Bengaluru Rain: ಬೆಂಗಳೂರಿನಲ್ಲಿ ಮಳೆ ಅವಾಂತರ, ಬೋರ್ ಬ್ಯಾಂಕ್ ರಸ್ತೆ ಕುಸಿತ

ಕಳೆದ ಮೂರ್ನಾಲ್ಕು ದಿನಗಳಿಂದ ಆಗುತ್ತಿರುವ ಮಳೆಗೆ ಸಿಲಿಕಾನ್ ಸಿಟಿ ಮಂದಿ ಫುಲ್ ಖುಷ್​ ಆಗಿದ್ದಾರೆ. ಬಿಸಿಲಿನಿಂದ ಬಸವಳಿದಿದ್ದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಅದರಂತೆ ಇಂದು ಕೂಡ ಗಾಳಿ ಸಹಿತ 5 ಮೀ.ಮೀ ಮಳೆಯಾಗಿದೆ(Bengaluru Rain). ನಗರದ ಮೆಜೆಸ್ಟಿಕ್, ಮಾರ್ಕೆಟ್, ಕಾರ್ಪೊರೇಷನ್ ಸರ್ಕಲ್, ಗುಟ್ಟಹಳ್ಳಿ, ವಿಧಾನ ಸೌಧ ಸೇರಿದಂತೆ ಭರ್ಜರಿ ಮಳೆಯಾಗಿದ್ದು, ಕೆಲವೆಡೆ ಮಳೆ ಅವಾಂತರಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ.

Bengaluru Rain: ಬೆಂಗಳೂರಿನಲ್ಲಿ ಮಳೆ ಅವಾಂತರ, ಬೋರ್ ಬ್ಯಾಂಕ್ ರಸ್ತೆ ಕುಸಿತ
ಬೆಂಗಳೂರಿನಲ್ಲಿ ಮಳೆಯ ಅವಾಂತರ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: May 08, 2024 | 9:54 PM

ಬೆಂಗಳೂರು, ಮೇ.08: ಬಿರು ಬಿಸಿಲಿಗೆ ಕಂಗಾಲಾಗಿದ್ದ ಸಿಲಿಕಾನ್ ಸಿಟಿ ಮಂದಿ ಕಳೆದ ಮೂರ್ನಾಲ್ಕು ದಿನಗಳಿಂದ ಆಗುತ್ತಿರುವ ಮಳೆಗೆ ಸಂತಸಗೊಂಡಿದ್ದಾರೆ. ಅದರಂತೆ ಇಂದು ಕೂಡ ಗಾಳಿ ಸಹಿತ 5 ಮೀ.ಮೀ ಮಳೆಯಾಗಿದೆ(Bengaluru Rain). ನಗರದ ಮೆಜೆಸ್ಟಿಕ್, ಮಾರ್ಕೆಟ್, ಕಾರ್ಪೊರೇಷನ್ ಸರ್ಕಲ್, ಗುಟ್ಟಹಳ್ಳಿ, ವಿಧಾನ ಸೌಧ, ಕೆ ಆರ್ ಸರ್ಕಲ್, ಶಾಂತಿ ನಗರ, ಎಂ ಜಿ ರಸ್ತೆ ಸೇರಿದಂತೆ ವಿವಿಧೆಡೆ ಅಬ್ಬರದ ಮಳೆಯಾಗಿದೆ. ಜೊತೆಗೆ ಕೆಲವೆಡೆ ಮಳೆ ಅವಾಂತರಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನಲೆ ಹವಾಮಾನ ಇಲಾಖೆ ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಮಳೆಗೆ ಎಲ್ಲೆಲ್ಲಿ ಏನೇನಾಯ್ತು?

ಎನ್​ಸಿ ಕಾಲೋನಿಯ ಬೋರ್ ಬ್ಯಾಂಕ್ ರಸ್ತೆ ಕುಸಿತ

ಇನ್ನು ಬಿರುಗಾಳಿ ಸಹಿತ ಮಳೆಗೆ ನಗರದ ಎನ್​ಸಿ ಕಾಲೋನಿಯ ಬೋರ್ ಬ್ಯಾಂಕ್ ರಸ್ತೆ ಕುಸಿತವಾಗಿದೆ. ಹೌದು, ಮೇಟ್ರೋ ಕಾಮಗಾರಿ, ಪಕ್ಕದಲ್ಲೆ ರೇಲ್ವೆ ಲೈನ್ ಹಾಗೂ ರಾಜಕಾಲುವೆ ಮಾರ್ಗ ಇದ್ದು, ಮಳೆ ಪರಿಣಾಮ‌ ರಸ್ತೆ ಕುಸಿದಿದೆ. ಈ ಮಾರ್ಗ ಟ್ಯಾನಿ ರಸ್ತೆ, ಪ್ರೆಸರ್ ಟೌನ್, ನಂದಿ ದುರ್ಗ, ಹಾಗೂ ಪಾಟರ್ ಟೌನ್​ಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿತ್ತು. ಆದರೆ, ರಸ್ತೆ ಕುಸಿತ ಪರಿಣಾಮದಿಂದ ಎರಡು ಕಡೆ ರಸ್ತೆ ಬಂದ್ ಆಗಿದ್ದು, ಸಧ್ಯ ಪರ್ಯಾಯ ಮಾರ್ಗವಾಗಿ ಸಾರ್ವಜನಿಕರು ಓಡಾಟ ಆರಂಭಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಬಿಡು ಬಿಟ್ಟಿದ್ದಾರೆ.

ಇದನ್ನೂ ಓದಿ:ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಅಲಿಕಲ್ಲು ಸಮೇತ ಜೋರು ಮಳೆ, ರೈತರಲ್ಲಿ ಸಂತಸ

ಮರದ ಜೊತೆಗೆ ವಿದ್ಯುತ್​ ಕಂಬ ಮುರಿದುಬಿದ್ದು ಆಟೋ ಜಖಂ

ಬೆಂಗಳೂರಿನ ವಸಂತನಗರದ ತಿಮ್ಮಯ್ಯ ರಸ್ತೆಯಲ್ಲಿ ಮರದ ಜೊತೆಗೆ ವಿದ್ಯುತ್​ ಕಂಬ ಕೂಡ ಮುರಿದುಬಿದ್ದು ಆಟೋವೊಂದು ಸಂಪೂರ್ಣ ಜಖಂಗೊಂಡಿದೆ. ರಸ್ತೆಯಲ್ಲಿ ತೆರಳುತ್ತಿದ್ದ ಆಟೋ ಮೇಲೆ ವಿದ್ಯುತ್ ಕಂಬ ಬಿದ್ದಿದ್ದು, ಆಟೋ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿ ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಸ್ಥಳಕ್ಕಾಗಮಿಸಿದ ಬೆಸ್ಕಾಂ, ಬಿಬಿಎಂಪಿ ಸಿಬ್ಬಂದಿಗಳು ಮರ ತೆರವು ಕಾರ್ಯ ಮಾಡಿದ್ದಾರೆ.

ಧಾರಾಕಾರ ಮಳೆ ಗಾಳಿಗೆ ನೆಲಮಂಗಲದಲ್ಲಿ ಅವಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಸಂಜೆ ಸುರಿದ ಧಾರಾಕಾರ ಮಳೆ-ಗಾಳಿಗೆ ಅವಾಂತರವೇ ಸೃಷ್ಟಿಯಾಗಿದೆ. ರೈತ ಶ್ರೀನಿವಾಸ್ ಮತ್ತು ರಾಜಕುಮಾರ್ ಎಂಬುವವರ ತೋಟದಲ್ಲಿ ಮಳೆಯಿಂದಾಗಿ ಹಾನಿಯಾಗಿದ್ದು, ಬಿರುಗಾಳಿ ಸಹಿತ ಮಳೆಗೆ ಅಡಿಕೆ ಮತ್ತು ಬಾಳೆ ಗಿಡಗಳು ಮುರಿದು ಬಿದ್ದಿದೆ.

ನಾಯಂಡಹಳ್ಳಿ ಮುಖ್ತರಸ್ತೆ ಜಲಾವೃತ

ಮುಕ್ಕಾಲುಗಂಟೆ ಬಂದ ಮಳೆಗೆ ರಾಜಾಧಾನಿ ಅದ್ವಾನವಾಗಿದ್ದು, ನಾಯಂಡಹಳ್ಳಿ ಮುಖ್ತರಸ್ತೆ ಸಂಫೂರ್ಣ ಜಲಾವೃತವಾಗಿದ್ದು, ರಸ್ತೆ ಜಲಾವೃತವಾಗಿ ವಾಹನಸವಾರರು ಪರದಾಟ ನಡೆಸುವಂತಾಗಿದೆ. ಮಂಡಿಯುದ್ದಕ್ಕೆ ನಿಂತಿರುವ ಮಳೆ ನೀರಲ್ಲಿಯೇ ಸಂಚರಿಸುವ ದುಸ್ಥಿತಿ ಎದುರಾಗಿದೆ.

ಇದನ್ನೂ ಓದಿ: ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ ಜೋರು, ಯೆಲ್ಲೋ ಅಲರ್ಟ್​

ಬೆನ್ನಿಗಾನಹಳ್ಳಿ ರೈಲ್ವೆ ಬ್ರಿಡ್ಜ್ ಕೆಳಗೆ ನಿಂತಿರುವ ಮಳೆ ನೀರು

ಇನ್ನು ಮೆಜೆಸ್ಟಿಕ್, ಮಾರ್ಕೆಟ್, ಕಾರ್ಪೊರೇಷನ್ ಸರ್ಕಲ್, ಗುಟ್ಟಹಳ್ಳಿ, ವಿಧಾನ ಸೌಧ ಸುತ್ತ ಮುತ್ತ ಮಳೆಯಿಂದ ಕೆಲಸ ಮುಗಿಸಿ ಮನೆ ಕಡೆ ಹೊರಟ ವಾಹನ ಸವಾರರು ಪರದಾಟ ನಡೆಸಿದ್ದು, ಬೆನ್ನಿಗಾನಹಳ್ಳಿ ರೈಲ್ವೆ ಬ್ರಿಡ್ಜ್ ಕೆಳಗೆ ಮಳೆ ನೀರು ನಿಂತಿದೆ. ಈ ಹಿನ್ನಲೆ ಮಳೆ ನೀರಿನಿಂದಾಗಿ ವಾಹನ ಸವಾರರಿಗೂ ಭಾರಿ‌ ಸಮಸ್ಯೆ ಉಂಟಾಗಿದೆ. ಜೊತೆಗೆ ಟ್ರಾಫಿಕ್​ ಸಮಸ್ಯೆ ಎದುರಾಗಿದೆ.

ರಾಜಧಾನಿಯ ಕೆಲ ರಸ್ತೆಗಳು ಜಲಾವೃತ

ಮಳೆಗೆ ಕೆಲ ರಸ್ತೆಗಳು ಕೆರೆಯಂತಾಗಿದೆ. ಪುಲಿಕೇಶಿ ನಗರ, ಕೆ.ಆರ್. ಮಾರ್ಕೆಟ್, ಕನಕಪುರ ರಸ್ತೆ,  ಸದಾಶಿವನಗರ, ಹೆಬ್ಬಾಳ, ಅರಮನೆ ಮೈದಾನ, ಮಲ್ಲೇಶ್ವರಂ, ಶಿವಾನಂದ ಸರ್ಕಲ್,‌ ಮಂತ್ರಿ ಮಾಲ್, ವಿಧಾನಸೌಧ, ರೇಸ್ ಕೋರ್ಸ್, ಆನಂದ್ ರಾವ್ ಸರ್ಕಲ್ ಬಳಿಯೂ ಜೋರು ಮಳೆಯಾಗಿದ್ದು, ರಸ್ತೆಯಲ್ಲಿ ಮಂಡಿಯುದ್ದಕ್ಕೆ ನೀರು ಹರಿಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ