಲಿ ಮನೆಯಲ್ಲಿರುವ ಇಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳ ಪ್ಲಗ್‌ಗಳನ್ನು ತಕ್ಷಣವೇ ಕಡಿತಗೊಳಿಸಿ (Unplug).

ನೀರಿನಿಂದ ಹೊರಬನ್ನಿ: ಕೆರೆ, ಕುಂಟೆ ಅಥವಾ ಯಾವುದೇ ನೀರಿನ ಜಲಮೂಲಗಳ ಬಳಿ ಇದ್ದರೆ ತಕ್ಷಣವೇ ಅಲ್ಲಿಂದ ಹೊರಗೆ ಬನ್ನಿ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’